ಬೆಂಗಳೂರು : ಕೋವಿಡ್ ಮೂರನೇ ಅಲೆಯ ಭೀತಿ ಹಿನ್ನೆಲೆ ಬೆಂಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮುಜರಾಯಿ ಇಲಾಖೆ ಹಾಗೂ ಖಾಸಗಿ ದೇವಾಲಯಗಳಲ್ಲಿ ಶ್ರಾವಣ ಮಾಸದ ವಾರಾಂತ್ಯ ದಿನಗಳು ಹಾಗೂ ಸಾರ್ವತ್ರಿಕ ರಜಾ ದಿನಗಳಲ್ಲಿ ಸಾರ್ವಜನಿಕರ ದೇವಾಲಯ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ.
ಈ ಹಿಂದೆ ಜುಲೈ 27ರಂದು ದೇವಸ್ಥಾನಗಳಲ್ಲಿ ನಿತ್ಯದ ಸೇವೆ, ಪೂಜೆಗಳನ್ನು ನಡೆಸಲು ಸೂಚಿಸಿ ಹಬ್ಬ, ಮೆರವಣಿಗೆ, ಧಾರ್ಮಿಕ ಸಭೆಗಳಿಗೆ ಮಾತ್ರ ನಿಷೇಧ ಹೇರಲಾಗಿತ್ತು.
ಓದಿ: ಅರೇ ಬಾಪ್ ರೇ! ಹೆಲ್ಮೆಟ್ ಹಾಕಿಲ್ಲವೆಂದು ಕಾರ್ ಡ್ರೈವರ್ಗೆ ಸಾವಿರ ರೂ. ದಂಡ!
ಆ.09 ರಿಂದ ಸೆ.07ರವರೆಗೆ ಶ್ರಾವಣ ಮಾಸದ ಹಿನ್ನೆಲೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಭಕ್ತರು ಆಗಮಿಸಲಿದ್ದು, ಕೋವಿಡ್ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ, ದೇವಾಲಯಗಳಲ್ಲಿ ದೈನಂದಿನ ಪೂಜೆ, ಸೇವೆ ಹೊರತುಪಡಿಸಿ ಶ್ರಾವಣ ಮಾಸದ ಶನಿವಾರ, ಭಾನುವಾರ, ಸಾರ್ವತ್ರಿಕ ರಜಾ ದಿನಗಳಂದು ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ.