ಬೆಂಗಳೂರು: ಭೂಗತ ಜಗತ್ತಿನ ನಂಟು ಹೊಂದಿದ್ದ ಬನ್ನಂಜೆ ರಾಜ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದ ಮನೀಶ್ ಶೆಟ್ಟಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾನೆ.
ಬಿಗ್ರೇಡ್ ರಸ್ತೆಯ ಲೇಡಿಸ್ ಬಾರ್ ಮಾಲೀಕನಾಗಿದ್ದ ಮನೀಶ್ ಶೆಟ್ಟಿ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿ, ಚಾಕುವಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಕೆಲವರು ಮನೀಶ್ನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದರು.
ಆಸ್ಪತ್ರೆಗೆ ದಾಖಲಿಸಿದ್ರೂ ಸಹ ಮನೀಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2007ರಲ್ಲಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚೆಮ್ಮನೂರು ಜ್ಯೂವೆಲ್ಲರಿ ಶಾಪ್ ರಾಬರಿ ಪ್ರಕರಣದಲ್ಲಿ ಮನೀಶ್ ಭಾಗಿಯಾಗಿದ್ದ. ಮಂಗಳೂರು ಮತ್ತು ಮುಂಬೈ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿವೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.