ETV Bharat / state

ಯತ್ನಾಳ್- ಎಂ.ಪಿ.ರೇಣುಕಾಚಾರ್ಯ ದಿಢೀರ್​​ ಭೇಟಿ: ಒಂದೂವರೆ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ!

author img

By

Published : Jan 20, 2022, 5:25 PM IST

Updated : Jan 20, 2022, 6:52 PM IST

ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಅವರ ಕಚೇರಿಯಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಉಭಯ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Basanagowda Patil Yatnal and MP Renuka Acharya meet
ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ.ರೇಣುಕಾಚಾರ್ಯ ದಿಢೀರ್​​ ಭೇಟಿ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಅವರ ಕಚೇರಿಯಲ್ಲಿ ಇಂದು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಉಭಯ ನಾಯಕರು ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದರು.

ಮೂಲಗಳ ಪ್ರಕಾರ, ಸಚಿವ ಸಂಪುಟ ಪುನಾರಚನೆ ಹಾಗೂ ಸಚಿವರಲ್ಲಿ ಕೆಲವರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ಕಲ್ಪಿಸಲು ಪಕ್ಷದ ಮುಖಂಡರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಬೇಕೆಂಬ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ 2006 , 2008ರಿಂದ 2013 ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿರುವ ಹಿರಿಯರನ್ನು ಕೈ ಬಿಟ್ಟು ಪಕ್ಷ ನಿಷ್ಠರಿಗೆ ಮಂತ್ರಿ ಆಗುವ ಅವಕಾಶ ಕಲ್ಪಿಸುವ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಗೊತ್ತಾಗಿದೆ.

ಪಕ್ಷ ನಿಷ್ಠರು, ಹೊಸಬರಿಗೆ ಅವಕಾಶ ಕೊಟ್ಟರೆ ಒಳ್ಳೆಯದು: ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಸಚಿವರಾಗಿರುವವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಬೇಕು. ಗುಜರಾತ್‍ನಂತೆ ಮುಖ್ಯಮಂತ್ರಿ ಹೊರತುಪಡಿಸಿ ಇಡೀ ಸಂಪುಟವನ್ನೇ ಬದಲಾಯಿಸಿ ಪಕ್ಷ ನಿಷ್ಠರು ಹಾಗೂ ಹೊಸಬರಿಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗುತ್ತದೆ. ಈ ಬಗ್ಗೆ ಪಕ್ಷದ ಪ್ರಮುಖರ ಗಮನಕ್ಕೆ ತರಬೇಕೆಂದು ಉಭಯ ನಾಯಕರು ಪರಸ್ಪರ ಚರ್ಚೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ಕೆಲವು ಸಚಿವರು, ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡುವುದಿಲ್ಲ. ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಕುಂಟು ನೆಪ ಹೇಳುತ್ತಾರೆ. ಅಧಿಕಾರಕ್ಕಾಗಿಯೇ ಬಂದಿರುವವರನ್ನು ಮುಲಾಜಿಲ್ಲದೆ ಕಿತ್ತು ಹಾಕಬೇಕು. ಸರ್ಕಾರಕ್ಕೂ ಮತ್ತು ಸಂಘಟನೆಗೆ ಇವರ ಕೊಡುಗೆಯೂ ಅಷ್ಟಕ್ಕಷ್ಟೇ. ಇಂತಹವರಿಗೆ ಕೊಕ್ ನೀಡಲು ಮುಖ್ಯಮಂತ್ರಿಗೆ ಮನವಿ ಮಾಡಬೇಕೆಂಬ ತೀರ್ಮಾನಕ್ಕೂ ಸಹ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆಲವು ಸಚಿವರ ಅತಿಯಾದ ವರ್ತನೆಯಿಂದಲೇ ಇತ್ತೀಚೆಗೆ ನಡೆದ ಉಪಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ. ಪಕ್ಷ ನಿಷ್ಠರನ್ನು ಕಡೆಗಾಣಿಸಿದರ ಪರಿಣಾಮ ಕಾರ್ಯಕರ್ತರೂ ಸಹ ಬೇಸರಗೊಂಡಿದ್ದಾರೆ. ಕೆಲವರು ಸಂಪುಟದಲ್ಲಿ ಇರುವುದು ಪಕ್ಷ ಮತ್ತು ಸರ್ಕಾರದ ದೃಷ್ಟಿಯಿಂದ ಒಳ್ಳೆಯದಲ್ಲ. ತಕ್ಷಣವೇ ಬದಲಾವಣೆ ಮಾಡಲು ಪಕ್ಷದ ಮುಖಂಡರಿಗೂ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಚಿವ ಸಂಪುಟ ಪುನರಾಚರನೆಗೂ ಸಂಬಂಧವೇ ಇಲ್ಲ. ಸದ್ಯದಲ್ಲಿ ಬಿಬಿಎಂಪಿ, ನಂತರ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ಜರುಗಲಿವೆ. ಪದೇ ಪದೇ ವಿಳಂಬ ಮಾಡುವುದರಿಂದ ಸಂಘಟನೆಗೆ ಹಿನ್ನೆಡೆಯಾಗಿದೆ. ಇದು ಚುನಾವಣೆ ವರ್ಷವಾಗಿರುವುದರಿಂದ ಪಕ್ಷ ನಿಷ್ಠ ಹಾಗೂ ಹೊಸಬರಿಗೆ ಅವಕಾಶ ಮಾಡಿಕೊಡಲು ಪಕ್ಷದ ಪ್ರಮುಖರಿಗೆ ಮನವಿ ಮಾಡಬೇಕೆಂದು ಚರ್ಚಿಸಿರುವುದಾಗಿ ತಿಳಿದುಬಂದಿದೆ.

ಎಂ.ಪಿ. ರೇಣುಕಾಚಾರ್ಯ ಮಂತ್ರಿಯಾಗಲಿ: ಯತ್ನಾಳ್

ರಹಸ್ಯ ಮಾತುಕತೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಮೊದಲು ಕೊರೊನಾ ಸಮರ್ಥವಾಗಿ ಎದುರಿಸಬೇಕು. ಸಚಿವ ಸಂಪುಟ ರಚನೆಯಲ್ಲಿ ಅವಕಾಶ ಸಿಗುವ ಬಗ್ಗೆ ನಾನು ಏನು ಹೇಳಲು ಆಗುವುದಿಲ್ಲ ಎಂದು ಸೂಚ್ಯವಾಗಿ ಪ್ರತಿಕ್ರಿಯಿಸಿದರು. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ಮೇಲೆ ಆಗುತ್ತದೆಯೋ ಅಥವಾ ಅದಕ್ಕಿಂತ ಮೊದಲೇ ಆಗುತ್ತದೆ ನೋಡೋಣ. ಆದರೆ ಒಳ್ಳೆಯ ಬೆಳವಣಿಗೆ ಆಗುತ್ತದೆ ಎಂದರು. ನಮ್ಮ ಸ್ನೇಹಿತರು ಹಾಗೂ ಆತ್ಮೀಯರು ಆಗಿರುವ ಎಂ.ಪಿ. ರೇಣುಕಾಚಾರ್ಯ ಮಂತ್ರಿಯಾಗಲಿ ಎಂದು ಆಶೀರ್ವಾದ ಮಾಡುತ್ತೇನೆ. ಅವರು ಯಾರಾದರೂ ನಾಯಕತ್ವ ಒಪ್ಪಿಕೊಂಡರೆ ಅವರ ನಾಯತ್ವದಲ್ಲಿ ಇರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ನೈಟ್, ವೀಕೆಂಡ್ ಕರ್ಫ್ಯೂ ಸಂಬಂಧ ನಾಳೆ ತೀರ್ಮಾನ : ಸಚಿವ ಅಶೋಕ್

ಪಕ್ಷದ ಹೈಕಮಾಂಡ್ ಯಾವ ರೀತಿ ಬದಲಾವಣೆ ಮಾಡುತ್ತದೆ ಎಂಬುದನ್ನು ಕಾದು ನೋಡೋಣ. ಗುಜರಾತ್ ಮಾದರಿಯಲ್ಲಿ ಮಾಡುತ್ತೋ ಅಥವಾ ಕರ್ನಾಟಕಕ್ಕೆ ಬೇರೆ ಮಾದರಿಯೋ ಗೊತ್ತಿಲ್ಲ. ಸಚಿವ ಸಂಪುಟ ಪುನರಚನೆ, ಇನ್ನು 15 ದಿನಗಳಲ್ಲಿ ಆದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಮಾರ್ಚ್ ತಿಂಗಳ ನಂತರ ಸಚಿವ ಸಂಪುಟ ರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಯತ್ನಾಳ್ ಅವರು, ಅವಾಗ ಆದರೆ ಏನು ಉಪಯೋಗ ಇಲ್ಲ. ಮಾಡುವುದಾದರೆ ಇವಾಗಲೇ ಮಾಡಲಿ. ಕೊನೆ ಪಕ್ಷ ಒಂದು ವರ್ಷ ಇದ್ದಾಗ ಮಾಡಿದರೆ, ಪರಿಣಾಮಕಾರಿಯಾಗಿ ಅಭಿವೃದ್ಧಿ ಮಾಡಬಹುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಅಥವಾ ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ನಾಯಕತ್ವ ಒಪ್ಪಿಕೊಂಡಿದ್ದೀರಾ ಎಂಬ ಪ್ರಶ್ನೆಗೆ ಅವರು ಬಿಜೆಪಿ ನಾಯಕತ್ವ ಒಪ್ಪಿಕೊಂಡಿದ್ದೇವೆ ಎಂದರು.

ನಮ್ಮದು ಆಕಸ್ಮಿಕ ಸೌಜನ್ಯದ ಭೇಟಿ: ರೇಣುಕಾಚಾರ್ಯ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ನಮ್ಮದು ಆಕಸ್ಮಿಕ ಸೌಜನ್ಯದ ಭೇಟಿ, ಮುಂದೆ ರಾಜ್ಯದಲ್ಲಿ ಬಿಜೆಪಿ ಅಕಾರಕ್ಕೆ ಬರಬೇಕು ಎನ್ನುವ ಸದುದ್ದೇಶದಿಂದ ಮಾತುಕತೆ ನಡೆಸಿದ್ದೇವೆ. ಪಾದಯಾತ್ರೆಯ ಮೂಲಕ ಅಕಾರಕ್ಕೆ ಬಂದ್ದೇವೆ ಅನ್ನುವ ಹಾಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದಾರೆ. ಅವರ ವೇಗವನ್ನು ತಡೆಯಲು ಮಾತುಕತೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದರು.

ಸಂಪುಟ ಪುನರಚನೆ ಬಗ್ಗೆ ಪ್ರತಿಕ್ರಿಯಿಸಿ, ಈ ಸಭೆ ಯಾರ ವಿರುದ್ಧವೂ ನಡೆಸಿಲ್ಲ. ನಮಗೆ ವೈಯಕ್ತಿಕವಾಗಿ ಯಾರ ಮೇಲೂ ಆಕ್ರೋಶವೂ ಇಲ್ಲ. ಸಂಘಟನೆ ಹಾಗೂ ಸರ್ಕಾರಕ್ಕೆ ಯಾರು ಒಳ್ಳೆಯ ಕೆಲಸ ಮಾಡಿದರೋ ಅವರನ್ನು ಮುಂದುವರೆಸುವುದು ಒಳ್ಳೆಯದು ಎಂದರು.

ಪದೇ ಪದೇ ಅಧಿಕಾರ ವಹಿಸಿಕೊಂಡವರನ್ನು ಹಾಗೂ ಸ್ವಾರ್ಥಕೋರರನ್ನು ಕೈ ಬಿಡಬೇಕು, ನಾವು ಯಾರ ಹೆಸರನ್ನೂ ಕೂಡ ಹೇಳುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ರಾಷ್ಟ್ರೀಯ ನಾಯಕರ ಭೇಟಿ:

ಅಗತ್ಯವಿದ್ದರೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತೇವೆ. ಜೊತೆಗೆ ಸಿಎಂ ಬಸವರಾಜಬೊಮ್ಮಾಯಿ ಅವರ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಇದರಲ್ಲಿ ನಮಗೆ ಯಾವ ಸಂಕೋಚವೂ ಇಲ್ಲ. ಮುಂದಿನ ಬಾರಿ ಬಿಜೆಪಿ ದೇಶ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂಬುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಪಕ್ಷದಲ್ಲಿರುವ ಎಲ್ಲಾ ಶಾಸಕರು ಮಾತನಾಡಲು ಆಗುತ್ತಿಲ್ಲ. ಇದನ್ನು ಅನೇಕರು ನಮ್ಮ ಬಳಿ ಹೇಳಿದ್ದಾರೆ. ಹೀಗಾಗಿ ನಾವಿಬ್ಬರು ಸಚಿವ ಸಂಪುಟದ ಬಗ್ಗೆ ಮಾತಾಡಿದ್ದೇವೆ. ಬಿಜೆಪಿಯಲ್ಲಿ ಸಹಿ ತೆಗೆದುಕೊಳ್ಳುವ ಸಂಸ್ಕೃತಿ ಇಲ್ಲ ಎಂದು ರೇಣುಕಾಚಾರ್ಯ ಅವರು ಸ್ಪಷ್ಟಪಡಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಬಸನಗೌಡ ಪಾಟೀಲ್ ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿ, ಅವರು ಈ ಹಿಂದೆ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅಂತಹವರು ಸಂಪುಟದಲ್ಲಿ ಇರಬೇಕೆಂಬುದು ನನ್ನ ಆಸೆ. ಅವರು ಮಂತ್ರಿಯಾಗಲಿ ಅಂತ ಶುಭಕೋರುತ್ತೇನೆ, ಕಾಲ ಬಂದರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದರು. ಮಾರ್ಚ್ ತಿಂಗಳು ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನರಚನೆ ಆಗಿ ಮಂತ್ರಿ ಸ್ಥಾನ ಕೊಟ್ಟರೆ ಅಭಿವೃದ್ಧಿ ಕಾರ್ಯಗಳು ಆಗುವುದಿಲ್ಲ. ಸರ್ಕಾರ ಮತ್ತು ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಒಳ್ಳೆ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Last Updated : Jan 20, 2022, 6:52 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.