ETV Bharat / state

ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಬಸವಕಲ್ಯಾಣ ಟಿಕೆಟ್ ಆಕಾಂಕ್ಷಿ ಖೂಬಾ - ಬಸವಕಲ್ಯಾಣ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಖೂಬಾ

ಬಸವಕಲ್ಯಾಣದಲ್ಲಿ ಉಪ ಚುನಾವಣಾ ಕಾವು ಶುರುವಾಗಿದೆ. ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೇವೆ. ಚುನಾವಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷ ನನ್ನ ಕೈಬಿಡುವುದಿಲ್ಲ ಎನ್ನುವ ನಂಬಿಕೆ ಇದೆ ಎಂದು ಉಪಚುನಾವಣೆಯ ಟಿಕೆಟ್​ ಆಕಾಂಕ್ಷಿ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.

Basavakalyana By-Election
ಮಲ್ಲಿಕಾರ್ಜುನ ಖೂಬಾ
author img

By

Published : Nov 23, 2020, 12:48 PM IST

ಬೆಂಗಳೂರು: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿದೆ. ಪಕ್ಷ ನನ್ನ ಕೈಬಿಡುವುದಿಲ್ಲ ಎನ್ನುವ ನಂಬಿಕೆ ನನಗೆ ಇದೆ ಎಂದು ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಖೂಬಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಬಸವಕಲ್ಯಾಣ ಟಿಕೆಟ್ ಆಕಾಂಕ್ಷಿ ಆಗಿರುವ ಮಲ್ಲಿಕಾರ್ಜುನ ಖೂಬಾ ಭೇಟಿ ನೀಡಿದರು. ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಿದರು. ಟಿಕೆಟ್ ನೀಡುವಂತೆ ಮನವಿ ಮಾಡಿದರು ಎನ್ನಲಾಗ್ತಿದೆ.

ಬಸವಕಲ್ಯಾಣ ಬೈ ಎಲೆಕ್ಷನ್: ರಾಜ್ಯಾಧ್ಯಕ್ಷರ ಭೇಟಿಯಾದ ಬಿಜೆಪಿ ಟಿಕೆಟ್ ಆಕಾಂಕ್ಷಿ ಖೂಬಾ...!

ಕಟೀಲ್ ಭೇಟಿ ನಂತರ ಮಾಧ್ಯಮವದರೊಂದಿಗೆ ಮಾತನಾಡಿದ ಖೂಬಾ, ಬಸವಕಲ್ಯಾಣದಲ್ಲಿ ಉಪ ಚುನಾವಣಾ ಕಾವು ಶುರುವಾಗಿದೆ. ಕಳೆದ ಬಾರಿ ಜನತಾ ದಳದಿಂದ ಶಾಸಕನಾಗಿ ಆಯ್ಕೆಯಾಗಿದ್ದ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದೆ. ಆದರೆ 2018ರ ಚುನಾವಣೆಯಲ್ಲಿ ಸೋತೆ. ಈಗ ನಮ್ಮ ಕ್ಷೇತ್ರದ ಶಾಸಕರು ನಿಧನರಾದ ಕಾರಣ ಉಪಚುನಾವಣೆ ಬರುತ್ತಿದೆ. ಕಳೆದ ಬಾರಿ ಜೆಡಿಎಸ್​ಗೆ ರಾಜೀನಾಮೆ ಕೊಟ್ಟು ಬಂದಿದ್ದೆ. ಆಗ ನನಗೆ ಬಿಜೆಪಿ ಟಿಕೆಟ್ ನೀಡಿದ್ದರು, ಈಗಲೂ ಕೈ ಕೈಬಿಡುವುದಿಲ್ಲ ಎಂದು ನಂಬಿದ್ದೇನೆ ಎಂದರು.

ನಾನು ಯಾವುದೇ ಆಸೆಯಿಂದ ಪಕ್ಷಕ್ಕೆ ಬಂದವನಲ್ಲ, ಅಭಿವೃದ್ಧಿಗೋಸ್ಕರ, ಕಲ್ಯಾಣ ಕರ್ನಾಟಕಕ್ಕೆ ಒಳ್ಳೆಯ ಅಭಿವೃದ್ಧಿ ಆಗಬೇಕು ಎಂದು ಬಂದಿದ್ದೇನೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರಾಜ್ಯವನ್ನು ಅಭಿವೃದ್ಧಿ ಮಾಡಬೇಕು, ಶರಣರ ನಾಡು ಅಭಿವೃದ್ಧಿ ಮಾಡಬೇಕು ಎಂದು ಪಕ್ಷಕ್ಕೆ ಸೇರಿದ್ದೇನೆ. ಹಾಗಾಗಿ ಈ ಬಾರಿಯೂ ನನ್ನ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಕ್ಷೇತ್ರದಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಎಲ್ಲರೂ ಕೂಡ ಟಿಕೆಟ್ ಕೇಳಬೇಕು. ಆದರೆ ಯಾರಿಗೆ ಹೆಚ್ಚಿನ ಜನ ಬೆಂಬಲ ಇರಲಿದೆಯೋ ಅದನ್ನು ನೋಡಿ ಅವರಿಗೆ ಅವಕಾಶ ಕಲ್ಪಿಸಬೇಕು. ಎರಡು ಬಾರಿ ಗೆದ್ದಿದ್ದೇನೆ, ಎರಡು ಬಾರಿ ಸೋತಿದ್ದೇನೆ‌. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನ್ನ ಕೈಬಿಡುವುದಿಲ್ಲ, ಜನರೂ ನನ್ನ ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದರು.

ಬಸವಕಲ್ಯಾಣದ ಎಲ್ಲ ನಾಯಕರು ಬಂದು ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೇವೆ. ಚುನಾವಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಜೆಪಿಯನ್ನು ಗೆಲ್ಲಿಸುವ ಕುರಿತು ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಖೂಬಾ ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.