ETV Bharat / state

'ಕಮಲ' ಬಿಟ್ಟು 'ಕೈ' ಹಿಡಿದ ಬಸವನಗೌಡ ತುರುವಿಹಾಳ, ಸೋಮವಾರ ಅಧಿಕೃತ ಸೇರ್ಪಡೆ ಸಮಾರಂಭ

author img

By

Published : Nov 7, 2020, 10:28 PM IST

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಈ ಮೂಲಕ ಖಚಿತವಾಗಿದೆ. ನಾಳೆ ಸೇರ್ಪಡೆಯಾಗಬೇಕಿದ್ದ ತುರುವಿಹಾಳ ತರಾತುರಿಯಲ್ಲಿ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸೇರ್ಪಡೆಗೂ ಮುನ್ನ ಕಾಡಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೂಡ ಸಲ್ಲಿಸಿದ್ದಾರೆ.

Basavanagouda turavihala_Join_Congress today news
'ಕಮಲ' ಬಿಟ್ಟು 'ಕೈ' ಹಿಡಿದ ಬಸವನಗೌಡ ತುರುವಿಹಾಳ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ, ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಸವನಗೌಡ ತುರುವಿಹಾಳ ಇಂದು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.

ಕಮಲ' ಬಿಟ್ಟು 'ಕೈ' ಹಿಡಿದ ಬಸವನಗೌಡ ತುರುವಿಹಾಳ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಬಸವನಗೌಡ ತುರುವಿಹಾಳ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಡಿಕೆಶಿ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಕೈ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ರಾಯಚೂರು ಭಾಗದ ಕಾಂಗ್ರೆಸ್ ನಾಯಕರು ಇಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ತುರುವಿಹಾಳ ಸೇರ್ಪಡೆಗೆ ಅಂತಿಮ ಹಂತದ ಮಾತುಕತೆ ಪೂರ್ಣಗೊಳಿಸಿದ್ದರು. ಪಕ್ಷಕ್ಕೆ ಬರಮಾಡಿಕೊಳ್ಳುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿನ್ನೆ ಯಶಸ್ವಿ ಮಾತುಕತೆ ನಡೆಸಿದ್ದರು. ಒಟ್ಟಾರೆ ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮತಿ ಮೇರೆಗೆ ಬಸವನಗೌಡ ತುರುವಿಹಾಳ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಂಬಂಧ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚಿಸಿದ್ದ ಬಸನಗೌಡ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನ ನಡೆಸಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಿದ್ದಾರೆ. ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಈ ಮೂಲಕ ಖಚಿತವಾಗಿದೆ. ನಾಳೆ ಸೇರ್ಪಡೆಯಾಗಬೇಕಿದ್ದ ತುರುವಿಹಾಳ ತರಾತುರಿಯಲ್ಲಿ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸೇರ್ಪಡೆಗೂ ಮುನ್ನ ಕಾಡಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೂಡ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಭೇಟಿ:

ಕಾಂಗ್ರೆಸ್ ಸೇರ್ಪಡೆಯಾಗಿರುವ ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಮುಖಂಡ ಬಸವನಗೌಡ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. 2018ರ ಚುನಾವಣೆಯಲ್ಲಿ ತುರುವಿಹಾಳ ಅವರು 213 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಅಧಿಕೃತ ಸೇರ್ಪಡೆ ಸಮಾರಂಭ ಸೋಮವಾರ ಬೆಂಗಳೂರಿನಲ್ಲಿ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.