ETV Bharat / state

ಶ್ರೀಶೈಲದಲ್ಲಿ ಕನ್ನಡಿಗರು -ಸ್ಥಳೀಯರ ನಡುವೆ ಘರ್ಷಣೆ: ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಿಎಂ

ಆಂಧ್ರದ ಶ್ರೀಶೈಲಂನಲ್ಲಿ ಸ್ಥಳೀಯರು ಮತ್ತು ಭಕ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಭೆ ಕೊನೆಗೆ ಸಂಘರ್ಷಕ್ಕೆ ತಿರುಗಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
author img

By

Published : Mar 31, 2022, 2:29 PM IST

ಬೆಂಗಳೂರು : ಆಂಧ್ರದ ಶ್ರೀಶೈಲಂನಲ್ಲಿ ನಡೆದ ಘರ್ಷಣೆ ವೇಳೆ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಾನು ಈಗಾಗಲೇ ಆಂಧ್ರಪ್ರದೇಶದ ಅಧಿಕಾರಿಗಳ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಈಗಾಗಲೇ ಆಂಧ್ರಪ್ರದೇಶದ ಅಧಿಕಾರಿಗಳ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಸ್ಥಳೀಯರು ಮತ್ತು ಭಕ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಭೆ, ಕೊನೆಗೆ ಸಂಘರ್ಷಕ್ಕೆ ತಿರುಗಿ ಓರ್ವ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ ರೆಡ್ಡಿ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳುಹಿಸದಂತೆ ಎಲ್ಲರೂ ಎಚ್ಚರ ವಹಿಸಬೇಕಾದ ಅಗತ್ಯವಿದೆ. ಶ್ರೀಶೈಲಕ್ಕೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ದೊಡ್ಡ ಮಟ್ಟದಲ್ಲಿ ಭಕ್ತರು ಸೇರುತ್ತಾರೆ. ಭಕ್ತರು ಬಂದಾಗ ಇಂತಹ ಘಟನೆಗಳು ನಡೆಯಬಾರದು. ಏನೇ ಸಣ್ಣಪುಟ್ಟ ಗೊಂದಲಗಳಿದ್ದರೂ ನಾವೆಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂದರು.

ರಾಜ್ಯದಲ್ಲಿ ಪ್ರತಿಯೊಬ್ಬರೂ ಶಾಂತಿ, ಸುವ್ಯವಸ್ಥೆ ಕಾಪಾಡಿ ಸಂಯಮದಿಂದ ವರ್ತಿಸಬೇಕು. ಕರ್ನಾಟಕ ಶಾಂತಿ, ಸೌಹಾರ್ದತೆ, ಸಹೋದರತ್ವಕ್ಕೆ ಹೆಸರುವಾಸಿಯಾದ ರಾಜ್ಯ. ಪ್ರತಿಯೊಬ್ಬರೂ ಕಾನೂನಿಗೆ ಗೌರವ ಕೊಟ್ಟು ಶಾಂತಿಯಿಂದ ವರ್ತಿಸಬೇಕು. ಯಾರೊಬ್ಬರು ಗೊಂದಲಗಳನ್ನು ಸೃಷ್ಟಿಸಬಾರದು ಎಂದು ಹೇಳಿದರು.

ಕಿರಣ್ ಮಜುಂದಾರ್ ಷಾ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕರ್ನಾಟಕ ಮೊದಲಿನಿಂದಲೂ ಶಾಂತಿಪ್ರಿಯ ನಾಡು. ಅನೇಕ ವಿಷಯಗಳಲ್ಲಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಅದನ್ನು ಕಾಪಾಡಿ, ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿ. ಕಾನೂನು ಸುವ್ಯವಸ್ಥೆಗೆ ಯಾರೊಬ್ಬರು ಧಕ್ಕೆ ಉಂಟು ಮಾಡಬಾರದು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಪ್ರಸ್ತುತ ಹಲವಾರು ಸಮಸ್ಯೆಗಳಿವೆ. ಹಿಜಾಬ್‍ನಿಂದ ಉಂಟಾಗಿದ್ದ ಸಂಘರ್ಷ ಕೊನೆಗೆ ಹೈಕೋರ್ಟ್ ತೀರ್ಪಿನಿಂದ ಇತ್ಯರ್ಥವಾಗಿದೆ. ಏನೇ ಸಮಸ್ಯೆ ಬಂದರೂ ಕಾನೂನಿನ ಅಡಿಯೇ ಬಗೆಹರಿಸಲು ಸರ್ಕಾರ ಸಿದ್ಧವಿದೆ. ಜನತೆಯು ಗೊಂದಲಕ್ಕೆ ಉಂಟಾಗಬಾರದು ಎಂದು ಹೇಳಿದರು.

ಇದನ್ನೂ ಓದಿ: 'ಬೆಲೆಯೇರಿಕೆ ಮುಕ್ತ ಭಾರತ'ಕ್ಕೆ ಕಾಂಗ್ರೆಸ್ ಆಗ್ರಹ: ಸಿಲಿಂಡರ್​ಗೆ ಹಾರ ಹಾಕಿ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.