ETV Bharat / state

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಹೊರಟ್ಟಿ; ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಹುಕ್ಕೇರಿ ಗೆಲುವು - congress candidate prakash hukkeri won in election

ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟಗೊಂಡಿದೆ.

basavaraj-horatti-and-prakash-hukkeri-won-in-legilsative-council-election
ಪಶ್ಚಿಮ ಶಿಕ್ಷಕರ ಕ್ಷೇತ್ರ-ಬಸವರಾಜ ಹೊರಟ್ಟಿ; ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಗೆಲುವು
author img

By

Published : Jun 15, 2022, 9:51 PM IST

Updated : Jun 15, 2022, 10:17 PM IST

ಬೆಂಗಳೂರು: ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ ಎಂದು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಅದೇ ರೀತಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಕಾಶ್ ಹುಕ್ಕೇರಿ ಅವರು ಗೆಲುವು ಸಾಧಿಸಿದ್ದಾರೆ.

ವಾಯವ್ಯ ಶಿಕ್ಷಕರ ಮತಕ್ಷೇತ್ರದ ವಿವರ: ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಕಾಶ ಹುಕ್ಕೇರಿ 11,460 ಪ್ರಥಮ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ‌ ಅಭ್ಯರ್ಥಿ ಅರುಣ ಶಹಾಪೂರ 6,405 ಮತಗಳನ್ನು ಪಡೆದುಕೊಂಡಿದ್ದಾರೆ. ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 21,402 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ 1,270 ಮತಗಳು ಅಸಿಂಧುವಾಗಿವೆ ಮತ್ತು 20,132 ಮತಗಳು ಸಿಂಧುವಾಗಿತ್ತು. ಅಭ್ಯರ್ಥಿ ಗೆಲುವಿಗೆ 10,067 ಮತಗಳ ಕೋಟಾ ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಪಡೆದ ಮತಗಳ ವಿವರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರಕಾಶ ಹುಕ್ಕೇರಿ 11,460 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ ಶಹಾಪೂರ ಅವರು 6,405 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಲೋಣಿ 544 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಅಪ್ಪಾಸಾಹೇಬ ಕುರಣೆ- 9, ಚಂದ್ರಶೇಖರ ಗುಡಸೆ- 101, ದೇಸಾಯಿ ಜಯಪಾಲ ರಾಜಾರಾಮ- 10, ಬನ್ನೂರು ಎನ್.ಬಿ -1009, ಬಸಪ್ಪ ಮಣಿಗಾರ -39, ಶ್ರೀಕಾಂತ ಪಾಟೀಲ- 19, ಶ್ರೀನಿವಾಸಗೌಡ ಗೌಡರ- 524, ಶ್ರೇನಿಕ್ ಅಣ್ಣಾಸಾಹೇಬ್ ಜಂಗಟೆ -8 ಹಾಗೂ ಚಿಕ್ಕನಾರಗುಂದ ಸಂಗಮೇಶ- 4 ಮತಗಳನ್ನು ಪಡೆದಿದ್ದಾರೆ.

ಪಶ್ಚಿಮ‌ ಶಿಕ್ಷಕರ ಮತಕ್ಷೇತ್ರದ ವಿವರ: ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ಅವರು 9266 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಸವರಾಜ ಗುರಿಕಾರ ಅವರು 4597 ಮತಗಳನ್ನು ಪಡೆದುಕೊಂಡರು. ಒಟ್ಟು 15,583 ಮತಗಳು‌ ಚಲಾವಣೆಗೊಂಡಿದ್ದು, ಅದರಲ್ಲಿ 1,223 ಮತಗಳು ಅಸಿಂಧುವಾಗಿವೆ ಮತ್ತು 14,360 ಸಿಂಧು ಮತಗಳಿದ್ದವು. ಗೆಲುವಿಗೆ 7,181 ಮತಗಳ ಕೋಟಾವನ್ನು ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಪಡೆದ ಮತಗಳ ವಿವರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ 9,266 ಮತಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಸವರಾಜ ಗುರಿಕಾರ 4,597, ಶ್ರೀಶೈಲ ಗಡದನ್ನಿ-273, ಎಂ. ಪಿ ಕರಬಸಪ್ಪ -60, ಕೃಷ್ಣವಾಣಿ- 58, ಪ್ರೊ.ಎಫ್.ವಿ ಕಲ್ಲನ ಗೌಡರ- 27 ಹಾಗೂ ವೆಂಕನಗೌಡ ರಂಗನಗೌಡ ಗೋವಿಂದಗೌಡರ 79 ಮತಗಳನ್ನು ಪಡೆದಿದ್ದಾರೆ.

ಮೂರೂ ಮತಕ್ಷೇತ್ರಗಳ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಬೆಳಗಾವಿ ವಿಭಾಗದ ಏಳೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ನೂರಾರು ಅಧಿಕಾರಿಗಳು ಮತ್ತು ಸಿಬ್ಬಂದಿ ಮತ ಎಣಿಕೆ ಪ್ರಕ್ರಿಯಲ್ಲಿ ಭಾಗವಹಿಸಿದ್ದರು. ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಪೊಲೀಸ್ ಬಂದೋಬಸ್ತ್ ನೇತೃತ್ವ ವಹಿಸಿದ್ದರು. ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ವಿಜೇತ ಅಭ್ಯರ್ಥಿಯಾಗಿರುವ ಬಿಜೆಪಿಯ ಬಸವರಾಜ ಹೊರಟ್ಟಿ ಅವರಿಗೆ ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಮಾಣಪತ್ರ ವಿತರಿಸಿದರು.

ಇದನ್ನೂ ಓದಿ: 'ನಮ್ಮ ನಾಯಕರನ್ನು ದನಗಳ ಹಾಗೆ ಎಳೆದುಕೊಂಡು ಹೋಗುತ್ತಿದ್ದಾರೆ,ಅವರು ಏನು ಮಾಡಿದ್ದಾರೆ?'

Last Updated : Jun 15, 2022, 10:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.