ETV Bharat / state

ಶಾಸಕರ ಅನುದಾನ ಬಿಡುಗಡೆಯಲ್ಲಿ ಯಾರಿಗೂ ಸಮಸ್ಯೆಯಾಗದಂತೆ ಸೂಚನೆ : ಸಭಾಪತಿ ಹೊರಟ್ಟಿ

ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅಡ್ಡಿ, ಆತಂಕಗಳು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಐದು ಜನ ವಿವಿಧ ಪಕ್ಷಗಳ ಹಿರಿಯ ಸದಸ್ಯರಾದ ಕೆ ಸಿ ಕೊಂಡಯ್ಯ, ಎಸ್ ರವಿ, ಡಾ. ತೇಜಸ್ವಿನಿಗೌಡ, ನಿರಾಣಿ ಹಣಮಂತ ರುದ್ರಪ್ಪ, ಅಪ್ಪಾಜಿಗೌಡ ಅವರನ್ನೊಳಗೊಂಡ ಸಮಿತಿ ನೇಮಿಸಿದ್ದರು..

basavaraj-horatti
ಸಭಾಪತಿ ಹೊರಟ್ಟಿ
author img

By

Published : Aug 13, 2021, 8:41 PM IST

ಬೆಂಗಳೂರು : 21-22ನೇ ಸಾಲಿಗೆ ಎರಡು ಕೋಟಿ ರೂ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸಹಮತಿ ನೀಡಲಾಗಿದೆ. ಅಲ್ಲದೆ ಯಾವ ಶಾಸಕರಿಗೂ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದರು. ಶಾಸಕರ ಅನುದಾನ ಬಿಡುಗಡೆ ಕುರಿತು ಮಹತ್ವದ ಸಭೆ‌ ನಡೆಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯರ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಅಸಮಾಧಾನ ಇತ್ತು. ಈ ಸಂಬಂಧ ಅಧಿಕಾರಿಗಳನ್ನ ಕರೆದು ಸಲಹೆ ನೀಡಲಾಗಿತ್ತು.

ಅಧಿಕಾರಿಗಳು ಕೆಲಸ ಮಾಡದಿದ್ರೆ ಕ್ರಮದ ಎಚ್ಚರಿಕೆ ನೀಡಲಾಗಿತ್ತು. ಈ ಸಂಬಂಧ ಐದು ಜನರ ಸಮಿತಿ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಯಶಸ್ವಿಯಾಗಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು. 2020-21ನೇ ಸಾಲಿನಲ್ಲಿ 300 ಕೋಟಿ ರೂ. ಹೆಚ್ಚುವರಿ ಬಿಡುಗಡೆ ಮಾಡಲಾಗಿದೆ. 2019-20ನೇ ಸಾಲಿನ ಬಿಡುಗಡೆಗೆ ಬಾಕಿ ಇರುವ 300 ಕೋಟಿ ರೂ. ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಆರ್ಥಿಕ ಇಲಾಖೆ ತಿಳಿಸಿದೆ. 2018-19ನೇ ಸಾಲಿಗೆ ಕೂಡಲೇ 127.69 ಕೋಟಿ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲು ಹೇಳಲಾಗಿದೆ. ಮೊದಲು ಕ್ಷೇತ್ರವಾರು ಬಿಡುಗಡೆ ಮಾಡಲಾಗುತ್ತಿತ್ತು.

ಆದರೆ, ಈಗ ಜಿಲ್ಲಾವಾರು ಬಿಡುಗಡೆಗೆ ಸೂಚನೆ ನೀಡಲಾಗಿದೆ. ಶಾಸನ ಸಭೆಯಿಂದ ಯಾವುದೇ ಸಮಸ್ಯೆ ಆಗದಂತೆ ಆಜ್ಞೆ ಹೊರಡಿಸಲಾಗುವುದು. ಯಾವುದೇ ಶಾಸಕರಿಗೂ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ. ಒಂದು ವಾರದಲ್ಲಿ ಈ ಸಂಬಂಧ ಹೊಸ ಆದೇಶ ಹೊರಡಿಸಲಾಗುವುದು ಎಂದರು. ಕೋವಿಡ್, ಪ್ರವಾಹ ಯಾವುದೇ ಇದ್ರೂ ಅನುದಾನ ಬಳಕೆ ಮಾಡಲು ಹಣ ಮೀಸಲಿಡಬೇಕು. ಶಾಸಕರು ಸೂಚಿಸಿದ ಕಾಮಗಾರಿ ಮಾಡುವಂತೆ ಸೂಚಿಸಲಾಗುತ್ತದೆ. ಯಾವುದೇ ಜಿಲ್ಲಾಧಿಕಾರಿ ತಪ್ಪು ಮಾಡಿದ್ರೆ ಕ್ರಮಕೈಗೊಳ್ಳುವ ಕೆಲಸ ಮಾಡಲಾಗುವುದು. ಕಾಮಗಾರಿ ಮಾಡಲು ತೊಡಕು ಅಂತಾ ಅಧಿಕಾರಿಗಳು ನೆಪ ಹೇಳ್ತಾರೆ.

ಇದರಿಂದ ಕಾಮಗಾರಿ ಮಾಡಲು ಸಾಧ್ಯವಾಗದೆ ಹಣ ವಾಪಸ್ ಹೋಗ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಸಂಬಂಧ ಇನ್ಸ್‌ಪೆಕ್ಷನ್ ಮಾಡಿ,‌ ಸರಳೀಕರಣ ಮಾಡಿ ಕಾಮಗಾರಿ ಮಾಡಿ ಮುಗಿಸಬೇಕು ಎಂದು ತಿಳಿಸಿದರು. ಕಳೆದ ವಾರ ನಡೆದ ವಿಧಾನ ಪರಿಷತ್ತಿನ ಸದಸ್ಯರ ಸಭೆಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎಂಬುದಾಗಿ ಬಹುತೇಕ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಕುರಿತು ಸರ್ಕಾರದ ಮಟ್ಟದಲ್ಲಿ ಕ್ರಮಕೈಕೊಳ್ಳುವಂತೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೂ ಸೇರಿ ವಿವಿಧ ಅಧಿಕಾರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿಯವರು ಸಭೆಯಲ್ಲಿ ಸೂಚನೆ ನೀಡಿದ್ದರು. ಆಗಸ್ಟ್‌ 14ರೊಳಗಾಗಿ ಶಾಸಕರಿಗೆ ಅನುದಾನ ಬಿಡುಗಡೆ ಕುರಿತಂತೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಭಾಪತಿಗಳು ಎಲ್ಲ ಸದಸ್ಯರಿಗೆ ಭರವಸೆ ನೀಡಿದ್ದರು.

ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅಡ್ಡಿ, ಆತಂಕಗಳು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಐದು ಜನ ವಿವಿಧ ಪಕ್ಷಗಳ ಹಿರಿಯ ಸದಸ್ಯರಾದ ಕೆ ಸಿ ಕೊಂಡಯ್ಯ, ಎಸ್ ರವಿ, ಡಾ. ತೇಜಸ್ವಿನಿಗೌಡ, ನಿರಾಣಿ ಹಣಮಂತ ರುದ್ರಪ್ಪ, ಅಪ್ಪಾಜಿಗೌಡ ಅವರನ್ನೊಳಗೊಂಡ ಸಮಿತಿ ನೇಮಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.