ಬೆಂಗಳೂರು: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ಮೂರ್ತಿಗಳನ್ನು ನಿರಾಕರಿಸಿ ಜೇಡಿಮಣ್ಣಿನ ಗಣಪತಿ ಮೂರ್ತಿಗಳನ್ನು ಇರಿಸಿ ಗಣೇಶ ಚತುರ್ಥಿ ಆಚರಿಸುವಂತೆ ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.
ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಷಯಗಳು. ಭಕ್ತಿ ಭಾವದಿಂದ ಗೌರಿ ಗಣೇಶ ಹಬ್ಬ ಆಚರಣೆ ಮಾಡಿ. ಪರಿಸರ ಸ್ನೇಹಿ ಗಣಪತಿ ಕೂರಿಸಿ ಪಿಒಪಿ ಗಣಪತಿ ಮೂರ್ತಿಗಳನ್ನು ಸಂಪೂರ್ಣವಾಗಿ ನಿರಾಕರಿಸಿ ಎಂದು ಅವರು ಮನವಿ ಮಾಡಿದರು.
ಗಣಪತಿ ಮೂರ್ತಿಗಳನ್ನು ಕೂರಿಸುವವರು ನಿಯಮಗಳನ್ನು ಪಾಲಿಸಬೇಕು. ಗ್ರಾಮ ಪಂಚಾಯತ್ನಿಂದ ಹಿಡಿದು ಮಹಾನಗರ ಪಾಲಿಕೆ, ಬಿಬಿಎಂಪಿವರೆಗೂ ಎಲ್ಲೆಲ್ಲಿ ಗಣಪತಿ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆಯೋ ಅಲ್ಲಿಯೇ ನಿಮಜ್ಜನೆ ಮಾಡಬೇಕು. ಆ ಮೂಲಕ ಪರಿಸರ ಮಾಲಿನ್ಯ ತಡೆಗೆ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಹುಲಿಹೈದರ ಪ್ರಕರಣ: ಗ್ರಾಮದಲ್ಲಿ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ