ETV Bharat / state

Cauvery Water: ತಮಿಳುನಾಡಿಗೆ ನೀರು ಬಿಡಬೇಡಿ, ಕಾವೇರಿ ಜಲಾನಯನ ಜನತೆಯ ಹಿತ ಕಾಪಾಡಿ- ಸಿಎಂಗೆ ಬೊಮ್ಮಾಯಿ ಪತ್ರ - Basavaraja Bommai letter

Basavaraja Bommai letter: ಕಾವೇರಿ ನೀರು ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Aug 14, 2023, 4:58 PM IST

ಬೆಂಗಳೂರು : ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನ್ಸೂನ್ ಮಳೆ ಆಗುತ್ತಿದೆ. ಇದರಿಂದ ಕೆಆರ್​ಎಸ್‌ನಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಮತ್ತು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಬೊಮ್ಮಾಯಿ ಪತ್ರ: ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ. ತಮಿಳುನಾಡು ಸುಪ್ರಿಂ ಕೋರ್ಟ್‌ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು.

ಜೂನ್ 1ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ (6-8-2023ಕ್ಕೆ) 14,054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಮನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನವರಿಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.
ಬೊಮ್ಮಾಯಿ ಪತ್ರ

ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲ್ಯುಡಿಟಿ ಪ್ರಕಾರ ಬೆಳೆಯಬೇಕು. 32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು (7-8-23ಕ್ಕೆ) 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು, ಸಿಡಬ್ಲ್ಯುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೇ ಸಿಡಬ್ಲ್ಯುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಎರಿಯಾ ಬೆಳೆಗೆ ನೀರು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲ್ಯುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ.

ಈಗಿರುವ ನಮ್ಮ ನಾಲ್ಕು ಡ್ಯಾಮ್‌ಗಳ ನೀರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಖಾರೀಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೀಡು ಮಾಡುತ್ತದೆ. ಹೀಗಾಗಿ ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಾವೇರಿ ನಮ್ಮ ಜೀವನದ ಪ್ರಶ್ನೆ, ಮೇಕೆದಾಟು ಅಣೆಕಟ್ಟೆಗೆ ಅವಕಾಶ ನೀಡಲ್ಲ: ತಮಿಳುನಾಡು ಸಚಿವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.