ETV Bharat / state

ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ.. ಸಿಎಂ ಬೊಮ್ಮಾಯಿ ಸ್ಪಷ್ಟನೆ

author img

By

Published : Mar 23, 2022, 8:53 PM IST

ನಟ ಶಿವರಾಜ್ ಕುಮಾರ್ ಅವರ ಬಳಿಯೂ ಮಾತನಾಡಿದ್ದೇನೆ. ತೊಂದರೆ ಇದ್ದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಥವಾ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದ್ದೇನೆ. ಅವರೂ ಸಹ ಒಪ್ಪಿದ್ದಾರೆ. ಜೇಮ್ಸ್‌ ಸಿನಿಮಾವನ್ನು ಬಿಜೆಪಿ ಶಾಸಕರು ಎತ್ತಂಗಡಿ ಮಾಡಿಸ್ತಿದ್ದಾರೆ ಅನ್ನೋದೆಲ್ಲ ವದಂತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

basavaraja-bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಈಗಾಗಲೇ ಕರುನಾಡ ಯುವರತ್ನ, ಕರ್ನಾಟಕ ರತ್ನ, ದಿವಂಗತ ಪುನೀತ್​ ರಾಜ್​ಕುಮಾರ್​ ಅಭಿನಯದ ಕೊನೆಯ ಚಿತ್ರ ಜೇಮ್ಸ್ ರಾಜ್ಯ ಸೇರಿದಂತೆ ದೇಶಾದ್ಯಂತೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಜೇಮ್ಸ್​ ಸಿನಿಮಾ ಪ್ರದರ್ಶನಗಳನ್ನು ಕಡಿತಗೊಳಿಸಿ ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಕಾಂಗ್ರೆಸ್​ ನಾಯಕರು ಬಿಜೆಪಿಯ ಶಾಸಕರ ವಿರುದ್ಧ ಗಂಭೀರ ಆರೋಪ ಸಹ ಮಾಡಿದ್ದಾರೆ.

ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಜೇಮ್ಸ್​ ಚಿತ್ರ ಪ್ರದರ್ಶನಕ್ಕೆ ಯಾವುದೇ ಅಡ್ಡಿಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಚರ್ಚಿಸಿದ್ದೇನೆ. ತೊಂದರೆಯಾದಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ ಎಂದು ಹೇಳಿದರು.

ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ ಎಂದ ಸಿಎಂ, ಈ ಬಗ್ಗೆ ನಟ, ಪುನೀತ್​ ಸಹೋದರ ಶಿವರಾಜ್ ಕುಮಾರ್ ಅವರ ಬಳಿಯೂ ಮಾತನಾಡಿದ್ದೇನೆ. ತೊಂದರೆ ಇದ್ದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಥವಾ ತಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದ್ದೇನೆ. ಅವರೂ ಸಹ ಒಪ್ಪಿದ್ದಾರೆ. ಜೇಮ್ಸ್‌ ಸಿನಿಮಾವನ್ನು ಬಿಜೆಪಿ ಶಾಸಕರು ಎತ್ತಂಗಡಿ ಮಾಡಿಸ್ತಿದ್ದಾರೆ ಅನ್ನೋದೆಲ್ಲ ವದಂತಿ. ಕಾಂಗ್ರೆಸ್ ನವರು ಸಿನಿಮಾದಲ್ಲಿಯೂ ರಾಜಕಾರಣ ಮಾಡುವಷ್ಟು ಕೆಳಮಟ್ಟಕ್ಕೆ ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಓದಿ: ಕೃಷಿ ಯಂತ್ರೋಪಕರಣ ಸಹಾಯಧನ ನಿಲ್ಲಿಸಿಲ್ಲ, ಅನುದಾನವೂ ಕಡಿತವಾಗಿಲ್ಲ: ಸಚಿವ ಬಿ ಸಿ ಪಾಟೀಲ್ ಸ್ಪಷ್ಟನೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.