ETV Bharat / state

ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ, ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ: ಬಸವರಾಜ ಬೊಮ್ಮಾಯಿ‌

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಈ ಕುರಿತು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

Basavaraja Bommai
ಬಸವರಾಜ ಬೊಮ್ಮಾಯಿ‌
author img

By

Published : May 16, 2023, 12:58 PM IST

Updated : May 16, 2023, 2:01 PM IST

ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಚುನಾವಣೆಯಲ್ಲಿ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ಸದಾಶಿವನಗರದಲ್ಲಿರುವ ಮಾಜಿ ಸಚಿವ ಡಾ.ಸುಧಾಕರ್ ನಿವಾಸಕ್ಕೆ ಸಿಎಂ ಭೇಟಿ ನೀಡಿ ಸುಧಾಕರ್ ಜೊತೆ ಕೆಲ ಕಾಲ ಮಾತುಕತೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸುಧಾಕರ್ ಭೇಟಿ ಮಾಡಿದ್ದೇನೆ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೊಣ ಎಂದರು. ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರ ಪ್ರತಿಕ್ರಿಯಿಸಿ ಅವರು, ಪ್ರವೀಣ್ ಸೂದ್ ನಿರ್ದೇಶಕರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರನ್ನು ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಕಾರ್ಡ್ ಕಾರಣ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಗೃಹ ಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ಮಾತು: ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ನಿರ್ಗಮಿತ ಬಸವರಾಜ ಬೊಮ್ಮಾಯಿ ಇಂದು ಮಾತನಾಡಿದರು. 'ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು. ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ.

CM Basavaraja Bommai
ಗೃಹ ಕಚೇರಿ ಕೃಷ್ಣಾದಲ್ಲಿ ಬಿಜೆಪಿ ಮುಖಂಡರು

ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ‌ ಎಂದರು.

ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು. ನಾವು ಐದು ವರ್ಷಕ್ಕೆ ಬರುವವರು, ನೀವು ಸುದೀರ್ಘ ಅಧಿಕಾರದಲ್ಲಿ ಇರುವವರು.

ರಾಜ್ಯದ ಏಳಿಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಅಂತ ನಾನು ಗಟ್ಟಿ ಧ್ವನಿಯಲ್ಲಿ ಹೇಳಿರಬಹುದು. ಆದರೆ ಯಾವುದೇ ವಯಕ್ತಿಕ ಅಭಿಪ್ರಾಯ ಇರಲಿಲ್ಲ. ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ‌. ಜಿಎಸ್ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ‌. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ ಎಂದರು.

ಇದನ್ನೂ ಓದಿ: 2ನೇ ಬಾರಿ ರಾಜಕೀಯ ಜೀವನದಲ್ಲಿ ಸೋತ ಶ್ರೀರಾಮುಲು: ಬೆಂಬಲಿಗರಿಂದ ಕಣ್ಣೀರು

Last Updated : May 16, 2023, 2:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.