ETV Bharat / state

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್​ಗಳೆಂದು ಘೋಷಿಸಿ, ಆದ್ಯತೆ ಮೇರೆಗೆ ಲಸಿಕೆ ಹಾಕಿಸಿ: ಹೊರಟ್ಟಿ ಸಿಎಂಗೆ ಮನವಿ - ಸಿಎಂ ಯಡಿಯೂರಪ್ಪಗೆ ಬಸವರಾಜ್​ ಹೊರಟ್ಟಿ ಪತ್ರ

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್​ಗಳೆಂದು ಘೋಷಿಸಬೇಕು, ಅವರಿಗೆ ಆದ್ಯತೆ ಆಧಾರದ ಮೇಲೆ ಕೋವಿಡ್​ ಲಸಿಕೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

horatti
horatti
author img

By

Published : May 17, 2021, 10:09 PM IST

ಬೆಂಗಳೂರು: ಕೂಡಲೇ ಕೋವಿಡ್ ಸಂಬಂಧಿತ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಶಿಕ್ಷಕರನ್ನು ಕೋವಿಡ್ ವಾರಿಯರ್ಸ್​ಗಳೆಂದು ಘೋಷಿಸಬೇಕು. ಜೊತೆಗೆ ರಾಜ್ಯದ ಎಲ್ಲಾ ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ಹಾಕಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ತಮ್ಮ ಪತ್ರದಲ್ಲಿ ಅವರು, ಮೊದಲಿನಿಂದಲೂ ಚುನಾವಣೆಗಳು, ಜನಗಣತಿ ಸೇರಿದಂತೆ ಎಲ್ಲ ಆಪತ್ತುಗಳ ಸಂದರ್ಭದಲ್ಲಿ ಸರ್ಕಾರದ ಎಲ್ಲ ಕೆಲಸಗಳಿಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಆದರೆ ಅಂತಹ ಕೆಲಸ ನಿರ್ವಹಣೆಯಲ್ಲಿ ಅವರಿಗೆ ಏನಾದರೂ ತೊಂದರೆ ಅನಾಹುತ ಸಂಭವಿಸಿದಲ್ಲಿ ಅವರಿಗೆ ನೀಡಬೇಕಾಗಿರುವ ಸುರಕ್ಷತೆ, ಆರೋಗ್ಯ ಸೌಲಭ್ಯ ಹಾಗೂ ಇತರ ಸವಲತ್ತುಗಳನ್ನು ನೀಡುವಲ್ಲಿ ಸರ್ಕಾರ ಆಸಕ್ತಿ ವಹಿಸದೇ ಇರುವುದು ತೀವ್ರ ವಿಷಾದದ ಸಂಗತಿ. ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗ ಬಂದಾಗಿನಿಂದ ಶಿಕ್ಷಕರನ್ನು ಕೋವಿಡ್ ಸೋಂಕಿತರನ್ನು ಗುರುತಿಸುವ ಕಾರ್ಯಕ್ಕೆ, ಸರ್ವೆ ಕಾರ್ಯಕ್ಕೆ, ಆರೈಕೆ ಕೇಂದ್ರಗಳ ಉಸ್ತುವಾರಿಗೆ, ಚೆಕ್​​ಪೋಸ್ಟಗಳಲ್ಲಿ, ಡಾಟಾ ಎಂಟ್ರಿ ಕಾರ್ಯಕ್ಕೆ ಹಾಗೂ ಜನ ಜಾಗೃತಿ ಕಾರ್ಯ ಸೇರಿದಂತೆ ಹಲವು ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ. ಅಲ್ಲದೇ ಕೋವಿಡ್‍ನ ಭೀಕರತೆ ಮಧ್ಯೆ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಲೋಕಸಭೆಯೂ ಸೇರಿದಂತೆ ವಿಧಾನ ಸಭೆಯ ಉಪಚುನಾವಣೆಗಳಿಗೆ ಚುನಾವಣಾ ಕಾರ್ಯ ಮತ್ತು ಬಿಎಲ್​​​ಓ ಕೆಲಸಕ್ಕೆ ಶಿಕ್ಷಕರನ್ನು ನಿಯೋಜಿಸಲಾಗಿತ್ತು. ಈ ಉಪಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಹಲವು ಶಿಕ್ಷಕರು ಸಂಪರ್ಕದ ಕಾರಣದಿಂದ ಕೋವಿಡ್ ಸೋಂಕಿತರಾಗಿ ತೀವ್ರವಾಗಿ ಅಸ್ವಸ್ಥರಾಗಿ ಬಳಲುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಅವರಲ್ಲಿ ಹಲವು ಜನ ಶಿಕ್ಷಕರು ಅಸುನೀಗಿದ ದಾರುಣ ಘಟನೆಯು ಜರುಗಿರುವುದೂ ನನ್ನ ಗಮನಕ್ಕೆ ಬಂದಿದೆ. ಅಲ್ಲದೇ ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕರ ಪೈಕಿ ಸುಮಾರು 55 ಜನ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ ಎಂಬುದು ಅಂಕಿ - ಅಂಶ ಸಮೇತ ತಿಳಿದು ಬಂದಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಅವರಲ್ಲಿ ಹಲವರಿಗೆ ಸೋಂಕು ತಗುಲಿದ್ದು, ಸುಮಾರು 17 ಜನ ಮೃತಪಟ್ಟಿದ್ದಾರೆ. ಅಲ್ಲದೇ ಇಡೀ ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ 51 ಜನ ಶಿಕ್ಷಕರು ಕೋವಿಡ್‍ಗೆ ಬಲಿಯಾಗಿದ್ದಾರೆ. ಮಸ್ಕಿ ವಿಧಾನಸಭೆ ಉಪಚುನಾವಣೆಯಲ್ಲಿಯೂ ಶಿಕ್ಷಕರನ್ನು ನಿಯೋಜಿಸಲಾಗಿತ್ತು ಅವರಲ್ಲಿ ಸುಮಾರು ಜನ ಸೋಂಕಿಗೆ ತುತ್ತಾಗಿದ್ದು ಒಂಬತ್ತು ಜನ ಶಿಕ್ಷಕರು ಮೃತರಾಗಿದ್ದು ಇದರಿಂದ ನನಗೆ ಅತೀವ ದುಃಖ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ಫಲಾಪೇಕ್ಷೆಯಿಲ್ಲದೇ ಸಮಾಜಮುಖಿಯಾಗಿ ಸರ್ಕಾರ್ ಎಲ್ಲ ಆದೇಶಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿರುವ ನನ್ನ ಶಿಕ್ಷಕ ಬಾಂಧವರ ಜೀವನದ ಬಗ್ಗೆ ಸರ್ಕಾರ ಅಸಡ್ಡೆ ತೋರದೆ ಅವರಿಗೆ ಸೂಕ್ತ ಸುರಕ್ಷತೆ ಹಾಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ ಎಂಬುದನ್ನು ನಾನು ಬಲವಾಗಿ ಪ್ರತಿಪಾದಿಸುತ್ತೇನೆ. ಚುನಾವಣೆ ಸೇರಿದಂತೆ ಇತರ ಆಪತ್ತು ನಿರ್ವಹಣೆ ಕಾರ್ಯಕ್ಕೆ ಸುಮಾರು 50 ಸಾವಿರ ಸಿಬ್ಬಂದಿ ಬೇಕಾಗಿದ್ದರೆ, ಅವರಲ್ಲಿ ಸುಮಾರು 5 ಸಾವಿರ ಶಿಕ್ಷಕರನ್ನು ಮಾತ್ರ ಇಂತಹ ಕಾರ್ಯಗಳಿಗೆ ನಿಯೋಜಿಸಬೇಕು. ಉಳಿದವರನ್ನು ಕಂದಾಯ, ಜಲಸಂಪನ್ಮೂಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಅರಣ್ಯ ಮುಂತಾದ ಇತರ ಇಲಾಖೆಗಳಿಂದ ಸಮ ಪ್ರಮಾಣದಲ್ಲಿ ಸಿಬ್ಬಂದಿ ನಿಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ನಾನು ಕೆಲವು ಸಲಹೆಗಳನ್ನು ನೀಡಬಯಸುತ್ತಿದ್ದು, ಅವುಗಳ ಯಥಾವತ್​ ಜಾರಿಗೆ ತಾವು ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಪೂರ್ವಕವಾಗಿ ಕೋರುತ್ತೇನೆ. ಶಿಕ್ಷಕರಾದಿಯಾಗಿ ಎಲ್ಲ ಸರ್ಕಾರಿ ನೌಕರರು ಇಂತಹ ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಕೆಲಸ ಮಾಡುವವರಿಗೆ ಸೂಕ್ತ ಆರೋಗ್ಯ ಸರಕ್ಷತೆ ಹಾಗೂ ಭದ್ರತೆ ವ್ಯವಸ್ಥೆ ನೀಡಬೇಕು. ಪ್ರಸಕ್ತ ಕೋವಿಡ್ ಕೆಲಸ ನಿರ್ವಹಿಸುವವರಿಗೆ ಸೂಕ್ತ ಯಂತ್ರೋಪಕರಣಗಳು, ಪಿಪಿಇ ಕಿಟ್, ಸ್ಯಾನಿಟೈಸರ್, ಮಾಸ್ಕ್ ಹ್ಯಾಂಡ್‍ಗ್ಲೌಸ್ ಮೊದಲಾದ ಪರಿಕರಗಳನ್ನು ಸರ್ಕಾರ ಪೂರೈಸಬೇಕು, ಜನಗಣತಿ, ಇತರ ಗಣತಿ ಹಾಗೂ ಚುನಾವಣೆ ಕಾರ್ಯ ಸೇರಿದಂತೆ ಎಲ್ಲ ಸರ್ಕಾರಿ ಕೆಲಸಗಳು ಮತ್ತು ಯೋಜನೆಗಳಿಗೆ ಕೇವಲ ಶಿಕ್ಷಕರನ್ನಷ್ಟೇ ಗುರಿ ಮಾಡದೇ ಸರ್ಕಾರದ ಇತರೆ ಇಲಾಖೆಗಳ ನೌಕರರನ್ನು ಸಹ ಸಮಪ್ರಮಾಣದಲ್ಲಿ ನಿಯೋಜಿಸಬೇಕು.

ಕೋವಿಡ್ ಸೋಂಕಿಗೆ ತುತ್ತಾಗುತ್ತಿರುವ ಶಿಕ್ಷಕರಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‍ಗಳನ್ನು ಗುರುತಿಸಿ ಆದ್ಯತೆಯ ಮೇರೆಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸುವ ವ್ಯವಸ್ಥೆ ಮಾಡಬೇಕು. ಈಗಾಗಲೇ ಕೋವಿಡ್ ಮಹಾಮಾರಿಗೆ ಬಲಿಯಾಗಿರುವ ಶಿಕ್ಷಕರ ಕುಟುಂಬಕ್ಕೆ ಸೂಕ್ತ ಆರ್ಥಿಕ ಪರಿಹಾರ ನೀಡಿ ಅವಲಂಬಿತರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಬೇಕು. ಈಗಾಗಲೇ ಕೋವಿಡ್‍ಗೆ ಬಲಿಯಾಗಿರುವ ಶಿಕ್ಷಕರು, ಮೇಧಾವಿಗಳು, ಸಂಪನ್ಮೂಲ ವ್ಯಕ್ತಿಗಳಾಗಿದ್ದು ಅಂತಹ ಶಿಕ್ಷಕರ ಮನೆಗಳಿಗೆ ತೆರಳಿ ಅಧಿಕಾರಿಗಳು ಅವರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಈ ಎಲ್ಲ ಅಂಶಗಳು ಬಹು ಪ್ರಮುಖವಾಗಿದ್ದು ಅವುಗಳನ್ನು ಕೂಡಲೇ ಜಾರಿಗೊಳಿಸುವಂತೆ ತಾವು ಸಂಬಂಧಪಟ್ಟವರಿಗೆ ಆದೇಶ ನೀಡಬೇಕೆಂದು ಒತ್ತಾಯಪೂರ್ವಕವಾಗಿ ತಮ್ಮನ್ನು ಕೋರುತ್ತೇನೆ ಎಂದು ಪತ್ರ ಬರೆದಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.