ETV Bharat / state

ಬಿಬಿಎಂಪಿಯಿಂದ ಅಪಾರ್ಟ್​ಮೆಂಟ್​ಗಳಿಗೆ ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟ - Covid Guidelines

ಕೋವಿಡ್ ತಡೆಗಟ್ಟುವಿಕೆ ಸಂಬಂಧ ಆಗಸ್ಟ್ 14 ಅಪಾರ್ಟ್​ಮೆಂಟ್​ಗಳಿಗೆ ಬಿಬಿಎಂಪಿ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

Guidelines for Apartments
ಬಿಬಿಎಂಪಿ ಪರಿಷ್ಕೃತ ಮಾರ್ಗಸೂಚಿ
author img

By

Published : Aug 19, 2021, 2:10 PM IST

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಅಪಾರ್ಟ್​ಮೆಂಟ್ ಕಾಂಪ್ಲೆಕ್ಸ್​ಗಳಲ್ಲಿನ ನಿರ್ವಹಣಾ ಸಮಿತಿಗಳಿಗೆ ಕೋವಿಡ್ ಸಂಬಂಧಿಸಿದಂತೆ ಬಿಬಿಎಂಪಿ ಆಗಸ್ಟ್ 14 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಈಗ ಆ ಮಾರ್ಗಸೂಚಿ ಸಂಬಂಧ ಪರಿಷ್ಕೃತ ಗೈಡ್‌ಲೈನ್ಸ್ ಹೊರಡಿಸಿದೆ.

Guidelines for Apartments
ಬಿಬಿಎಂಪಿ ಪರಿಷ್ಕೃತ ಮಾರ್ಗಸೂಚಿ

ಕೋವಿಡ್-19 ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಅಡಿಯಲ್ಲಿ ಸಾಂಕ್ರಾಮಿಕ ರೋಗವೆಂದು ಸೂಚಿಸಲಾಗಿತ್ತು. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಾರಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆಗೆ ಅಧಿಕಾರ ನೀಡಲಾಗಿತ್ತು.

ಈ ಸಂಬಂಧ ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಹಲವು ಸೂಚನೆಗಳನ್ನು ನೀಡಲಾಗಿತ್ತು. ಈಗಿರುವ ಸರ್ಕಾರಿ ಆದೇಶಗಳು ಮತ್ತು ಮಾರ್ಗಸೂಚಿಗಳ ಜೊತೆಗೆ, ಪಾಲಿಕೆ ಹೊರಡಿಸಿರುವ ಮಾರ್ಗಸೂಚಿಯಲ್ಲಿನ ಸೂಚನೆಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿತ್ತು.

ಅಪಾರ್ಟ್​ಮೆಂಟ್ ಅಥವಾ ಕಾಂಪ್ಲೆಕ್ಸ್​ಗಳ ಎಲ್ಲರೂ, ಅಲ್ಲಿಗೆ ಭೇಟಿ ನೀಡುವವರ ದೇಹದ ಉಷ್ಣಾಂಶ ತಪಾಸಣೆ ಮಾಡಬೇಕು. ಸ್ಯಾನಿಟೈಸೇಶನ್, ಮಾಸ್ಕ್ ಕಡ್ಡಾಯವಾಗಬೇಕು. ಬೇರೆಯವರು ಅಪಾರ್ಟ್​ಮೆಂಟ್​ಗಳಿಗೆ ಭೇಟಿ ಕೊಟ್ಟರೆ ಹೆಸರು ಮತ್ತು ಮೊಬೈಲ್ ಸಂಖ್ಯೆ ದಾಖಲಿಸಿರಬೇಕು. ಹೊರ ರಾಜ್ಯಗಳಿಗೆ ಭೇಟಿ ನೀಡಿದವರು ಆರ್​ಟಿ-ಪಿಸಿಆರ್ 72 ಗಂಟೆಗಳ ಒಳಗಿನ ನೆಗೆಟಿವ್ ಫಲಿತಾಂಶದ ವರದಿ ತಂದಿರಬೇಕು. ಇಲ್ಲವಾದಲ್ಲಿ ಬಂದ ಮೇಲೆ ಆರ್​ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕು ಹಾಗೂ ಫಲಿತಾಂಶ ಬರುವವರೆಗೆ ಹೋಂ ಕ್ವಾರಂಟೈನ್ ಆಗಬೇಕು ಎಂದು ಹೇಳಿತ್ತು.

ಈಜುಕೊಳಗಳು ಮುಚ್ಚಿಯೇ ಇರುತ್ತವೆ. ಆದರೆ, ಜಿಮ್​ಗಳು ಶೇ.60ರಷ್ಟು ಜನರೊಂದಿಗೆ ಕಾರ್ಯ ನಿರ್ವಹಿಸಬಹುದು. 3 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳು ಮಾಸ್ಕ್ ಧರಿಸಿರುವಂತೆ ಪೋಷಕರು ನೋಡಿಕೊಳ್ಳಬೇಕು. ಜನ ಸೇರುವ, ಗುಂಪಾಗಿ ನಡೆಸುವ, ಸಾರ್ವಜನಿಕ ಅಥವಾ ಸಾಮೂಹಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಹೋಂ ಡೆಲಿವರಿ, ಕೊರಿಯರ್ ಇನ್ನಿತರೆ ಸೇವೆಗಳಿಗೆ, ಸೇವೆ ನೀಡುವವರು ಅಪಾರ್ಟ್​ಮೆಂಟ್​ನ ಹೊರಗಿನ ಗೇಟ್ ಅಥವಾ ಮುಖ್ಯ ಗೇಟ್‌ವರೆಗೆ ಮಾತ್ರ ಬರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿತ್ತು.

ಕಂಟೇನ್​ಮೆಂಟ್ ಝೋನ್​ಗಳಿಂದ ಕಸ ಇತ್ಯಾದಿ ನಿರ್ವಹಣೆಗೆ ವೃತ್ತಿಪರ ಕೆಲಸಗಾರರನ್ನು ಬಳಸುವುದು ಮತ್ತು ಅವರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕೆಲಸ ಮಾಡುವುದು. ಕೋವಿಡ್ ಪ್ರಕರಣ ಪತ್ತೆಯಾದಲ್ಲಿ ಅಪಾರ್ಟ್​ಮೆಂಟ್​ನ ಎಲ್ಲರೂ ಸಹಕರಿಸುವುದು. ಮನೆಯಲ್ಲಿ ಹೋಂ ಐಸೋಲೇಷನ್​ಗೆ ಅವಕಾಶ ಇಲ್ಲದಿದ್ದಲ್ಲಿ, ಕೊವಿಡ್ ಕೇರ್ ಸೆಂಟರ್​ಗೆ ಅಥವಾ ಆಸ್ಪತ್ರೆಗೆ ದಾಖಲಾಗಬೇಕು‌ ಎಂದು ಸಲಹೆ ನೀಡಲಾಗಿತ್ತು.

ಪರಿಷ್ಕೃತ ಗೈಡ್ ಲೈನ್ಸ್ :

1. ಈಗ ಕಂಟೇನ್​ಮೆಂಟ್​ ವಲಯಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿ ಪಾಲಿಕೆ ಸೂಚನೆ ನೀಡಿದೆ.

2. ಹೋಂ ಡೆಲಿವರಿ, ಕೊರಿಯರ್ ಇನ್ನಿತರೆ ಸೇವೆಗಳಿಗೆ ಸೇವೆ ನೀಡುವವರಿಗೆ ಒಂದು ನಿರ್ದಿಷ್ಟ ಜಾಗವನ್ನು ಲಿಫ್ಟ್ ಬಳಿ ಅಥವಾ ಅಪಾರ್ಟ್ಮೆಂಟ್ ಗೇಟ್ ಒಳಗೆ ಮೀಸಲಿಡಲು ಸೂಚಿಸಲಾಗಿದೆ.

3. ಕಂಟೇನ್​ಮೆಂಟ್​ ವಲಯಗಳಲ್ಲಿ ಹೊರಗಿನವರ ಓಡಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.

4. ಲಸಿಕೆ ಹಾಕಿಸಿಕೊಂಡ ಅಂತಾರಾಜ್ಯ ಪ್ರಯಣಿಕರು ಕೂಡ ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಾಲಿಕೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.