ETV Bharat / state

ಮೀಸಲಾತಿ ನಿಗದಿಗೆ 3 ತಿಂಗಳ ಕಾಲಾವಕಾಶ ಕೋರಿ ಹೈಕೋರ್ಟ್‌ಗೆ ಬಿಬಿಎಂಪಿ ಮನವಿ - ಮೀಸಲಾತಿ ನಿಗದಿಪಡಿಸಬೇಕು

ಬಿಬಿಎಂಪಿಯ 242 ವಾರ್ಡ್‌ಗಳಿಗೆ ನವೆಂಬರ್ 30 ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗು ಡಿಸೆಂಬರ್ 31 ರೊಳಗೆ ಚುನಾವಣೆ ನಡೆಸಬೇಕು ಎಂದು ಸೆಪ್ಟೆಂಬರ್ 30 ರಂದು ಹೈ ಕೋರ್ಟ್ ಆದೇಶ ನೀಡಿತ್ತು.

Highcourt
ಹೈಕೋರ್ಟ್​
author img

By

Published : Nov 24, 2022, 6:39 AM IST

ಬೆಂಗಳೂರು: ತನ್ನ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವುದಕ್ಕಾಗಿ ಎದುರಾಗಿರುವ ಗೊಂದಲಗಳನ್ನು ನಿವಾರಿಸುವುದಕ್ಕೆ ಮತ್ತೆ ಮೂರು ತಿಂಗಳು ಕಾಲಾವಕಾಶ ಕೇಳಿ ಬಿಬಿಎಂಪಿ, ಹೈ ಕೋರ್ಟ್‌ಗೆ ಮತ್ತೆ ಮನವಿ ಮಾಡಿದೆ.

242 ವಾರ್ಡ್‌ಗಳಿಗೆ ನವೆಂಬರ್ 30 ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ ಡಿಸೆಂಬರ್ 31 ರೊಳಗೆ ಚುನಾವಣೆ ನಡೆಸಬೇಕು ಎಂದು ಸೆಪ್ಟೆಂಬರ್ 30ರಂದು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ನಗರಾಭಿವೃದ್ಧಿ ಇಲಾಖೆ ಪ್ರಮಾಣ ಪತ್ರ ಸಲ್ಲಿಸಿದೆ.

ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾ.ಭಕ್ತವತ್ಸಲ ಆಯೋಗ ಸಮಿತಿ ವರದಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ನಿರ್ದೇಶನಗಳ ಆಧಾರದಲ್ಲಿ ವರದಿಯನ್ನು ಪುನರ್‌ಪರಿಶೀಲಿಸಿ ಪರಿಷ್ಕೃತ ವರದಿ ಸಲ್ಲಿಸಲು ನ್ಯಾ.ಭಕ್ತವತ್ಸಲ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಅದರಂತೆ, ಅ.31ಕ್ಕೆ ಪೂರಕ ವರದಿ ಸಲ್ಲಿಸಿರುವ ಆಯೋಗ, ಈ ಹಿಂದೆ ಸಲ್ಲಿಸಿದ್ದ ವರದಿ ಕಾನೂನು ಬದ್ಧವಾಗಿದ್ದು, ಬದಲಾವಣೆಯ ಅವಶ್ಯಕತೆ ಇಲ್ಲ ಎಂದು ಹೇಳಿದೆ.

ಹಾಗಾಗಿ, 243 ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸಿದ ಬಳಿಕ ಹಿಂದುಳಿದ ವರ್ಗ ಎ ಮತ್ತು ಬಿ ಗೆ ಮೀಸಲಾತಿ ನಿಗದಿಪಡಿಸಲು ಇರುವ ವಿಧಾನವೇನು, ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್‌ನ ನಿರ್ದೇಶನದ ಪ್ರಕಾರ ರಾಜಕೀಯ ಮೀಸಲಾತಿಗೆ ಅರ್ಹರಿರುವ ಹಿಂದುಳಿದ ವರ್ಗಗಳ ವಿವರವಾದ ಪಟ್ಟಿಯನ್ನು ಸಲ್ಲಿಸಿ, ಪೂರಕ ವರದಿಯಲ್ಲಿ ಸಲ್ಲಿಸಲಾಗಿರುವ ಹಿಂದುಳಿದ ವರ್ಗಗಳ ಜನಸಂಖ್ಯೆಯ ‘ವಾಸ್ತವ ದತ್ತಾಂಶ’ (ಎಂಪೆರಿಕಲ್ ಡಾಟಾ)ದ ದೃಢೀಕರಣವೇನು ಇತ್ಯಾದಿ ಅಂಶಗಳನ್ನು ಪರಿಶೀಲಿಸುವಂತೆ ನವೆಂಬರ್ 17ರಂದು ಆಯೋಗಕ್ಕೆ ಪತ್ರ ಬರೆಯಲಾಗಿದೆ. ಇದನ್ನು ಪರಿಶೀಲಿಸಿ ಆದಷ್ಟು ಬೇಗ ಪ್ರತಿಕ್ರಿಯಿಸುವುದಾಗಿ ಆಯೋಗ ಹೇಳಿದೆ.

ಆದ್ದರಿಂದ ಹೊಸದಾಗಿ ಮೀಸಲಾತಿ ನಿಗದಿಪಡಿಸಬೇಕೇ ಬೇಡವೇ ಎಂಬ ತೀರ್ಮಾನಕ್ಕೆ ಬರಲು ಆಯೋಗದ ನಿಲುವು ಮುಖ್ಯವಾಗಿದೆ. ಅದರ ನಂತರವಷ್ಟೇ ಅರ್ಹ ಹಿಂದುಳಿದ ವರ್ಗಗಳಿಗೆ ನ್ಯಾಯಸಮ್ಮತ ಮೀಸಲಾತಿ ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಲಿದೆ. ಸರ್ಕಾರದ ಅಫಿಡವಿಟ್ ಪುರಸ್ಕರಿಸಿದರೆ ಯಾರಿಗೂ ತೊಂದರೆ ಅಥವಾ ಬಾಧೆ ಆಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡಿರುವ ಆದೇಶವನ್ನು ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

ಇದನ್ನೂ ಓದಿ: ಎಸ್​ಡಿಪಿ​ಐ ಕಚೇರಿಗಳಿಗೆ ಬೀಗಮುದ್ರೆ: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೈಕೋರ್ಟ್​ ನೋಟಿಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.