ಬೆಂಗಳೂರು : ಪಾಲಿಕೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಭಿಯಂತರರ ಕೊರತೆ ಇರುವುದರಿಂದ 128 ಕಿರಿಯ ಎಂಜಿನಿಯರ್‌ಗಳನ್ನು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಕಿಯೋನಿಕ್ಸ್ ಸಂಸ್ಥೆಯಿಂದ ಬಿಬಿಎಂಪಿ ನಿಯೋಜನೆ ಮಾಡಿಕೊಳ್ಳುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಟ್ಟು 23 ವಿಭಾಗಗಳಲ್ಲಿ ಕಿರಿಯ ಎಂಜಿನಿಯರ್ಗಳು ಕಾರ್ಯ ನಿರ್ವಹಿಸಲಿದ್ದಾರೆ.
ರಸ್ತೆ ಮತ್ತು ಮೂಲಸೌಕರ್ಯ, ರಾಜಕಾಲುವೆ, ಕೆರೆಗಳು, ಘನತ್ಯಾಜ್ಯ ನಿರ್ವಹಣೆ, ಯೋಜನೆ ಹಾಗೂ ಟ್ರಾಫಿಕ್ ಸೇರಿ ವಿವಿಧ ವಿಭಾಗಗಳಲ್ಲಿ ಎಂಜಿನಿಯರ್‌ಗಳ ಕೊರತೆಯಿತ್ತೆಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲಸಗಳನ್ನು ಸೂಕ್ತ ಅವಧಿಯಲ್ಲಿ ಪೂರ್ಣಗೊಳಿಸಲು ಅನ್ಯ ಇಲಾಖೆಗಳಿಂದ ಎರವಲು ಸೇವೆಗೆ ಅಥವಾ ಗುತ್ತಿಗೆ ಆಧಾರದಲ್ಲಿ ಎಂಜಿನಿಯರ್‌ಗಳನ್ನು ನಿಯೋಜಿಸುವಂತೆ ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಸರ್ಕಾರ ಒಪ್ಪಿಗೆ ಸಿಕ್ಕಿದ್ದು, ಕಿಯೋನಿಕ್ಸ್ ಸಂಸ್ಥೆಯಿಂದ ಸಿವಿಲ್ ವಿಭಾಗದ 128 ಕಿರಿಯ ಎಂಜಿನಿಯರ್‌ಗಳನ್ನು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಿರುಚಿತ್ರ ನಿರ್ಮಾಪಕ ಗಣೇಶ್ ವೇಮುಲ್ಕರ್ ಅಂಗಾಂಗ ದಾನದಿಂದ 8 ಜನರಿಗೆ ಹೊಸ ಜೀವನ..