ಬೆಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಉದ್ದಿಮೆ ಪರವಾನಗಿ ನವೀಕರಣ ಶುಲ್ಕವನ್ನು ಶೇ. 25 ರಷ್ಟು ದಂಡವಿಲ್ಲದೇ ಪಾವತಿಸಿಕೊಳ್ಳುವ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
ಏಪ್ರಿಲ್ 1 ರಿಂದ ಶೇ. 100 ರಷ್ಟು ದಂಡದೊಂದಿಗೆ ಪರವಾನಗಿ ಶುಲ್ಕವನ್ನು ಪಾವತಿಸಿಕೊಳ್ಳಲಾಗುವುದು ಹಾಗೂ ನವೀಕರಣ ಮಾಡಿಕೊಳ್ಳದ ಉದ್ದಿಮೆಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಓದಿ : ಸಿದ್ದರಾಮಯ್ಯ ಭೇಟಿ ಮಾಡಿದ ಇಬ್ರಾಹಿಂ: ಹಲವು ಮಹತ್ವದ ವಿಚಾರಗಳ ಚರ್ಚೆ