ಬೆಂಗಳೂರು: ಜನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವಿವಿಧ ತೆರಿಗೆ ಮೂಲಕ ಆರ್ಥಿಕ ಹೊರೆ ಹೊರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ನಾಳೆ ಪ್ರತಿಭಟನೆ ಹಮ್ಮಿಕೊಂಡಿದೆ.
ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿ ಜನರ ಆರ್ಥಿಕ ಸಂಕಷ್ಟದ ಸಮಯದಲ್ಲಿ ನಾಗರಿಕರ ಮೇಲೆ ಅನೇಕ ತೆರಿಗೆ ಹೊರೆಯನ್ನು ವಿಧಿಸುತ್ತಿರುವುದನ್ನು ಖಂಡಿಸಿ, ಬೆಂ.ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಾಳೆ ಬಿಬಿಎಂಪಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11.30ಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಮಾವೇಶಗೊಂಡು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ನಿಲುವನ್ನ ಖಂಡಿಸಿದ್ದಾರೆ.
ಓದಿ:ಕೋವಿಡ್ ಲಸಿಕೆ ವಿಚಾರದಲ್ಲಿ ಪಾಲಿಟಿಕ್ಸ್ ಬೇಡ: ಡಿಸಿಎಂ ಅಶ್ವತ್ಥ ನಾರಾಯಣ
ಪ್ರತಿಭಟನೆ ನಂತರ ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡ ನಿಯೋಗ ಬಿಬಿಎಂಪಿ ಆಯುಕ್ತರಿಗೆ / ಆಡಳಿತಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಲಿದೆ. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರುಗಳು, ಸಂಸದರು, ಮಾಜಿ ಸಚಿವರುಗಳು, ಶಾಸಕರುಗಳು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಕಟಣೆ ತಿಳಿಸಿದೆ.