ETV Bharat / state

ಕರಡು ಮತದಾರರ ಪಟ್ಟಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

author img

By

Published : Nov 20, 2022, 7:13 PM IST

ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪರಿಶೀಲಿಸಿದರು.

BBMP Chief Commissioner checking the voter list
ಕರಡು ಮತದಾರರ ಪಟ್ಟಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ರಾಜ್ಯದಲ್ಲಿ ಮತದಾರರ ಮಾಹಿತಿ ಕಳವು ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕರಡು ಮತದಾರರ ಪಟ್ಟಿಯ ಪರಿಶೀಲನೆ ನಡೆಸಿದರು.

ನಗರದಲ್ಲಿಂದು ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಾರ್ವಜನಿಕರು, ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕೈಗೊಂಡಿರುವ ವಿಶೇಷ ಅಭಿಯಾನವನ್ನು ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದರು.

ವಿಶೇಷ ಪರಿಷ್ಕರಣೆ-2023: ಈ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು, ತಿದ್ದುಪಡಿ, ಸ್ಥಳಾಂತರಗೊಂಡಿದ್ದಲ್ಲಿ ನಮೂನೆ 6, 6ಎ, 7, 8 ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 20ರಿಂದ ಡಿಸೆಂಬರ್​ 3ರವೆರೆಗೆ ಹಾಗೂ ಡಿಸೆಂಬರ್ 8 ರಂದು ವಿಶೇಷ ಅಭಿಯಾನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮತದಾರರ ಮಾಹಿತಿಗೆ ಕನ್ನ ಆರೋಪ.. ಚಿಲುಮೆ ಆ್ಯಪ್ ಡೆವಲಪರ್​ ಪೊಲೀಸ್​ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.