ಬೆಂಗಳೂರು: ಶಾಲಾ - ಕಾಲೇಜು ಭೌತಿಕ ತರಗತಿಗಳು ಪ್ರಾರಂಭವಾಗಿರುವ ಹಿನ್ನೆಲೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಶಾಲಾ ಆಡಳಿತ ಮಂಡಳಿ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ.
ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಸೋಂಕು ನಿಯಂತ್ರಣಗೊಂಡಿರುವುದರಿಂದ ಶಾಲಾ - ಕಾಲೇಜುಗಳ ಭೌತಿಕ ತರಗತಿಗಳು ಪುನಾರಂಭಗೊಂಡಿವೆ. ಪೋಷಕರು ಈ ಬಗ್ಗೆ ಎಚ್ಚರ ವಹಿಸಿ, ಮಕ್ಕಳ ಆರೋಗ್ಯದ ಮೇಲೆ ಗಮನವಿಡಬೇಕು. ಹಾಗೆಯೇ, ಆಡಳಿತ ಮಂಡಳಿಗಳು ಕೂಡ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಸರ್ಕಾರ ಶಾಲಾ - ಕಾಲೇಜು ಆರಂಭಿಸಲು ಪ್ರತ್ಯೇಕವಾಗಿ ಕೋವಿಡ್ ಮಾರ್ಗಸೂಚಿ ಜಾರಿಗೊಳಿಸಿದೆ. ಹಾಗಾಗಿ, ವಿದ್ಯಾರ್ಥಿಗಳ ಆರೋಗ್ಯ ರಕ್ಷಿಸುವ ವಿಚಾರದಲ್ಲಿ ಶಾಲಾ - ಕಾಲೇಜು ಆಡಳಿತ ಮಂಡಳಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಮಕ್ಕಳ ಕಲಿಕೆಗೆ ಪೂರಕವಾಗಿರುವ ವಾತಾವರಣ ನಿರ್ಮಿಸಬೇಕೆಂದು ಹೇಳಿದರು.
ಓದಿ: ಸದಾ ಸುದ್ದಿಯಲ್ಲಿರಬೇಕೆಂದು ಹುಚ್ಚರು ಮಾತ್ರ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ : ಡಿ ಕೆ ಶಿವಕುಮಾರ್