ETV Bharat / state

ಬೆಂಗಳೂರು: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತಡೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

author img

By

Published : Aug 17, 2023, 9:16 PM IST

ಬೆಂಗಳೂರು ನಗರದಲ್ಲಿ ಅನಧಿಕೃತ ಫ್ಲೆಕ್ಸ್​ ಮತ್ತು ಬ್ಯಾನರ್​ ನಿಯಂತ್ರಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ​ ಸೂಚನೆ ನೀಡಿದ್ದಾರೆ.

bbmp-chief-commissioner-tushar-girinath-intructs-officials-to-prevent-banners-in-bengaluru
ಅನಧಿಕೃತ ಫ್ಲೆಕ್ಸ್, ಬ್ಯಾನರ್ ತಡೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೂಚನೆಯ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ತಡೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟರು. ಉಪಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆಯಲ್ಲಿ ಪಾಲಿಕೆ ಕ್ರಮ ಕೈಗೊಂಡು ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳು ಕಂಡರೆ 50 ಸಾವಿರ ರೂ. ದಂಡ ನಿಗದಿ ಮಾಡಿದೆ. ಯಾವುದೇ ಕಾರಣಕ್ಕೂ ಅಳವಡಿಕೆಗೆ ಅವಕಾಶವಿಲ್ಲ. ದಂಡದೊಂದಿಗೆ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಹುತೇಕ ಕಡೆ ಈಗಾಗಲೇ ಪಾಲಿಕೆ ಸಿಬ್ಬಂದಿ ತೆರವು ಕಾರ್ಯ ಕೈಗೊಂಡಿದ್ದಾರೆ. ನಗರದಾದ್ಯಂತ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್​ಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್​, ಬಂಟಿಂಗ್ಸ್ ಇತ್ಯಾದಿಗಳನ್ನು ತೆರವುಗೊಳಿಸುವ ಜವಾಬ್ದಾರಿ ಸಂಬಂಧಪಟ್ಟ ಜಂಟಿ ಆಯುಕ್ತ ಮತ್ತು ಮುಖ್ಯ ಎಂಜಿನಿಯರ್ ಅವರದ್ದಾಗಿರುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದರು.

ನಗರದಲ್ಲಿ ಒಂದೇ ಒಂದು ಅನಧಿಕೃತ ಪ್ಲೆಕ್ಸ್ ಕಂಡುಬಂದರೆ, ಪಾಲಿಕೆ ಹಾಗೂ ರಾಜ್ಯ ಸರಕಾರ ತಲಾ 50 ಸಾವಿರ ರೂ.ಗಳನ್ನು ಠೇವಣಿ ಇಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಕೂಡಲೇ ತುರ್ತು ಕ್ರಮ ಕೈಗೊಂಡು ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಹಾಗು ಎಲ್‌ಇಡಿ ಇನ್ನಿತರೆ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಈ ಕುರಿತು ಅಂಕಿ-ಅಂಶದ ದಾಖಲೆಗಳ ಸಮೇತ ಅನುಪಾಲನಾ ವರದಿಯನ್ನು ಸಲ್ಲಿಸಲು ಮುಖ್ಯ ಆಯುಕ್ತರು ಸೂಚಿಸಿದ್ದರು.

ತೆರವು ಕಾರ್ಯಾಚರಣೆ: ಬೆಂಗಳೂರು ನಗರದಲ್ಲಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಸ್ ಕಡಿವಾಣ ಹಾಕಲು ಮುಂದಾಗಿದ್ದ ರಾಜ್ಯ ಸರ್ಕಾರವು 'ಆಪರೇಷನ್ ಫ್ಲೆಕ್ಸ್' ಕಾರ್ಯಾಚರಣೆ ಕೈಗೊಂಡಿತ್ತು. ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ಬಿಬಿಎಂಪಿ ನಗರದಲ್ಲಿ ಸುಮಾರು 59,000 ಫ್ಲೆಕ್ಸ್ ಬ್ಯಾನರ್​ಗಳನ್ನು ತೆರವು ಮಾಡಿತ್ತು.

ಬಿಬಿಎಂಪಿಯ ತೆರೆದ ಸ್ಥಳಗಳ ಕಾಯ್ದೆ ಸೆಕ್ಷನ್ 3ರ ಅಡಿಯಲ್ಲಿ ಬ್ಯಾನರ್‌ ಹಾಗೂ ಬಂಟಿಂಗ್ಸ್, ಫ್ಲೆಕ್ಸ್​ ಮತ್ತು ಪೋಸ್ಟರ್‌ ಹಾಕುವುದನ್ನು ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸುವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಬಿಬಿಎಂಪಿ ತಿಳಿಸಿತ್ತು. ಆದ್ರೆ, ರಾಜಕಾರಣಿಗಳ ಬ್ಯಾನರ್ ಮತ್ತು ಫ್ಲೆಕ್ಸ್‌ಗಳು ವಿವಿಧೆಡೆ ರಾರಾಜಿಸುತ್ತಿದ್ದರೂ ಯಾವುದೇ ಕ್ರಮವಹಿಸಿರಲಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ : ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸದಿದ್ದರೆ ಜಂಟಿ ಆಯುಕ್ತ, ಮುಖ್ಯ ಅಭಿಯಂತರರೇ ಹೊಣೆ: ಬಿಬಿಎಂಪಿ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.