ETV Bharat / state

ಸರಣಿ ರಜೆ, ಮಳೆ ಬಿಡುವು: ಸಮರೋಪಾದಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾದ ಪಾಲಿಕೆ

ಬೆಂಗಳೂರು ನಗರದ ಎಂಟು ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ, ದುರಸ್ತಿ ಮಾಡುವ ಕಾರ್ಯ ಆರಂಭವಾಗಿದೆ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

author img

By

Published : Oct 24, 2022, 7:46 PM IST

ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಸರಣಿ ರಜೆ ಹಾಗೂ ಮಳೆ ಬಿಡುವು ನೀಡಿರುವ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬಿಬಿಎಂಪಿ ಚುರುಕುಗೊಳಿಸಿದೆ.

ರಸ್ತೆಗುಂಡಿಗಳಿಗೆ ಸಿಲುಕಿ ಅದೆಷ್ಟೋ ಮಂದಿ ಜೀವ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ಓಕಳಿಪುರಂನ ಸುಜಾತ ಥಿಯೇಟರ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆಯೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ರಸ್ತೆಗಳನ್ನು ಮುಚ್ಚದ ಸರ್ಕಾರಕ್ಕೆ ಪ್ರತಿ ಪಕ್ಷಗಳು ಸಿಕ್ಕಾಪಟ್ಟೆ ತರಾಟೆಗೆ ತೆಗೆದುಕೊಂಡಿದ್ದವು.

ನಗರದ ಎಂಟು ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ, ದುರಸ್ತಿ ಮಾಡುವ ಕಾರ್ಯ ಆರಂಭವಾಗಿದೆ. ಈ ವಾರದೊಳಗೆ ಬಹುತೇಕ ರಸ್ತೆ ಗುಂಡಿಗಳನ್ನು ಮುಚ್ಚುವ ಗುರಿಯನ್ನು ಪಾಲಿಕೆ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮರೋಪಾದಿಯಲ್ಲಿ ಗುಂಡಿ ಮುಚ್ಚುವ ಕೆಲಸ: ಬಿನ್ನಿಮಿಲ್ಸ್, ವಿಲ್ಸನ್ ಗಾರ್ಡನ್, ಔಟರ್‌ ರಿಂಗ್‌ ರಸ್ತೆ, ಸರ್ವೀಸ್ ರಸ್ತೆ, ದೊಡ್ಡಾನೆಕುಂದಿ, ಮಾರತ್ತಹಳ್ಳಿ, ಇಬ್ಬಲೂರು, ಇಮ್ಮಡಿಹಳ್ಳಿ ರಸ್ತೆ, ಹಗದೂರು ರಸ್ತೆ, ವೈಟ್‌ಫೀಲ್ಡ್‌ ರಸ್ತೆ, ಸಿದ್ದಾಪುರ ನಲ್ಲೂರಹಳ್ಳಿ ರಸ್ತೆ, ಗುಂಜೂರು ರಸ್ತೆ, ಶಾಂತಿನಗರ, ಆರ್ ​ಟಿ ನಗರ ಸೇರಿದಂತೆ ನಾನಾ ಕಡೆ ಸಮರೋಪಾದಿಯಲ್ಲಿ ಕೆಲಸ ನಡೆಯುತ್ತಿದೆ. ಹಬ್ಬದ ಸಂದರ್ಭದಲ್ಲೂ ಕಾರ್ಯನಿರ್ವಹಿಸಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ನಗರದಲ್ಲಿವೆ 20 ಸಾವಿರಕ್ಕೂ ಅಧಿಕ ಗುಂಡಿಗಳು: 20 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳಿವೆ ಎಂದು ಸಮೀಕ್ಷೆಯೊಂದು ಹೇಳಿದೆ. ವಾರದೊಳಗೆ ರಸ್ತೆ ಗುಂಡಿ ಮುಚ್ಚಲು ಗುರಿಯನ್ನು ಬಿಬಿಎಂಪಿ ಇಟ್ಟುಕೊಂಡಿದೆ. ಯಲಹಂಕದಲ್ಲಿ ಬಿಬಿಎಂಪಿ ತನ್ನ ಸ್ವಂತ ಡಾಂಬರು ಘಟಕವನ್ನು ಹೊಂದಿದೆ. ಇದಲ್ಲದೆ, ಯಲಹಂಕ, ದಕ್ಷಿಣ, ಪಶ್ಚಿಮ, ಪೂರ್ವ ವಲಯದಲ್ಲಿ ಖಾಸಗಿಯವರಿಂದ ತಲಾ ಒಂದು ಘಟಕವನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

5 ಘಟಕಗಳಿಂದ ಮಿಶ್ರಣ: ಈ 5 ಘಟಕಗಳಿಂದ ಮಿಶ್ರಣವನ್ನು ರವಾನಿಸಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ಸಾಧ್ಯವಾದಷ್ಟು ಬೇಗ ಗುಂಡಿಗಳನ್ನು ಮುಚ್ಚಲಾಗುತ್ತದೆ. ಹಬ್ಬದ ಸಂದರ್ಭದಲ್ಲಿ ರಜೆ ಇದ್ದರೂ ಸಿಬ್ಬಂದಿಗೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಗುಂಡಿ ಮುಚ್ಚಲು ಅಧಿಕಾರಿಗಳಿಗೆ ತರಬೇತಿ: ಬೇಕಾಬಿಟ್ಟಿಯಾಗಿ ರಸ್ತೆ ಗುಂಡಿ ಮುಚ್ಚಿ, ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ನಿರ್ಲಕ್ಷ್ಯ ವಹಿಸುತ್ತಿರುವ ಬಿಬಿಎಂಪಿ ಇಂಜಿನಿಯರ್‌ಗಳಿಗೆ ರಸ್ತೆ ಗುಂಡಿ ಮುಚ್ಚುವ ಕುರಿತಂತೆ ತರಬೇತಿ ನೀಡಲು ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಇಂಜಿನಿಯರ್‌ಗಳಿಗೆ ಗುಂಡಿ ಮುಚ್ಚಲು ಬರುತ್ತಿಲ್ಲ: ಹಲವು ವರ್ಷಗಳ ಕಾಲ ಬಿಬಿಎಂಪಿಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ ಎಂಜಿನಿಯರ್‌ಗಳಿಗೆ ಭಾರತೀಯ ರಸ್ತೆ ಕಾಂಗ್ರೆಸ್‌ನಲ್ಲಿ ನಿಗದಿಯಾಗಿರುವ ನಿಯಮದಂತೆ ರಸ್ತೆ ಗುಂಡಿ ಮುಚ್ಚುವುದಕ್ಕೆ ಬರುತ್ತಿಲ್ಲ ಎನ್ನಲಾಗುತ್ತಿದೆ.

ಅಜ್ಞಾನ ಮತ್ತು ಬೇಜಾವಾಬ್ದಾರಿತನ: ಬೇಕಾಬಿಟ್ಟಿಯಾಗಿ ರಸ್ತೆ ಗುಂಡಿ ಮುಚ್ಚುತ್ತಾ, ತೇಪೆ ಕೆಲಸ ಮಾಡುತ್ತಿರುವುದರಿಂದ ನಗರದಲ್ಲಿ ಗುಂಡಿಗಳ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಎಂಜಿನಿಯರ್‌ಗಳ ಅಜ್ಞಾನ ಮತ್ತು ಬೇಜಾವಾಬ್ದಾರಿತನವೇ ಕಾರಣ ಎಂದು ಅರಿತಿರುವ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ತರಬೇತಿ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿದ್ದು, ಶೀಘ್ರದಲ್ಲಿ ದಿನಾಂಕ ನಿಗದಿ ಮಾಡಿ ತರಬೇತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಓದಿ: ಈ ವರ್ಷದೊಳಗೆ 22 ಸಾವಿರ ರಸ್ತೆ ಗುಂಡಿ ಮುಚ್ಚುವ ಗುರಿ: ಬಿಬಿಎಂಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.