ETV Bharat / state

ಟ್ರಾನ್ಸ್‌ಫರ್ ಸ್ಟೇಷನ್‌ಗೆ ಭೇಟಿ ನೀಡಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ - Manjunath prasad news

ಬಿಬಿಎಂಪಿ ವ್ಯಾಪ್ತಿಯ ರಾಧಾಕೃಷ್ಣ ವಾರ್ಡ್ -18 ರಲ್ಲಿ ಸ್ಥಾಪಿಸಿರುವ ಟ್ರಾನ್ಸ್‌ಫರ್ ಸ್ಟೇಷನ್ ಗೆ ಇಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Manjunath prasad
Manjunath prasad
author img

By

Published : Oct 24, 2020, 1:19 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಘನತ್ಯಾಜ್ಯ ವಿಲೇವಾರಿ ಮಾಡುವ ಸಂಬಂಧ ರಾಧಾಕೃಷ್ಣ ವಾರ್ಡ್ -18 ರ ವ್ಯಾಪ್ತಿಯಲ್ಲಿ ಟ್ರಾನ್ಸ್ ಫರ್ ಸ್ಟೇಷನ್ ಸ್ಥಾಪಿಸಲಾಗಿದ್ದು, ಇಂದು ಬಿಬಿಎಂಪಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕಸ ನಿರ್ವಹಣೆ ಮಾಡುವ ದೃಷ್ಟಿಯಿಂದ ಟ್ರನ್ಸ್ ಫರ್ ಸ್ಟೇಷನ್ ಗಳನ್ನು ವೈಜ್ಞಾನಿಕವಾಗಿ ಸ್ಥಾಪಿಸಲಾಗಿದ್ದು, ಟ್ರಾನ್ಸ್ ಫರ್ ಸ್ಟೇಷನ್ ನಲ್ಲಿ ತ್ಯಾಜ್ಯವನ್ನು ಸಂಗ್ರಹಿಸಿ, ನಂತರ ಟ್ರಕ್ ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.

ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕಸ ನಿರ್ವಹಣೆ ಮಾಡುವ ಉದ್ದೇಶದಿಂದ ನಗರದ 50 ಕಡೆ ಟ್ರಾನ್ಸ್ ಫರ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುತ್ತಿದೆ. ಈ ಪೈಕಿ 15 ಟ್ರಾನ್ಸ್ ಫರ್ ಸ್ಟೇಷನ್ ಗಳ ಕಾಮಗಾರಿ ಪ್ರಗತಿಯಲ್ಲಿದ್ದು, 5 ಕಡೆ ಪೂರ್ಣಗೊಂಡಿದೆ. ಟ್ರಾನ್ಸ್ ಫರ್ ಸ್ಟೇಷನ್ ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಎಂಬುದನ್ನು ಇಂದು ಪರೀಶೀಲಿಸಲಾಗಿದೆ. ಶೀಘ್ರ ಅಧಿಕೃತವಾಗಿ ಉದ್ಘಾಟನೆಗೊಳಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಜಂಟಿ ಆಯುಕ್ತರು (ಘನತ್ಯಾಜ್ಯ) ಸರ್ಫರಾಜ್ ಖಾನ್, ಮುಖ್ಯ ಅಭಿಯಂತರರು ವಿಶ್ವನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.