ETV Bharat / state

ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

author img

By

Published : Dec 15, 2022, 7:59 AM IST

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.

BBMP commissioner visited every house to check voters list
ಮನೆಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

ಬೆಂಗಳೂರು: ಪ್ರತೀ ವರ್ಷ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯಗಳನ್ನು ನಡೆಸಲಾಗಿದ್ದು, ನ.9ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ನ.9 ರಿಂದ ಡಿ. 8 ರವರಗೆ ಅವಕಾಶ ಕಲ್ಪಿಸಿತ್ತು. ಈ ವೇಳೆ ಎಲ್ಲಾ ಬಿಎಲ್​​ಓ ಮೇಲ್ವಿಚಾರಕರು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿದ್ದಾರೆ.

ನಂತರ, ಭಾರತ ಚುನಾವಣಾ ಆಯೋಗದ ನಿದೇರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ಸೂಪರ್ ಚೆಕ್ಕಿಂಗ್ ಮಾಡುತ್ತಾರೆ. ಅದರಂತೆ ಬುಧವಾರ ಮುಖ್ಯ ಆಯುಕ್ತರು ಗೋವಿಂದರಾಜ ನಗರದ ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಮನೆಗಳು ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಕೆಲ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

12 ನಮೂನೆಗಳ ಪರಿಶೀಲನೆ: ಗೋವಿಂದರಾಜನಗರ ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ 12 ನಮೂನೆಗಳನ್ನು ಸೂಪರ್ ಚೆಕ್ಕಿಂಗ್ ಮಾಡಲಾಯಿತು. ಪರಿಶೀಲನೆ ವೇಳೆ ಎಲ್ಲವೂ ಸರಿಯಿದ್ದು, ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ ಒಂದು ಕಡೆ ಹೆಸರನ್ನು ತೆಗೆಸಲಾಗುವುದು. ಮತದಾರರ ಪಟ್ಟಿ ಪರಿಶೀಲನೆ ವೇಳೆ ಅಧಿಕಾರಿಗಳು ಸಮಯ ಹಾಗೂ ದಿನಾಂಕವನ್ನು ಸರಿಯಾಗಿ ನಮೂದಿಸದಿರುವುದು ಕೆಲ ನಮೂನೆಗಳಲ್ಲಿ ಕಂಡುಬಂದಿದ್ದು, ಅದನ್ನು ಪರಿಶೀಲನೆಯ ವೇಳೆ ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಈ ವೇಳೆ ಅಪರ ಜಿಲ್ಲಾ ಚುನಾವಣಾ ಅಧಿಕಾರಿ(ದಕ್ಷಿಣ) ಹಾಗೂ ದಕ್ಷಿಣ ವಲಯ ಜಂಟಿ ಆಯುಕ್ತ ಜಗದೀಶ್ ನಾಯ್ಕ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023: ಮನೆ ಮನೆ ಸಮೀಕ್ಷೆ....

ETV Bharat Logo

Copyright © 2024 Ushodaya Enterprises Pvt. Ltd., All Rights Reserved.