ETV Bharat / state

ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್ ಜೊತೆ ಬಿಬಿಎಂಪಿ ಆಯುಕ್ತರ ಸಭೆ: - BBMP commissioners meeting with Resident Welfare Association

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಕೊರೊನಾಗೆ ಸಂಬಂಧಿಸಿದಂತೆ ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್ ಜೊತೆ ಸಭೆ ನಡೆಸಿದ್ದಾರೆ. ಬಳಿಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ನಿಯಮಗಳನ್ನು ತಪ್ಪದೆ ಪಾಲನೆ ಮಾಡುವಂತೆ ತಿಳಿಸಿದ್ದಾರೆ.

Resident Welfare Association
ಸಭೆ ನಡೆಸಿದ ಬಿಬಿಎಂಪಿ ಆಯುಕ್ತರು
author img

By

Published : Feb 17, 2021, 6:54 AM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸಂಬಂಧ ಪಾಲಿಕೆ ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡ-03ರ ವಾರ್ ರೂಂನಲ್ಲಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅಧ್ಯಕ್ಷತೆಯಲ್ಲಿ ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು‌‌.

ಸಭೆಯಲ್ಲಿ 300 ಮಂದಿ ಆರ್.ಡಬ್ಲ್ಯೂಎಗಳು ಪಾಲ್ಗೊಂಡಿದ್ದರು. ಈ ವೇಳೆ ವಿಶೇಷ ಆಯುಕ್ತ ರಾಜೇಂದ್ರ ಚೋಳನ್, ವಿಶೇಷ ಆಯುಕ್ತರಾದ ಡಿ.ರಂದೀಪ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಬಿಎಂಪಿ ಆಯುಕ್ತರ ಸಭೆ

ರೆಸಿಡೆಂಟ್ ವೆಲ್​ಫೇರ್​ ಅಸೋಸಿಯೇಷನ್​ಗಳ ಜೊತೆ ಸಭೆ ನಡೆಸಿದ ಆಯುಕ್ತರು, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ನಿಯಮಗಳನ್ನು ತಪ್ಪದೆ ಪಾಲನೆ ಮಾಡುವಂತೆ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜೂನ್ ತಿಂಗಳಲ್ಲಿ ಪ್ರತಿನಿತ್ಯ 6,000 ಸಾವಿರ ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದವು. ಪಾಸಿಟಿವಿಟಿ ರೇಟ್ ಶೇ. 24.15 ರಷ್ಟಿತ್ತು. ಪ್ರತಿ 100 ಮಂದಿಗೆ ಕೋವಿಡ್ ಪರೀಕ್ಷೆ ಮಾಡಿದರೆ 24 ಮಂದಿಯಲ್ಲಿ ಸೋಂಕು ಕಂಡು ಬರುತ್ತಿತ್ತು. ಮರಣ ಪ್ರಮಾಣ ಶೇ.1.8 ರಷ್ಟಿತ್ತು. ಆ ಬಳಿಕ ಪಾಲಿಕೆ ವತಿಯಿಂದ ಹೆಚ್ಚು ಪರೀಕ್ಷೆಗಳು ಮಾಡುವುದು, ನಾಗರಿಕರು ಹಾಗೂ ಆರ್.ಡಬ್ಲ್ಯೂ.ಎಗಳು ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುತ್ತಿದ್ದ, ಪರಿಣಾಮ ಕ್ರಮೇಣ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಾ ಬಂದಿದೆ. ಅದರಂತೆ ಇಂದು ಪ್ರತಿನಿತ್ಯ 100 ರಿಂದ 200 ಪ್ರಕರಣಗಳು ಮಾತ್ರ ಕಂಡುಬರುತ್ತಿದ್ದು, ಪಾಸಿಟಿವಿಟಿ ರೇಟ್ ಶೇ.0.80 ರಷ್ಟಿದೆ. ಪ್ರತಿನಿತ್ಯ 20,000 ರಿಂದ 25,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಇದುವರೆಗೆ 72 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದೇ ರೀತಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಿಸಲು ಸಹಕರಿಸಬೇಕು ಎಂದರು.

ಓದಿ: ಪಂಚಮಸಾಲಿ ಸಮುದಾಯದ 2-ಎ ಮೀಸಲಾತಿ ಬೇಡಿಕೆ ಬಗ್ಗೆ ವರದಿ ನೀಡಿ: ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ನಗರದ ಕಾವಲ್ ಬೈರಸಂದ್ರದ ಬಳಿ ಮಂಜೂಶ್ರೀ ನರ್ಸಿಂಗ್ ಕಾಲೇಜಿನಲ್ಲಿ ಹೆಚ್ಚು ಮಂದಿ ಕೇರಳದವರಾಗಿದ್ದು, 210 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲರಿಗೂ ಕೋವಿಡ್ ಪರಿಕ್ಷೆ ಮಾಡಿದಾಗ 40 ಮಂದಿಗೆ ಸೋಂಕು ಕಂಡುಬಂದಿದೆ. ಬೊಮ್ಮನಹಳ್ಳಿಯ ಎಸ್ಎನ್ಎನ್ ರಾಜ್ ಲೇಕ್ ವ್ಯೂವ್ ಅಪಾರ್ಟ್​ಮೆಂಟ್​ನಲ್ಲಿ ಸಾಮಾಜಿಕ ಸಮಾರಂಭ ಆಯೋಜಿಸಿದ ಬಳಿಕ ಕೆಲವರಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ಪೈಕಿ ಅಪಾರ್ಟ್​ಮೆಂಟ್​ನಲ್ಲಿ 1,052 ಮಂದಿ ವಾಸವಿದ್ದು, ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಿದಾಗ 103 ಮಂದಿಗೆ ಸೋಂಕು ಕಂಡುಬಂದಿದೆ.

ಆದ್ದರಿಂದ ಹೆಚ್ಚು ಮಂದಿ ಕಾರ್ಯಕ್ರಮಗಳಲ್ಲಿ ಭಾಗಿಯಾವುದನ್ನು ನಿಲ್ಲಿಸಿ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಮಂದಿ ಸೇರದೆ ವ್ಯಕ್ತಿಯಿಂದ ವ್ಯಕ್ತಿಗೆ 3.25 ಮೀ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ಹರಡುವುದನ್ನು ತಡೆಯಬೇಕು. ಜೊತೆಗೆ ಅಪಾರ್ಟ್​ಮೆಂಟ್​​ನಲ್ಲಿ ಎಲ್ಲರೂ ಬಳಸುವಂತ ಸ್ಥಳಗಳಾದ, ಪಾರ್ಕ್, ಈಜುಕೊಳ, ಜಿಮ್ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ಸೋಂಕು ನಿವಾರಕ ಸಿಂಪಡಣೆ ಮಾಡಬೇಕು‌. ಈಜುಕೊಳಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ಎಲ್ಲರೂ ಕೋವಿಡ್ ನಿಯಮಗಳನ್ನು ತಪ್ಪದೆ ಪಾಲನೆ ಮಾಡಲು ತಿಳಿಸಿದರು‌.

ಸೋಂಕು ಲಕ್ಷಣಗಳಿದ್ದರೆ ಕೂಡಲೇ ಪರೀಕ್ಷೆ ಮಾಡಿಸಿ:

ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್​​ಗಳು ತಮ್ಮ ಅಪಾರ್ಟ್​ಮೆಂಟ್​​ಗಳಲ್ಲಿ ಎಲ್ಲರ ಜೊತೆ ಸಮನ್ವಯ ಮಾಡಿ ಕೋವಿಡ್ ಬಗ್ಗೆ ಅರಿವು ಮೂಡಿಸಬೇಕು. ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದರೆ ಸ್ವಯಂ ಐಸೋಲೇಟ್ ಆಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಪಾಲಿಕೆಯಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 200 ಮೊಬೈಲ್ ಟೆಸ್ಟಿಂಗ್ ಟೀಮ್‌ಗಳಿದ್ದು, ಯಾರಿಗಾದರು ಕೋವಿಡ್ ಲಕ್ಷಣಗಳು ಕಂಡುಬಂದರೆ ಕೂಡಲೇ ಉಚಿತವಾಗಿ ಆರ್.ಟಿ.ಪಿ.ಸಿ.ಆರ್ ಅಥವಾ ಆರ್.ಎ.ಟಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಅದಕ್ಕಾಗಿ ಪಾಲಿಕೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ಯಾರು ಕೂಡಾ ಗಾಬರಿ ಪಡುವಂತಹ ಅಗತ್ಯವಿಲ್ಲ. ಪರೀಕ್ಷೆ ಮಾಡಿಸಿಕೊಂಡ ಬಳಿಕ ಲಕ್ಷಣಗಳು ಇದ್ದರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬಹುದು. ಎಸಿಮ್ಟ್​​ ಮ್ಯಾಟಿಕ್ ಇದ್ದರೆ ಮನೆಯಲ್ಲೇ ಐಸೋಲೇಟ್ ಆಗಬಹುದು ಎಂದು ಆಯುಕ್ತರು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಚಿಕಿತ್ಸೆ :

ಕೋವಿಡ್ ಸೋಂಕು ದೃಢಪಟ್ಟವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಹಾಸಿಗೆಗಳು ಕೂಡ ಸಾಕಷ್ಟು ಲಭ್ಯವಿದ್ದು, ನುರಿತ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ನಿಮ್ಮೆಲ್ಲರ ಸಹಕಾರದಿಂದ ಕೋವಿಡ್ ತಡೆಯಲು ಸಾಧ್ಯ. ಕೋವಿಡ್ ಪ್ರಕರಣಗಳು ಕಂಡುಬರುವ ಪ್ರದೇಶಗಳಲ್ಲಿ ಯಾವುದೇ ಸೀಲ್​ಡೌನ್ ಆಗಲಿ, ಪೋಸ್ಟರ್ ಆಗಲಿ ಅಥವಾ ಬ್ಯಾರಿಕೇಡ್ ಆಗಲಿ ಹಾಕುವುದಿಲ್ಲ. ನಾಗರಿಕರಿಗೆಲ್ಲಾ ತಾವು ಏನು ಮಾಡಬೇಕು, ಏನು ಮಾಡಬಾರದೆಂಬ ಅರಿವಿದೆ. ಪ್ರಾಥಮಿಕ-ದ್ವಿತೀಯ ಸಂಪರ್ಕಿತರಿಗೆ ಟೆಸ್ಟ್ ಮಾಡಿ ಕ್ವಾರಂಟೈನ್‌ನಲ್ಲಿರಿಸಲಾಗುವುದು. 7 ದಿನಗಳ ನಂತರ ಅವರಿಗೆ ಟೆಸ್ಟ್ ಮಾಡಲಾಗುತ್ತದೆ. ನೆಗೆಟಿವ್ ಬಂದರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆಯುಕ್ತರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.