ETV Bharat / state

ಬೆಂಗಳೂರು: ಸಂಚಾರ ದಟ್ಟಣೆ ನಿರ್ವಹಣೆಗೆ ಪಾಲಿಕೆಯಿಂದ ಸಮನ್ವಯ ಸಭೆ

ನಗರದಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗಾಗಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಭೆ ನಡೆಸಿದ್ದಾರೆ.

bbmp meeting
ಸಂಚಾರ ದಟ್ಟಣೆ ನಿರ್ವಹಣೆಗೆ ಪಾಲಿಕೆಯಿಂದ ಸಮನ್ವಯ ಸಭೆ
author img

By

Published : Jul 12, 2022, 10:40 AM IST

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಪರಿಶೀಲನೆ ನಡೆಸಿರುವ ಜಂಕ್ಷನ್‌ಗಳಲ್ಲಿ ತೆಗೆದುಕೊಳ್ಳಬೇಕಿರುವ ತುರ್ತು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ನಡೆದ 3ನೇ ಸಮನ್ವಯ ಸಭೆ ಉದ್ದೇಶಿಸಿ ಮಾತನಾಡಿದ ರಾಕೇಶ್ ಸಿಂಗ್, ನಗರದಲ್ಲಿ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಾತ್ಕಾಲಿಕ ಪರಿಹಾರಗಳ ಜೊತೆಗೆ ಶಾಶ್ವತ ಪರಿಹಾರಗಳಿಗೂ ಹೆಚ್ಚು ಆದ್ಯತೆ ನೀಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಯೋಜನೆ ರೂಪಿಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಗೊರೆಗುಂಟೆಪಾಳ್ಯ ಜಂಕ್ಷನ್‌ನಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಪೈಕಿ ಈಗಾಗಲೇ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ತಾಜ್ ಹೋಟೆಲ್ ಪಕ್ಕದಲ್ಲಿ ಎಡ ತಿರುವು ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು. ಜೊತೆಗೆ ಗೊರಗುಂಟೆ ಪಾಳ್ಯದ ಹೊರ ವರ್ತುಲ ರಸ್ತೆಗೆ 990 ಮೀ. ಸಮನಾಂತರ ರಸ್ತೆಗೆ ಡಾಂಬರೀಕರಣವನ್ನು ತಕ್ಷಣವೇ ತೆಗೆದುಕೊಳ್ಳಬೇಕು. ಶೌಚಾಲಯಕ್ಕಾಗಿ ಜಲಮಂಡಳಿ ವತಿಯಿಂದ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನು 10 ದಿನಗಳಲ್ಲಿ ಪೂರ್ಣಗೊಳಿಸಬೇಕು. ಬಿಡಿಎ ವತಿಯಿಂದ ಅಳವಡಿಸಬೇಕಿರುವ ಸೈನೇಜ್ ವಿನ್ಯಾಸ ಮುಗಿಯುವ ಹಂತಕ್ಕೆ ಬಂದಿದ್ದು, ವಾರದೊಳಗಾಗಿ ಅಳವಡಿಸಬೇಕು. ಪಾದಚಾರಿ ಮೇಲುಸೇತುವೆಯ ಟೆಂಡರ್ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದರು.

ಗೊರಗುಂಟೆ ಪಾಳ್ಯ ಮೇಲುಸೇತುವೆ- ರೈಲ್ವೇ ಇಲಾಖೆಯ ವರದಿ ಬಾಕಿ: ಗೊರಗುಂಟೆ ಪಾಳ್ಯ ಕಡೆಯಿಂದ ಹೆಬ್ಬಾಳದ ಮಾರ್ಗದ ರೈಲ್ವೇ ಮೇಲುಸೇತುವೆಯನ್ನು ರೈಲ್ವೆ ಇಲಾಖೆಯಿಂದಲೇ ನಿರ್ಮಾಣ ಮಾಡಲಾಗಿದ್ದು, ಪಾಲಿಕೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಈ ಮೇಲ್ಸೇತುವೆಯಲ್ಲಿ ರಚನಾತ್ಮಕ ಸಮಸ್ಯೆಯಿದ್ದು, ಅದನ್ನು ರೈಲ್ವೆ ಇಲಾಖೆಯು ಪರಿಶೀಲಿಸಿ ಪಾಲಿಕೆಗೆ ವರದಿ ನೀಡಲಿದೆ. ಆ ಬಳಿಕ ಅದಕ್ಕೆ ತಗಲುವ ವೆಚ್ಚವನ್ನು ಪಾಲಿಕೆಯಿಂದ ರೈಲ್ವೆ ಇಲಾಖೆಗೆ ನೀಡಲಿದ್ದು, ರೈಲ್ವೆ ಇಲಾಖೆಯಿಂದಲೇ ದುರಸ್ತಿ ಕಾರ್ಯ ನಡೆಸಲಾಗುತ್ತದೆ ಎಂದರು.

ಹೆಬ್ಬಾಳ ಜಂಕ್ಷನ್‌ನಲ್ಲಿ ರೈಲ್ವೇ ಹಳಿ ಕೆಳಸೇತುವೆ: ಹೆಬ್ಬಾಳ ಜಂಕ್ಷನ್​ನಲ್ಲಿ ರೈಲ್ವೇ ಹಳಿ ಕೆಳಸೇತುವೆ ಯೋಜನೆ ಕೈಗೆತ್ತಿಕೊಳ್ಳುವ ಯೋಜನೆಯ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ತಾತ್ಕಾಲಿಕವಾಗಿ ಲೆವೆಲ್ ಕ್ರಾಸಿಂಗ್ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಬಸ್ ನಿಲ್ದಾಣದ ಪ್ರವೇಶ ಮಾರ್ಗ: ಸಿಲ್ಕ್ ಬೋರ್ಡ್ ಜಂಕ್ಷನ್​ನಲ್ಲಿ ಬಿಎಂಟಿಸಿ ಬಸ್ ನಿಲ್ದಾಣದ ಪ್ರವೇಶ ಮಾರ್ಗವನ್ನು ಅಂತಿಮಗೊಳಿಸಿ ಅದರಂತೆ ಬಸ್​ಗಳು ಬರುಲು ಅನುಮತಿ ನೀಡಬೇಕು. ಅಲ್ಲದೆ ಬಸ್ ನಿಲ್ದಾಣದ ಸ್ಥಳದಲ್ಲಿ ದೀಪಗಳು ಮತ್ತು ಶೌಚಾಲಯಗಳನ್ನು ಸ್ಥಾಪಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಕೆ.ಆರ್.ಪುರ ಜಂಕ್ಷನ್ ಅಭಿವೃದ್ದಿ: ಕೆ.ಆರ್.ಪುರ ಜಂಕ್ಷನ್​ನಲ್ಲಿ ಎಡಭಾಗದ ರಸ್ತೆಯು ಭಾಗಶಃ ಪೂರ್ಣಗೊಂಡಿದ್ದು, ದೇವಸ್ಥಾನದ ಬಳಿ ಬಸ್ ನಿಲ್ದಾಣವನ್ನು ಪೂರ್ಣಗೊಳಿಸಬೇಕಿದೆ ಹಾಗೂ ಬಲ ಬದಿಯ ಕಾಮಗಾರಿಗಳನ್ನು ಆರಂಭಿಸಬೇಕು. ಈ ಸಂಬಂಧ ವಲಯ ಆಯುಕ್ತರು, ಬಿ.ಎಂ.ಆರ್.ಸಿ.ಎಲ್, ಬಿಡಿಎ ಹಾಗೂ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಹೇಳಿದರು.

ಜಯದೇವ ಜಂಕ್ಷನ್​ನಲ್ಲಿ ಸರ್ವಿಸ್ ರಸ್ತೆಯಲ್ಲಿ ಭಗ್ನಾವಶೇಷ ತೆರವು: ಜಯದೇವ ಜಂಕ್ಷನ್​ನಲ್ಲಿ ಸರ್ವಿಸ್ ರಸ್ತೆಯಲ್ಲಿರುವ ಭಗ್ನಾವಶೇಷಗಳನ್ನು ಬಿಎಂಆರ್‌ಸಿಎಲ್ ನಿಂದ ತೆರವುಗೊಳಿಸಲಾಗಿದೆ. ಇನ್ನು ಬನ್ನೇರುಘಟ್ಟ ರಸ್ತೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದ್ದು, ಜಯದೇವ ಕೆಳಸೇತುವೆ ಕಾಮಗಾರಿಯನ್ನು 15 ಜುಲೈ 2022 ರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಶಿವಾನಂದ ಸರ್ಕಲ್ ಮೇಲ್ಸೇತುವೆ ಆಗಸ್ಟ್ 5ಕ್ಕೆ ಪೂರ್ಣ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಶಿವಾನಂದ ಸರ್ಕಲ್ ಮೇಲ್ಸೇತುವೆ ಕಾಮಗಾರಿಯನ್ನು ಆಗಸ್ಟ್ 5ಕ್ಕೆ ಪೂರ್ಣಗೊಳಿಸಲು ಯೋಜನಾ ವಿಭಾಗದ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು.

ವಿವಿಧ ಮೇಲ್ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣ: ಗಾಳಿ ಆಂಜನೇಯ ದೇವಸ್ಥಾನ ಜಂಕ್ಷನ್, ಕೆಂಗೇರಿ ಸ್ಯಾಟಲೈಟ್ ಬಸ್ ನಿಲ್ದಾಣ ಮತ್ತು ಸುಮನಹಳ್ಳಿ ಜಂಕ್ಷನ್‌ನಲ್ಲಿ ಪಾದಚಾರಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕೆಂಪೇಗೌಡ ರಸ್ತೆ(ಕೆ.ಜಿ.ರಸ್ತೆ)ಯ ಸಂತೋಷ್ ಚಿತ್ರಮಂದಿರದ ಬಳಿಯಿರುವ ಪಾದಚಾರಿ ಮೇಲುಸೇತುವೆಯು ಶಿಥಿಲಗೊಂಡಿದ್ದು, ಅದನ್ನು ಕೂಡಲೆ ತೆರವುಗೊಳಿಸಿ ಹೊಸದಾಗಿ ಪಾದಚಾರಿ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

6 ಪ್ರಮುಖ ಜಂಕ್ಷನ್‌ಗಳಲ್ಲಿ ಹೋಮ್ ಗಾರ್ಡ್ ನಿಯೋಜನೆ: ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮಾತನಾಡಿ, ಎಲ್ಲ 6 ಪ್ರಮುಖ ಜಂಕ್ಷನ್‌ಗಳಲ್ಲಿ ತಲಾ 25 ಹೋಮ್ ಗಾರ್ಡ್​ಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಲಮಂಡಳಿ ಅಧ್ಯಕ್ಷ ಜಯರಾಮ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಸಂಚಾರಿ ಪೋಲಿಸ್ ಜಂಟಿ ಆಯುಕ್ತ ರವಿಕಾಂತೆ ಗೌಡ, ಸ್ಮಾರ್ಟ್ ಸಿಟಿ ಹಾಗೂ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಪಾಲಿಕೆಯ ಎಲ್ಲಾ ವಲಯ/ವಿಶೇಷ ಆಯುಕ್ತರು, ಬಿ.ಎಂ.ಆರ್.ಸಿ.ಎಲ್, ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಕೆ.ಪಿ.ಟಿ.ಸಿ.ಎಲ್, ರೈಲ್ವೇ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಕರಾವಳಿಯ ಮಳೆ ಹಾನಿ ಪ್ರದೇಶಗಳಿಂದು ಸಿಎಂ ಬೊಮ್ಮಾಯಿ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.