ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿರುವ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ (ಡಿ. 18) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠದ ಎದುರು ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಇದನ್ನೂ ಓದಿ : ಬದಲಾಗಲಿದೆ ಬಿಬಿಎಂಪಿ ರೂಪುರೇಷೆ: ಇನ್ಮುಂದೆ ಮೇಯರ್ ಅಧಿಕಾರವಧಿ 30 ತಿಂಗಳು
ಬಿಬಿಎಂಪಿ ಚುನಾವಣೆ ನಡೆಸುವಂತೆ ಡಿ. 4ರಂದು ಹೈಕೋರ್ಟ್ ಆದೇಶಿಸಿತ್ತು. ಪಾಲಿಕೆ ವಾರ್ಡ್‌ಗಳ ಸಂಖ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಎಂಸಿ ಕಾಯ್ದೆಗೆ ತರಲಾಗಿರುವ ತಿದ್ದುಪಡಿ ಈ ಚುನಾವಣೆಗೆ ಅನ್ವಯಿಸುವುದಿಲ್ಲ. ಸರ್ಕಾರ ಮೀಸಲಾತಿ ಅಧಿಸೂಚನೆ ಹೊರಡಿಸಿ 6 ವಾರಗಳ ಒಳಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.