ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಕಾಟನ್‌ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಸಹಾಯ ಮಾಡಿದ ಆರೋಪದಡಿ ಈ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರಮುಖ ಆರೋಪಿಗಳು ಎನ್ನಲಾದ ಪೀಟರ್ ಹಾಗೂ ಸೂರ್ಯನ ಪತ್ತೆಗೆ ಶೋಧ ನಡೆಯುತ್ತಿದೆ.
ಈ ಪ್ರಕರಣ ಸಂಬಂಧ ಇದುವರೆಗೂ 50ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. ಶಂಕಿತ ಪೀಟರ್ ಆಗಾಗ ರೇಖಾ ಅವರ ಬಳಿ ಹಣಕ್ಕೆ ಡಿಮಾಂಡ್ ಮಾಡುತ್ತಿದ್ದ ಎಂಬುವುದು ಗೊತ್ತಾಗಿದೆ. ಕೊಲೆ ಪ್ರಕರಣದ ಬಳಿಕ ಆತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಹೀಗಾಗಿ ಆತನ ಮೇಲೆ ಅನುಮಾನವಿದೆ ಎಂದು ಪೊಲೀಸರೆದುರು ರೇಖಾ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ.
ಮರಣೋತ್ತರ ಪರೀಕ್ಷೆ ಮುಕ್ತಾಯ
ಕಿಮ್ಸ್ ಆಸ್ಪತ್ರೆಯಲ್ಲಿರುವ ರೇಖಾ ಕದಿರೇಶ್ ಶವದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಕೆಲ ಹೊತ್ತಿನ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಪಿ.ಸಿ.ಮೋಹನ್ ಆಸ್ಪತ್ರೆಗೆ ತೆರಳಿ ರೇಖಾ ಕದಿರೇಶ್ ಅಂತಿಮ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಮಹಿಳಾ ಮಾಜಿ ಕಾರ್ಪೊರೇಟರ್ ಬರ್ಬರ ಹತ್ಯೆ.. ಅಂದು ಪತಿ, ಇಂದು ಪತ್ನಿಯ ಕೊಲೆ!