ETV Bharat / state

ಪಾಲಿಕೆ ವ್ಯಾಪ್ತಿಯ ಮರ ತೆರವುಗೊಳಿಸುವಲ್ಲಿ ಮಾರ್ಗಸೂಚಿ ಪಾಲನೆ; ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ - ಹೈಕೋರ್ಟ್

ಮರ ತೆರವುಗೊಳಿಸುವ ಅರ್ಜಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಅಧಿಕಾರಿಗಳು ಮತ್ತು ಡಿಸಿಎಫ್‌ಗಳು ಮಾರ್ಗಸೂಚಿ, ಮಾನದಂಡಗಳನ್ನು ಪಾಲಿಸುತ್ತಿದ್ದಾರೆ ಎಂದು ಬಿಬಿಎಂಪಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

high-court
ಹೈಕೋರ್ಟ್
author img

By ETV Bharat Karnataka Team

Published : Dec 13, 2023, 7:21 AM IST

ಬೆಂಗಳೂರು: ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಮಾರ್ಗಸೂಚಿ, ಮಾನದಂಡಗಳನ್ನು ರೂಪಿಸಲಾಗಿದ್ದು, ಅವುಗಳನ್ನು ಎಲ್ಲಾ ಟ್ರೀ(ಮರ) ಅಧಿಕಾರಿಗಳು ಮತ್ತು ಡಿಸಿಎಫ್‌ಗಳು ಪಾಲನೆ ಮಾಡುತ್ತಿದ್ದಾರೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಮನೆಯ ಪಕ್ಕದ ಮರ ಬೀಳುವ ಸ್ಥಿತಿಯಲ್ಲಿದ್ದು ಅದನ್ನು ತೆರವುಗೊಳಿಸುತ್ತಿಲ್ಲ ಎಂದು ಕೋರಿ ಬೆಂಗಳೂರಿನ ಡಾ. ವಿ ಎಲ್ ನಂದೀಶ್ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠಕ್ಕೆ ಬಿಬಿಎಂಪಿ ಈ ಮಾಹಿತಿ ನೀಡಿದೆ.

ಬಿಬಿಎಂಪಿ ಪರ ವಕೀಲರು ನೀಡಿದ ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ, ಪಾಲಿಕೆ ಎಸ್‌ಒಪಿ ಪಾಲನೆ ಮಾಡುತ್ತಿರುವುದಾಗಿ ಹೇಳಿದೆ. ಹಾಗಾಗಿ ನ್ಯಾಯಾಲಯ ಎಸ್​ಒಪಿ ಸಿಂಧುತ್ವದ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದೆ ಅರ್ಜಿಯನ್ನು ವಿಲೇವಾರಿ ಮಾಡುತ್ತಿದೆ ಎಂದು ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಈ ವ್ಯಾಜ್ಯದ ಮೂಲ ಕಾರಣ ಒಂದು ಅಪಾಯಕಾರಿ ಮರ, ಪಾಲಿಕೆ ನ್ಯಾಯಾಲಯದ ಸೂಚನೆಯಂತೆ ಈಗಾಗಲೇ ಆ ಮರವನ್ನು ತೆರವುಗೊಳಿಸಿದೆ. ಹಾಗಾಗಿ ಅರ್ಜಿಯನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ಪೀಠ ತಿಳಿಸಿದೆ.

ಪ್ರಕರಣ ಸಂಬಂಧ ನ್ಯಾಯಾಲಯ ನೀಡಿದ್ದ ನೋಟಿಸ್‌ಗೆ ಉತ್ತರಿಸಿದ ಪಾಲಿಕೆ ಮೊದಲಿಗೆ, ಭೂಮಿಯ ಮಾಲೀಕರಿಗೆ ಮಾತ್ರ ಮರವನ್ನು ತೆರವುಗೊಳಿಸಲು ಅನುಮತಿ ನೀಡಲಾಗುವುದು, ಪಕ್ಕದ ಮಾಲೀಕರಿಗೆ ಅನುಮತಿ ನೀಡಲಾಗದು ಎಂದು ಹೇಳಿತ್ತು. ಆದರೆ ನ್ಯಾಯಾಲಯ, ಮರ ಇರುವ ನಿವೇಶನದ ಮಾಲೀಕರು ಮರವನ್ನು ತೆರವುಗೊಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದರೆ, ಅದರಿಂದ ನೆರೆಯ ಮಾಲೀಕರಿಗೆ ತೊಂದರೆ ಆಗುತ್ತಿದೆ. ಅವರ ದೃಷ್ಟಿಯಿಂದ ಪಾಲಿಕೆ ಸ್ಥಳ ಪರಿಶೀಲನೆ ನಡೆಸಿ, ಮರವನ್ನು ತೆರವುಗೊಳಿಸುವ ಬಗ್ಗೆ ತೀರ್ಮಾನಿಸಬಹುದು ಎಂದು ಆದೇಶಿಸಿತ್ತು.

ಅದರಂತೆ ಪಾಲಿಕೆ ಸ್ಥಳ ಪರಿಶೀಲನೆ ನಡೆಸಿ, ಮರವನ್ನು ತೆರವುಗೊಳಿಸಿತು, ಅದಕ್ಕೆ ತಗುಲಿದ ವೆಚ್ಚವನ್ನು ಮರ ಇದ್ದ ನಿವೇಶನದ ಮಾಲೀಕರಿಂದ ವಸೂಲು ಮಾಡಲಾಗಿದೆ ಎಂದು ಬಿಬಿಎಂಪಿ ನ್ಯಾಯಾಲಯಕ್ಕೆ ತಿಳಿಸಿತ್ತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಮ್ಮ ಕಕ್ಷಿದಾರರ ಮನೆಗೆ ಹೊಂದಿಕೊಂಡಂತೆ ಪಕ್ಕದಲ್ಲಿರುವ ನಿವೇಶನದಲ್ಲಿ ಮರ ಇದೆ. ಅದು ಅಪಾಯಕಾರಿ ಸ್ಥಿತಿಯಲ್ಲಿದ್ದು, ಆ ಮರವನ್ನು ತೆರವುಗೊಳಿಸಬೇಕಾಗಿದೆ. ಆ ಬಗ್ಗೆ ನಿವೇಶನದ ಮಾಲೀಕರಿಗೆ ಮನವಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ. ಮರದಿಂದ ಜೀವ ಹಾನಿಯಾಗುವ ಸಾಧ್ಯತೆ ಇದೆ. ಹಾಗಾಗಿ ಒಂದು ಮರವನ್ನು ತೆರವುಗೊಳಿಸಲು ಅನುಮತಿ ನೀಡಬೇಕು, ಇಲ್ಲವೇ ನೆರೆಯವರಿಗೆ ಮರವನ್ನು ತೆರವುಗೊಳಿಸಲು ಆದೇಶ ನೀಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ವಿಡಿಯೋ, ಫೋಟೋ ಪ್ರಸಾರ ಮಾಡದಂತೆ ಮಾಧ್ಯಮಕ್ಕೆ ಹೈಕೋರ್ಟ್​ ತಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.