ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾಡುವವರಿಗೆ ದಂಡ ವಿಧಿಸುವ ಅಧಿಕಾರವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರ್ಷಲ್‌ಗಳಿಗೆ ನೀಡಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಕಳೆದ ಸೋಮವಾರ (08-06-2020) ಅಧಿಸೂಚನೆ ಹೊರಡಿಸಿದ್ದು, ಮಾಸ್ಕ್ ಇಲ್ಲದೆ ರಸ್ತೆಗೆ ಇಳಿಯುವವರ ವಿರುದ್ದ ಬಿಬಿಎಂಪಿ ಮಾರ್ಷಲ್ಗಳು ಕಾರ್ಯಾಚರಣೆಗೆ ಇಳಿದಿದ್ದಾರೆ.
ನಗರದಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವವರಿಂದ ಮಾರ್ಷಲ್ಗಳು ದಂಡ ಸಂಗ್ರಹಿಸುತ್ತಿದ್ದಾರೆ. ಮಾಸ್ಕ್ ಧರಿಸದವರಿಗೆ 200 ರೂ. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಂದಲೂ 200 ರೂ. ದಂಡ ವಸೂಲಿ ಮಾಡುತ್ತಿದ್ದಾರೆ.
ಇನ್ನು ಈ ಹಿಂದೆ ಕೂಡ ಬಿಬಿಎಂಪಿಯಿಂದ ಮಾಸ್ಕ್ ಧರಿಸದವರಿಗೆ 1,000 ರೂಪಾಯಿ ದಂಡ ವಿಧಿಸಲಾಗಿತ್ತು, ನಂತರ ಅದನ್ನು 200 ರೂ.ಗಳಿಗೆ ಇಳಿಸಿದ್ರು. ಆದ್ರೆ ಒಂದಿಷ್ಟು ದಿನಗಳ ನಂತರ ಹೈಕೋರ್ಟ್ ನಿರ್ದೇಶನದ ಮೇರೆಗೆ ದಂಡ ವಿಧಿಸುವುದನ್ನು ನಿಲ್ಲಿಸಿದ್ದರು. ಆದರೀಗ ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳು ಹೆಚ್ಚಾಗುತ್ತಿದ್ದು, ಜನರು ಮಾಸ್ಕ್ ಧರಿಸಲು ಬೇಜವಬ್ದಾರಿ ತೋರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಬಿಬಿಎಂಪಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದೆ.