ETV Bharat / state

ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ: ಹೈಕೋರ್ಟ್​​ಗೆ ಬಿಬಿಎಂಪಿ ಮಾಹಿತಿ - ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ

ಹೈಕೋರ್ಟ್​ನಲ್ಲಿ ವಿಚಾರಣೆ ವೇಳೆ ಬಿಬಿಎಂಪಿ ವಕೀಲರು ಬೆಂಗಳೂರಿನ 182 ಪ್ರಮುಖ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಏಪ್ರಿಲ್ 20ರಂದು ಎಆರ್‌ಟಿಎಸ್ ಸಂಸ್ಥೆಗೆ ಬಿಬಿಎಂಪಿ ತಾತ್ಕಾಲಿಕ ಕಾರ್ಯಾದೇಶ ನೀಡಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ

author img

By

Published : Apr 21, 2022, 8:05 PM IST

ಬೆಂಗಳೂರು: ಬೆಂಗಳೂರು ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರ ಸಂಸ್ಥೆಯಾದ ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್ (ಎಆರ್‌ಟಿಎಸ್) ಸಂಸ್ಥೆಗೆ ಕಾರ್ಯಾದೇಶ ನೀಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಸೂಕ್ತ ರೀತಿಯಲ್ಲಿ ರಸ್ತೆಗಳನ್ನು ನಿರ್ವಹಣೆ ಮಾಡಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕೆಂದು ಕೋರಿ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಬೆಂಗಳೂರಿನ 182 ಪ್ರಮುಖ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಏಪ್ರಿಲ್ 20ರಂದು ಎಆರ್‌ಟಿಎಸ್ ಸಂಸ್ಥೆಗೆ ಬಿಬಿಎಂಪಿ ತಾತ್ಕಾಲಿಕ ಕಾರ್ಯಾದೇಶ ನೀಡಿದೆ ಎಂದರು. ಹೇಳಿಕೆ ದಾಖಲಿಸಿಕೊಂಡ ಪೀಠ, ತಕ್ಷಣ ರಸ್ತೆ ಗುಂಡಿ ಮುಚ್ಚುವ ಕೆಲಸ ಆರಂಭಿಸುವಂತೆ ಎಆರ್‌ಟಿಸಿಗೆ ನಿರ್ದೇಶಿಸಿ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿತು.

ಇದೇ ವೇಳೆ ಲೋಕೋಪಯೋಗಿ ಇಲಾಖೆ ನಿಗದಿಪಡಿಸಿರುವ ದರಕ್ಕಿಂತ ಕಡಿಮೆ ದರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪೀಠ, ದರ ಪರಿಷ್ಕರಣೆ ಕುರಿತಂತೆ ಪರಿಶೀಲಿಸಲು ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶಿಸಿತು. ಹಿಂದಿನ ವಿಚಾರಣೆ ವೇಳೆ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತ್ತು. ಬರೀ ನೆಪಗಳನ್ನು ಹೇಳುವುದನ್ನು ಹಾಗೂ ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಬಿಡಿ. ಮಳೆಗಾಲ ಮುಂದಿದ್ದು, ಶೀಘ್ರವಾಗಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ ನೀಡಿ ಎಂದು ಪಾಲಿಕೆಗೆ ತಾಕೀತು ಮಾಡಿತ್ತಲ್ಲದೇ, ಕಾರ್ಯಾದೇಶ ನೀಡಲು ಗುರುವಾರದವರೆಗೆ ಗಡುವು ವಿಧಿಸಿತ್ತು.

ಇದನ್ನೂ ಓದಿ: ಮಲ್ಲೇಶ್ವರಂನ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಪೊಲೀಸ್​ ಇಲಾಖೆಯಿಂದ ನೋಟಿಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.