ಬೆಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿವೆ. ಡಾಂಬರೀಕರಣ ಹಾಗೂ ದುರಸ್ತಿ ಕೆಲಸಗಳಿಗೆ 3 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಈ ಕುರಿತು ಅಫಿಡವಿಟ್ ಸಲ್ಲಿಸಿರುವ ಬಿಬಿಎಂಪಿ, ಆನಂದ್ ರಾವ್ ವೃತ್ತ, ಹೆಣ್ಣೂರು, ಹೆಬ್ಬಾಳ, ಕೆಎಸ್‌ಆರ್ ರೈಲು ನಿಲ್ದಾಣ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದೆ.
'ಮುಂದಿನ ನಾಲ್ಕೈದು ತಿಂಗಳಲ್ಲಿ ನಗರದಾದ್ಯಂತ 450 ಕಿ.ಮೀ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳು ಮತ್ತು 2,500 ಕಿ.ಮೀ ವಾರ್ಡ್ ರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗುವುದು. 5 ದಿನಗಳ ಹಿಂದೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ' ಎಂದು ಪಾಲಿಕೆ ಮುಖ್ಯ ಇಂಜಿನಿಯರ್ ಬಿ.ಎಸ್ ಪ್ರಹ್ಲಾದ್ ತಿಳಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಪ್ರತಿಕ್ರಿಯಿಸಿ, 'ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಕ್ಕಿದೆ. ಪಾಲಿಕೆ ಬಹುತೇಕ ಪ್ರದೇಶಗಳಲ್ಲಿ ಅಸ್ತಿತ್ವದಲ್ಲಿಲ್ಲ. ಕಳೆದ ಕೆಲವು ದಿನಗಳಿಂದಷ್ಟೇ ಕೆಲಸದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ' ಎಂದು ಹೇಳಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ 32,011 ರಸ್ತೆ ಗುಂಡಿಗಳು ಪತ್ತೆ: ಶೇ. 92.21ರಷ್ಟು ದುರಸ್ತಿ