ETV Bharat / state

ಮಹಿಳೆಯರಿಗೆ ಉಚಿತ ಚಿಕಿತ್ಸೆ.. ಆಯುಷ್ಮತಿ ಕ್ಲಿನಿಕ್ ತೆರೆಯಲು ಬಿಬಿಎಂಪಿ ಸಿದ್ಧತೆ

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಜನರಿಗೆ ಸೇವೆ ನೀಡಲು ಆಯುಷ್ಮತಿ ಕ್ಲಿನಿಕ್​ಗಳನ್ನು ತೆರೆಯಲಾಗಿದೆ.

author img

By

Published : Mar 26, 2023, 7:27 PM IST

Brihat Bangalore Mahanagara Corporation
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಆಯುಷ್ಮತಿ ಕ್ಲಿನಿಕ್​ಗಳು ಮಂಜೂರಾಗಿವೆ. ಇದೀಗ ಈ ಕ್ಲಿನಿಕ್​ಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗಿತ್ತು. ಅದೇ ರೀತಿ ಆಯುಷ್ಮತಿ ಕ್ಲಿನಿಕ್ ಗಳನ್ನು ತೆರೆದು, ತಜ್ಞ ವೈದ್ಯರಿಂದ ಮಹಿಳೆಯರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ.

ಈ ಕುರಿತು ಎನ್‌ಎಚ್‌ಎಂನ ನಿರ್ದೇಶಕ ಡಾ.ನವೀನ್ ಭಟ್ ಅವರು ಮಾತನಾಡಿ, ರಾಜ್ಯದಲ್ಲಿ 50 ಕ್ಲಿನಿಕ್‌ಗಳು ಕಾರ್ಯಾಚರಣೆ ಮಾಡಲು ಸಿದ್ಧವಾಗಿವೆ. 128 ಕ್ಲಿನಿಕ್‌ಗಳ ಪೈಕಿ 70 ಕ್ಲಿನಿಕ್ ಗಳನ್ನು ಮಾರ್ಚ್ ಅಂತ್ಯದೊಳಗೆ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಿದರು.

ಜುಲೈ 2022 ರಲ್ಲಿ ಯೋಜನೆಯ ಬ್ಲೂ ಪ್ರಿಂಟ್ : ರಾಜ್ಯದ ನಗರ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕ್‌ಗಳನ್ನು ತೆರೆಯಲು ಜುಲೈ 2022 ರಲ್ಲಿ ಯೋಜನೆಯನ್ನು ರೂಪಿಸಲಾಗಿತ್ತು. ಆರೋಗ್ಯ ಇಲಾಖೆ ಘೋಷಿಸಿರುವಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ 57 ಕ್ಲಿನಿಕ್ ಗಳು ಮತ್ತು ಉಳಿದ ಕ್ಲಿನಿಕ್ ಗಳನ್ನು ರಾಜ್ಯದ ಇತರ ಭಾಗಗಳಲ್ಲಿ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಡಾ. ನವೀನ್​ ಭಟ್​ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವೆ : ನಗರದ ಜನರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವೆಗಳನ್ನು ಒದಗಿಸುವುದು ಈ ಚಿಕಿತ್ಸಾಲಯಗಳ ಉದ್ದೇಶವಾಗಿದೆ ಎಂದು ಡಾ. ನವೀನ್​ ಭಟ್​ ಅವರು ವಿವರಿಸಿದರು.

ಯುಪಿಎಚ್‌ಸಿಗಳಲ್ಲಿ ಹಲವು ತಜ್ಞರು : ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಪ್ರಸೂತಿ ತಜ್ಞರು ಮತ್ತು ಮಾನಸಿಕ ಆರೋಗ್ಯ ತಜ್ಞರ ಸೇವೆಗಳನ್ನು ರೋಗಿಗಳಿಗೆ ಲಭ್ಯವಾಗುವಂತೆ ಯುಪಿಎಚ್‌ಸಿಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಡಾ. ಭಟ್ ತಿಳಿಸಿದರು.

ನಮ್ಮ ಕ್ಲಿನಿಕ್​ : ಈ ಹಿಂದೆಯೂ ಸರ್ಕಾರ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಪ್ರತಿ 50,000 ಜನಸಂಖ್ಯೆಗೆ ಒಂದರಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದ್ದು, ಅವು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ 15 ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್​ಗಳನ್ನು ತೆರೆಯಲಾಗಿತ್ತು. ಈ ಕುರಿತು ಸಾರ್ವಜನಿಕ ವಲಯದಿಂದ ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಸೇವೆಗಳಿಂದ ವಂಚಿತರಾದ ಜನರಿಗಾಗಿ ಈ ವ್ಯವಸ್ಥೆ ಪ್ರಾರಂಭಿಸಲಾಗಿದ್ದು, ಖಾಸಗಿ ವಲಯದ ಕ್ಲಿನಿಕ್​ಗಳನ್ನು ಸರ್ಕಾರವೇ ಕೈಗೆತ್ತಿಕೊಂಡು ಪ್ರಥಮ ಹಂತದಲ್ಲಿ 438 ಹಾಗೂ 108 ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್​ಗಳನ್ನು ಸ್ಥಾಪಿಸಿದೆ. ಇನ್ನು ಈ ಕ್ಲಿನಿಕ್​ಗಳಲ್ಲಿ ಸಾಮಾನ್ಯವಾಗಿರುವ ನೆಗಡಿ, ಕೆಮ್ಮಿನ ಜೊತೆಗೆ ಬಿಪಿ, ಮಧುಮೇಹ ಮುಂತಾದ ಕಾಯಿಲೆಗಳ ತಪಾಸಣೆ ಹಾಗೂ ಪರೀಕ್ಷೆಯೂ ಆಗುತ್ತಿದ್ದು, ಔಷಧಿಯನ್ನೂ ಉಚಿತವಾಗಿ ನೀಡಲಾಗುತ್ತಿದೆ.

ಟೆಲಿಮೆಡಿಸಿನ್ ವ್ಯವಸ್ಥೆಯೂ ಇದ್ದು, ಹೆಚ್ಚಿನ ಸಮಸ್ಯೆ ಇದ್ದರೆ, ಪರಿಣಿತರ ಜೊತೆಗೆ ಟೆಲಿಸಂವಾದ ನಡೆಸಿ ಅಗತ್ಯ ಚಿಕಿತ್ಸೆಯನ್ನು ನೀಡಲಾಗುವುದು. ಇದು ಸಾಮಾನ್ಯ ನಾಗರಿಕರ ಆರೋಗ್ಯ ಸೇವೆಯನ್ನು ಇನ್ನಷ್ಟು ಗಟ್ಟಿಗೊಳಿದೆ. ಕಳೆದ ಬಾರಿ ಬಜೆಟ್ ನಲ್ಲಿ ಹೇಳಿದ್ದು, ಅದರಂತೆ ಕಳೆದ ಫೆಬ್ರವರಿ ತಿಂಗಳಿನಿಂದ ಸೇವೆ ಆರಂಭವಾಗಿದೆ.

ಇದನ್ನೂ ಓದಿ :ರಾಜ್ಯದ ದೊಡ್ಡ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಸಾಲದು: ಒಕ್ಕಲಿಗರ ಹೋರಾಟ ಸಮಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.