ನೆಲಮಂಗಲ: ಬಿಬಿಎಂಪಿ ಕಸದ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಸ್ಸೋಂ ಮೂಲದ ಬಾಬು ಪೇಗು (35) ಎಂಬಾತ ಕಸದ ಲಾರಿಯಿಂದ ಮೃತಪಟ್ಟ ದುರ್ದೈವಿ.
ಅಂದಹಾಗೆ ಬೆಂಗಳೂರಿನ ಕಸವನ್ನು ಬಿಬಿಎಂಪಿ ಲಾರಿಗಳ ಮೂಲಕ ದೊಡ್ಡಬಳ್ಳಾಪುರ ಕಡೆಯ ಎಂಎಸ್ಜಿಪಿ ಕಸದ ಘಟಕಕ್ಕೆ ಸಾಗಿಸಲಾಗುತ್ತದೆ. ಹೀಗೆ ಕಸ ತುಂಬಿಕೊಂಡು ಬರುತ್ತಿದ್ದ ಬಿಬಿಎಂಪಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಘಟನೆ ಬಳಿಕ ಬಿಬಿಎಂಪಿ ಲಾರಿ ಚಾಲಕ ಸ್ಥಳದಲ್ಲೇ ಗಾಡಿಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸಾವು.. 6ಕ್ಕೂ ಅಧಿಕ ಮಂದಿಗೆ ಗಾಯ