ETV Bharat / state

ಓಸಿ ಪಡೆದ ಬಳಿಕ ಕಟ್ಟಡ ಮಾರ್ಪಾಡು ನಿಯಮ ಬಾಹಿರ.. ಬಿಬಿಎಂಪಿ ಆದೇಶ - ಬಿಬಿಎಂಪಿಯಿಂದ ಹೊಸ ಆದೇಶ

ಬೆಂಗಳೂರಿನ ದೇವರಚಿಕ್ಕನಹಳ್ಳಿ ಅಪಾರ್ಟ್​​​ಮೆಂಟ್​​​ನಲ್ಲಿ ನಡೆದ ಬೆಂಕಿ ಅನಾಹುತ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಪಾರ್ಟ್​​​ಮೆಂಟ್ ಕಟ್ಟಡಗಳ ನಿರ್ಮಾಣದ ಕೆಲವು ನಿಯಮಗಳನ್ನು ಮಾರ್ಪಾಡು ಮಾಡಿದೆ.

BBMP
ಬಿಬಿಎಂಪಿ
author img

By

Published : Sep 22, 2021, 7:41 PM IST

ಬೆಂಗಳೂರು: ದೇವರಚಿಕ್ಕನಹಳ್ಳಿ ಅಪಾರ್ಟ್​​​ಮೆಂಟ್​​​ನಲ್ಲಿ ನಡೆದ ಬೆಂಕಿ ಅನಾಹುತ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಕಟ್ಟಡ ನಿರ್ಮಾಣದ ನಿಯಮಗಳಲ್ಲಿ ಕೆಲವು ಮಾರ್ಪಾಡು ಮಾಡಿ ಆದೇಶ ಹೊರಡಿಸಿದೆ.

ಕಟ್ಟಡಗಳ ನಿರ್ಮಾಣದ ಬಳಿಕ ಬಿಬಿಎಂಪಿ ಪರಿಶೀಲಿಸಿ ಸ್ವಾಧೀನಾನುಭವ ಪತ್ರ ಕೊಡಲಿದೆ. ಆ ನಂತರ ಕಟ್ಟಡದಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಮಾಡುವುದಾದರೆ ಮತ್ತೆ ಪಾಲಿಕೆಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷಿತ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಈ ಆದೇಶ ಹೊರಡಿಸಲಾಗಿದೆ.

order copy
ಆದೇಶದ ಪ್ರತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡಗಳಿಗೆ ಕಟ್ಟಡ ಉಪವಿಧಿ - 2003, ಪರಿಷ್ಕೃತ ವಲಯ ನಿಯಮಾವಳಿಗಳು -2015 ಮತ್ತು ನ್ಯಾಷನಲ್​​​ ಬಿಲ್ಡಿಂಗ್​​​ ಕೋಡ್​-2016ರ (National Building Code of India) ಅನ್ವಯ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿಗಳನ್ನು ಸಂಪೂರ್ಣವಾಗಿ ಮುಚ್ಚುವುದು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ನಿರ್ವಹಿಸಲು ನಿಯಮಾನುಸಾರ ಅವಕಾಶ ಇಲ್ಲ. ಆದಾಗ್ಯೂ ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಅಸುರಕ್ಷತೆಗೆ ಕಾರಣವಾಗುವಂತೆ ಕಟ್ಟಡ ಮಾರ್ಪಾಡು ಮಾಡುತ್ತಿದ್ದಾರೆ.

ಹೀಗಾಗಿ ನಿಯಮಾನುಸಾರ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ವಸತಿ ಸಮುಚ್ಚಯಗಳಲ್ಲಿ ಅಥವಾ ಇತರೆ ಕಟ್ಟಡಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಸೂಚಿಸಿದೆ.

ಒಂದು ವೇಳೆ ವಸತಿ ಸಮುಚ್ಚಯಗಳಲ್ಲಿ ಅಥವಾ ಇತರೆ ಕಟ್ಟಡಗಳಲ್ಲಿ ಮಾರ್ಪಾಡು ಅವಶ್ಯವಿದ್ದಲ್ಲಿ ಪಾಲಿಕೆಯ ಸಕ್ಷಮ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪೂರ್ವಾನುಮತಿಗಳನ್ನು ಪಡೆಯಬೇಕೆಂದು ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ : ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.