ಬೆಂಗಳೂರು: ಪರಿಸರಕ್ಕೆ ಅತ್ಯಂತ ಹೆಚ್ಚು ಹಾನಿ ತಂದೊಡ್ಡುವ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ರಸ್ತೆಯಲ್ಲಿ ಜಾಥಾ ನಡೆಸಿದ್ರು.
ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ, ನಾಗರಿಕರಿಗೆ ಪ್ಲಾಸ್ಟಿಕ್ ಬಳಕೆ ನಿಷೇಧ, ಕಸ ವಿಂಗಡಣೆ, ಪಿಒಪಿ ಗಣೇಶ ಬದಲು ಮಣ್ಣಿನ ಮೂರ್ತಿ ಬಳಕೆ, ಕುಡಿಯುವ ನೀರಿನ ಮಿತ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಪೂರ್ವವಲಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಮೇಯರ್ ಚಾಲನೆ ನೀಡಿದರು.
ಬಿಬಿಎಂಪಿ ಪೂರ್ವವಲಯ ವ್ಯಾಪ್ತಿಯ ವಾರ್ಡ್ಗಳಲ್ಲಿ ಜಾಗೃತಿ ಜಾಥಾದಲ್ಲಿ ಶಾಲಾ ಮಕ್ಕಳೊಂದಿಗೆ ಜಾಥಾ ನಡೆಸಿದ ಅವರು ನಾಗರಿಕರಲ್ಲಿ ಜಾಗೃತಿ ಮೂಡಿಸಿದರು. ನಂತರ ಕ್ಲೀವ್ ಲ್ಯಾಂಡ್ ಟೌನ್ ನಲ್ಲಿರುವ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಿಒಪಿ ಗಣಪ, ಹಸಿಕಸ, ಒಣ ಕಸ ಬೇರ್ಪಡಿಕೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಹಾನಿ ಬಗ್ಗೆ ತಿಳಿ ಹೇಳಿದ್ರು.