ETV Bharat / state

ಕೊರೊನಾ ಭೀತಿ: ಸಭೆಗೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಸಿದ ಮೇಯರ್

author img

By

Published : Mar 9, 2020, 1:35 PM IST

Updated : Mar 9, 2020, 3:03 PM IST

ರಾಜಧಾನಿಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಮೇಯರ್ ಗೌತಮ್ ಕುಮಾರ್ ಆರೋಗ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

BBMP Mayor used hand sanitiser
ಮೇಯರ್ ಗೌತಮ್ ಕುಮಾರ್

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಮೇಯರ್ ಗೌತಮ್ ಕುಮಾರ್ ಆರೋಗ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಸಭೆಗೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಸಿ ತಮ್ಮ ಕೈಗಳನ್ನ ಸ್ವಚ್ಚಗೊಳಿಸಿಕೊಂಡರು. ಟೌನ್​ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಆರೋಗ್ಯಾಧಿಕಾರಿಗಳು, ಬಿಬಿಎಂಪಿ ಆರೋಗ್ಯಾಧಿಕಾರಿಗಳು ಹಾಗೂ ರೆಸಿಡೆನ್ಶಿಯಲ್​ ವೆಲ್​ಫೇರ್​ ಅಸೋಸಿಯೇಷನ್​ ಸದಸ್ಯರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಕೊರೊನಾ ವೈರಸ್ ಹೇಗೆ ಹರಡಲಿದೆ, ಯಾವೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂಬ ಕುರಿತು ಅಧಿಕಾರಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ.

ಮೇಯರ್ ಗೌತಮ್ ಕುಮಾರ್ ಹೇಳಿಕೆ

ಇದೇ ವೇಳೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಕೊರೊನಾ ಭಯದ ವಾತಾವರಣ ಸೃಷ್ಟಿ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ಸಭೆ ಏರ್ಪಡಿಸಲಾಗಿದೆ. ಶೇಕ್ ಹ್ಯಾಂಡ್ ಬದಲು, ನಮಸ್ತೆ ಮಾಡುವುದು. ಇಂತಹ ಸಂದೇಶವನ್ನು ನೀಡಲು ಈ ಸಭೆ ಕರೆಯಲಾಗಿದೆ. ಈಗಾಗಲೇ‌ 3 ಸಭೆಗಳನ್ನು ಕರೆಯಲಾಗಿದೆ. ಸ್ವಚ್ಛತೆ ಬಗ್ಗೆಯೂ ಅರಿವು ಮೂಡಿಸುವ ಆಲೋಚನೆ ಇದೆ. ಸಭೆಯಲ್ಲಿ ಆರೋಗ್ಯಾಧಿಕಾರಿಗಳು, ವಿವಿಧ ನಾಗರಿಕ ಸಂಘ ಸಂಸ್ಥೆಗಳು ಭಾಗಿ ಆಗಿವೆ ಎಂದರು.

Last Updated : Mar 9, 2020, 3:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.