ಬೆಂಗಳೂರು: ಮಹಾನಗರದಲ್ಲಿ ಕಾರ್ಖಾನೆಗಳು ಬಂದ್ ಆಗಿದ್ದ ಹಿನ್ನೆಲೆ ನಗರದಲ್ಲಿ ವಾಯು ಮಾಲಿನ್ಯ ಹಾಗೂ ನೀರು ತಿಳಿಯಾಗಿದೆ. ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರ ಜೊತೆ ಬಿಬಿಎಂಪಿ ಮೇಯರ್ ಎಂ.ಗೌತಮ್ ಕುಮಾರ್ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಗಳು ಸ್ಥಗಿತವಾಗಿದ್ದ ಪರಿಣಾಮ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ತಿಳಿಯಾಗಿರುವ ಪರಿಸರವನ್ನ ಹೀಗೆಯೇ ಕಾಪಡಿಕೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಂಬಂಧಪಟ್ಟ ಇತರೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲ್ಲದೆ, ಕಾರ್ಖಾನೆಗಳಿಂದ ಬರುವ ರಾಸಾಯನಿಯುಕ್ತ ನೀರನ್ನ ತಡೆಗಟ್ಟಿ, ಪರಿಸರ ಮಾಲಿನ್ಯ ತಡೆಗಟ್ಟುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶ್ರೀ ವಿಜಯ್ ಕುಮಾರ್ ಗೋಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ.