ETV Bharat / state

ಮರಗಣತಿ ಮಾಡದ್ದಕ್ಕೆ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಹೈಕೋರ್ಟ್! - ಬಿಬಿಎಂಪಿಗೆ ಹೈಕೋರ್ಟ್​ ತೀವ್ರ ತರಾಟೆ

ಮರಗಣತಿ ಕುರಿತು ಬೆಂಗಳೂರು ಪರಿಸರ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಬಿಬಿಎಂಪಿಗೆ ಹೈಕೋರ್ಟ್​ ತೀವ್ರ ತರಾಟೆ ,  BBMP Officers do not Tree census not yet
ಬಿಬಿಎಂಪಿಗೆ ಹೈಕೋರ್ಟ್​ ತೀವ್ರ ತರಾಟೆ
author img

By

Published : Jan 20, 2020, 9:11 PM IST

ಬೆಂಗಳೂರು: ನಗರದಲ್ಲಿ ಮರಗಳ ಗಣತಿ ಕಾರ್ಯ ನಡೆಸುವ ಸಂಬಂಧ ಯಾವುದೇ ಕ್ರಮ ಕೈಗೊಳ್ಳದ ಹಾಗೂ ಗಡುವು ಮುಗಿದಿದ್ದರೂ ಮರಗಳ ಗಣತಿ ಕಾರ್ಯ ಆರಂಭಿಸದ ಬಿಬಿಎಂಪಿ ಹಾಗೂ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಬೆಂಗಳೂರು ಪರಿಸರ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಅರ್ಜಿದಾರರ ಪರ ವಕೀಲರು ವಾದಿಸಿ, ಮರಗಳ ಗಣತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಹಾಗೂ ಮರ ವಿಜ್ಞಾನ ಸಂಸ್ಥೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಹಲವು ದೋಷಗಳಿವೆ. ಒಪ್ಪಂದದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಸ್ತೆ ಬದಿ ಮರಗಳನ್ನು ಮಾತ್ರ ಎಣಿಕೆ ಮಾಡಲಾಗುತ್ತದೆ. ಖಾಸಗಿ ಪ್ರದೇಶದಲ್ಲಿನ ಮರಗಳನ್ನು ಗಣತಿಗೆ ಪರಿಗಣಿಸಲಾಗುವುದಿಲ್ಲ. ಇದು ಮರಗಳ ಸಂರಕ್ಷಣಾ ಕಾಯ್ದೆ ಹಾಗೂ ಹೈಕೋರ್ಟ್ ನೀಡಿರುವ ಆದೇಶಕ್ಕೆ ವಿರುದ್ಧವಾಗಿದೆ. ಮುಖ್ಯವಾಗಿ ಗಡುವು ಮೀರಿ ಮೂರು ತಿಂಗಳಾಗಿದ್ದರೂ ಮರ ಗಣತಿ ಆರಂಭವಾಗಿಲ್ಲ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನ್ಯಾಯಾಲಯದ ಆದೇಶಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ, ಕರ್ನಾಟಕ ಮರ ಸಂರಕ್ಷಣಾ ಕಾಯ್ದೆ ಬಗ್ಗೆ ತಿಳಿದುಕೊಳ್ಳದ ಹಾಗೂ ಅವಧಿ ಮುಗಿದಿದ್ದರೂ ಮರಗಳ ಗಣತಿ ಕಾರ್ಯ ಆರಂಭಿಸದ ಅಧಿಕಾರಿಗಳಿಗೆ ಬೆವರಿಳಿಸಿತು.

ಕರ್ನಾಟಕ ರಾಜ್ಯ ಮರ ಸಂರಕ್ಷಣಾ ಕಾಯ್ದೆ-1976'ರ ಸೆಕ್ಷನ್ 7 (ಬಿ) ಪ್ರಕಾರ ನಿಗದಿತ ಅವಧಿಯಲ್ಲಿ ಎಲ್ಲ ಮರಗಳ ಗಣತಿ ನಡೆಸಬೇಕು. ಈ ಕುರಿತು ನ್ಯಾಯಾಲಯವೂ ಸರಳವಾಗಿ ಅರ್ಥವಾಗುವಂತೆ ಆದೇಶ ಬರೆಸಿದೆ. ಹೀಗಿದ್ದೂ ಬಿಬಿಎಂಪಿ ಮತ್ತು ಮರ ವಿಜ್ಞಾನ ಸಂಸ್ಥೆಯ ಒಪ್ಪಂದದಲ್ಲಿ ಕೇವಲ ಬಿಬಿಎಂಪಿ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಮರಗಳ ಗಣತಿ ನಡೆಸಲಾಗುತ್ತದೆ ಎಂಬ ಅಂಶ ಬಂದಿದ್ದಾದರೂ ಹೇಗೆ? ಇಂತಹ ಸರಳ ವಿಚಾರವನ್ನೂ ಅರ್ಥ ಮಾಡಿಕೊಳ್ಳದೇ, ನ್ಯಾಯಾಲಯದ ಆದೇಶ ಮತ್ತು ಕಾಯ್ದೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ ಬಿಬಿಎಂಪಿ ಆಯುಕ್ತರು ಮತ್ತು ಮರ ವಿಜ್ಞಾನ ಸಂಸ್ಥೆಯ ಅರಣ್ಯ ಸಂರಕ್ಷಣಾಧಿಕಾರಿ ಒಪ್ಪಂದಕ್ಕೆ ಸಹಿ ಮಾಡಿದ್ದು ಹೇಗೆಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಫೆ.11ಕ್ಕೆ ಮುಂದೂಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಮರಗಳ ಗಣತಿ ನಡೆಸುವಂತೆ 2019ರ ಆ.20ರಂದು ಹೈಕೋರ್ಟ್ ಆದೇಶಿಸಿತ್ತು. ಒಂದು ತಿಂಗಳಲ್ಲಿ ಗಣತಿ ಕಾರ್ಯ ಆರಂಭಿಸುವುದಾಗಿ ಅ.10ರಂದು ಬಿಬಿಎಂಪಿ ಹೈಕೋರ್ಟ್‍ಗೆ ಮುಚ್ಚಳಿಕೆ ಸಲ್ಲಿಸಿತ್ತು. ಆದರೆ, ಗಣತಿ ಕಾರ್ಯ ಇನ್ನೂ ಆರಂಭಿಸಿಲ್ಲ.

Intro:Body:ಬೆಂಗಳೂರಲ್ಲಿ ಮರಗಳ ಗಣತಿ ಮಾಡದ ಅಧಿಕಾರಿಗಳಿಗೆ ಹೈಕೋರ್ಟ್ ತರಾಟೆ
ಬೆಂಗಳೂರು: ನಗರದಲ್ಲಿ ಮರಗಳ ಗಣತಿ ಕಾರ್ಯ ನಡೆಸುವ ಸಂಬಂಧ ಯಾವುದೇ ಕ್ರಮ ಕೈಗೊಳ್ಳದ ಹಾಗೂ ಗಡುವು ಮುಗಿದಿದ್ದರೂ ಮರಗಳ ಗಣತಿ ಕಾರ್ಯ ಆರಂಭಿಸದ ಬಿಬಿಎಂಪಿ ಹಾಗೂ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.
ಈ ಕುರಿತು ಬೆಂಗಳೂರು ಎನ್ವಿರಾನ್‍ಮೆಂಟ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಮರಗಳ ಗಣತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಹಾಗೂ ಮರ ವಿಜ್ಞಾನ ಸಂಸ್ಥೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಹಲವು ದೋಷಗಳಿವೆ. ಒಪ್ಪಂದದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಸ್ತೆ ಬದಿ ಮರಗಳನ್ನು ಮಾತ್ರ ಎಣಿಕೆ ಮಾಡಲಾಗುತ್ತದೆ. ಖಾಸಗಿ ಪ್ರದೇಶದಲ್ಲಿನ ಮರಗಳನ್ನು ಗಣತಿಗೆ ಪರಿಗಣಿಸಲಾಗುವುದಿಲ್ಲ. ಇದು ಮರಗಳ ಸಂರಕ್ಷಣಾ ಕಾಯ್ದೆ ಹಾಗೂ ಹೈಕೋರ್ಟ್ ನೀಡಿರುವ ಆದೇಶಕ್ಕೆ ವಿರುದ್ಧವಾಗಿದೆ. ಮುಖ್ಯವಾಗಿ ಗಡುವು ಮೀರಿ ಮೂರು ತಿಂಗಳಾಗಿದ್ದರೂ ಮರ ಗಣತಿ ಆರಂಭವಾಗಿಲ್ಲ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನ್ಯಾಯಾಲಯದ ಆದೇಶಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ, ಕರ್ನಾಟಕ ಮರ ಸಂರಕ್ಷಣಾ ಕಾಯ್ದೆ ಬಗ್ಗೆ ತಿಳಿದುಕೊಳ್ಳದ ಹಾಗೂ ಅವಧಿ ಮುಗಿದಿದ್ದರೂ ಮರಗಳ ಗಣತಿ ಕಾರ್ಯ ಆರಂಭಿಸದ ಅಧಿಕಾರಿಗಳಿಗೆ ಬೆವರಿಳಿಸಿತು. ಕರ್ನಾಟಕ ರಾಜ್ಯ ಮರ ಸಂರಕ್ಷಣಾ ಕಾಯ್ದೆ-1976'ರ ಸೆಕ್ಷನ್ 7 (ಬಿ) ಪ್ರಕಾರ ನಿಗದಿತ ಅವಧಿಯಲ್ಲಿ ಎಲ್ಲ ಮರಗಳ ಗಣತಿ ನಡೆಸಬೇಕು. ಈ ಕುರಿತು ನ್ಯಾಯಾಲಯವೂ ಸರಳವಾಗಿ ಅರ್ಥವಾಗುವಂತೆ ಆದೇಶ ಬರೆಸಿದೆ. ಹೀಗಿದ್ದೂ ಬಿಬಿಎಂಪಿ ಮತ್ತು ಮರ ವಿಜ್ಞಾನ ಸಂಸ್ಥೆಯ ಒಪ್ಪಂದದಲ್ಲಿ ಕೇವಲ ಬಿಬಿಎಂಪಿ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಮರಗಳ ಗಣತಿ ನಡೆಸಲಾಗುತ್ತದೆ ಎಂಬ ಅಂಶ ಬಂದಿದ್ದಾದರೂ ಹೇಗೆ? ಇಂತಹ ಸರಳ ವಿಚಾರವನ್ನೂ ಅರ್ಥ ಮಾಡಿಕೊಳ್ಳದೆ, ನ್ಯಾಯಾಲಯದ ಆದೇಶ ಮತ್ತು ಕಾಯ್ದೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ ಬಿಬಿಎಂಪಿ ಆಯುಕ್ತರು ಮತ್ತು ಮರ ವಿಜ್ಞಾನ ಸಂಸ್ಥೆಯ ಅರಣ್ಯ ಸಂರಕ್ಷಣಾಧಿಕಾರಿ ಒಪ್ಪಂದಕ್ಕೆ ಸಹಿ ಮಾಡಿದ್ದು ಹೇಗೆಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.
ಮರಗಳ ಗಣತಿಗೆ ನ್ಯಾಯಾಲಯ ನೀಡಿದ್ದ ಗಡುವು, ಬಿಬಿಎಂಪಿ ಈ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮುಚ್ಚಳಿಕೆಗಳೆಲ್ಲದರ ಅವಧಿ ಮುಗಿದು ಹೋಗಿದೆ. ಆದರೂ ಗಣತಿ ಆರಂಭವಾಗಿಲ್ಲ. ಈ ನಡುವೆ ಅಧಿಕಾರಿಗಳು ಕಾಯ್ದೆ ಮತ್ತು ಕೋರ್ಟ್ ಆದೇಶಕ್ಕೆ ವಿರುದ್ಧವಾದ ಒಪ್ಪಂದ ಮಾಡಿಕೊಂಡಿದ್ದಾರೆ. ಒಪ್ಪಂದದಲ್ಲಿ ಎಲ್ಲೆಲ್ಲಿ ತಪ್ಪಾಗಿದೆ? ಅದಕ್ಕೆ ಕಾರಣವೇನು? ಹೊಣೆ ಯಾರು? ತಪ್ಪಿತಸ್ಥರ ವಿರುದ್ಧ ಏನು ಕ್ರಮ? ಮುಂದಿನ ನಡೆ ಏನು ಎಂಬಿತ್ಯಾದಿ ಎಲ್ಲ ವಿವರಗಳನ್ನು ಪ್ರಮಾಣಪತ್ರದ ಮೂಲಕ ಸಲ್ಲಿಸಿ ಎಂದು ಬಿಬಿಎಂಪಿ ಹಾಗೂ ಮರ ವಿಜ್ಞಾನ ಸಂಸ್ಥೆಗೆ ನಿರ್ದೇಶಿಸಿದ ಹೈಕೋರ್ಟ್, ಈ ವಿಚಾರದಲ್ಲಿ ಸರ್ಕಾರದ ಪಾತ್ರ ಏನು ಎಂಬುದರ ಬಗ್ಗೆಯೂ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಫೆ.11ಕ್ಕೆ ಮುಂದೂಡಿತು.
ಬಿಬಿಎಂಪಿ ವ್ಯಾಪ್ತಿಯಲ್ಲಿನ ಮರಗಳ ಗಣತಿ ನಡೆಸುವಂತೆ 2019ರ ಆ.20ರಂದು ಹೈಕೋರ್ಟ್ ಆದೇಶಿಸಿತ್ತು. ಒಂದು ತಿಂಗಳಲ್ಲಿ ಗಣತಿ ಕಾರ್ಯ ಆರಂಭಿಸುವುದಾಗಿ ಅ.10ರಂದು ಬಿಬಿಎಂಪಿ ಹೈಕೋರ್ಟ್‍ಗೆ ಮುಚ್ಚಳಿಕೆ ಸಲ್ಲಿಸಿತ್ತು. ಆದರೆ, ಗಣತಿ ಕಾರ್ಯ ಇನ್ನೂ ಆರಂಭಿಸಲಾಗಿಲ್ಲ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.