ETV Bharat / state

ಬಿಬಿಎಂಪಿ 8 ವಲಯಗಳ ವ್ಯಾಪ್ತಿಯಲ್ಲಿ 1,471 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಬಾಕಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಂಬಂಧ ಮುಖ್ಯ ಆಯುಕ್ತರ ಸಭೆ - ಗುರಿಯ 64 ಶೇಕಡಾದಷ್ಟು ಆಸ್ತಿ ತೆರಿಗೆ ಸಂಗ್ರಹ - ಬಾಕಿ ತೆರಿಗೆ ಸಂಗ್ರಹಕ್ಕೆ ವಾರದ ಗುರಿ ಹಾಕಿಕೊಳ್ಳುವಂತೆ ಸೂಚನೆ.

Commissioner Meeting
ಆಸ್ತಿ ತೆರಿಗೆ ಸಂಗ್ರಹ ಬಾಕಿ
author img

By

Published : Dec 31, 2022, 7:28 AM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸುವ ಸಲುವಾಗಿ ವಲಯವಾರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ತೆರಿಗೆ ಸಂಗ್ರಹಿಸಲು ಮತ್ತು ಪ್ರಸಕ್ತ ಸಾಲಿನ ಗುರಿಯಂತೆ ಇನ್ನೂ 1,471.56 ಕೋಟಿ ರೂ ಸಂಗ್ರಹಿಸಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಂಬಂಧ ನಡೆದ ವರ್ಚುಯಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತುಷಾರ್ ಗಿರಿನಾಥ್ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸುವ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಈ ಸಂಬಂಧ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟಿಸ್ ನೀಡಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಿಕ್ಷಣ ಸಂಸ್ಥೆಗಳು, ಕ್ಲಬ್‌ಗಳು, ಮಾಲ್‌ಗಳಿಂದ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನ್ಯಾಯಾಯದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳು ಇರುವ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಪಾಲಿಕೆಗೆ ಪಾವತಿಸಬೇಕಿರುವ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಜೊತೆಗೆ ಬೆಸ್ಕಾಂ ದತ್ತಾಂಶದ ಆಧಾರ ಸ್ವತ್ತುಗಳನ್ನು ಪರಿಶೀಲಿಸಲಾಗುತ್ತಿದ್ದು, ಪಾಲಿಕೆಗೆ ಆಸ್ತಿತೆರಿಗೆ ದತ್ತಾಂಶದಲ್ಲಿ ವ್ಯತ್ಯಾಸ ಕಂಡು ಬಂದಂತಹ ಸ್ವತ್ತುಗಳಿಗೆ ನೋಟಿಸ್ ಜಾರಿಗೊಳಿಸಿ ವ್ಯತ್ಯಾಸದ ತೆರಿಗೆಯನ್ನು ದಂಡ ಹಾಗೂ ಬಡ್ಡಿಯೊಂದಿಗೆ ಸಂಗ್ರಹಿಸಬೇಕು. ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಆಸ್ತಿಗಳನ್ನು ವಿಶೇಷವಾಗಿ ಹೊಸದಾಗಿ ಸ್ವಾಧೀನಾನುಭವ ಪತ್ರ ಹೊಂದಿರುವ ಸ್ವತ್ತುಗಳನ್ನು ಗುರುತಿಸಿ, ಅಂತಹ ಸ್ವತ್ತುಗಳನ್ನು ಆಸ್ತಿತೆರಿಗೆ ವ್ಯಾಪ್ತಿಗೆ ತಂದು ಆಸ್ತಿತೆರಿಗೆಯನ್ನು ಸಂಗ್ರಹಿಸಬೇಕೆಂದು ಅಧಿಕಾರಿಗಳಿಗೆ ಹೇಳಿದರು.

ವಾರದ ಗುರಿ ನೀಡಿ ಆಸ್ತಿ ತೆರಿಗೆ ಸಂಗ್ರಹ: ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಂದಾಯ ಅಧಿಕಾರಿ ಹಾಗೂ ಸಹಾಯ ಕಂದಾಯ ಅಧಿಕಾರಿಗಳಿಗೆ ವಾರದ ಗುರಿ ನೀಡಿ ಆಸ್ತಿ ತೆರಿಗೆ ಸಂಗ್ರಹಿಸಬೇಕು. ಈ ಪೈಕಿ ಪ್ರತಿ ವಾರವೂ ಆಸ್ತಿ ತೆರಿಗೆ ಸಂಗ್ರಹಿಸಿರುವ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.

2,718 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ: ಪ್ರಸಕ್ತ ಸಾಲಿನಲ್ಲಿ 4,189.78 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಇದುವರೆಗೆ 2,718.22(ಶೇ.64.88ರಷ್ಟು) ಕೋಟಿ ರೂ ಸಂಗ್ರಹವಾಗಿದೆ. ಪ್ರಸಕ್ತ ಸಾಲಿನ ಗುರಿಯಂತೆ ಇನ್ನೂ 1,471.56 ಕೋಟಿ ರೂ ಸಂಗ್ರಹಿಸಬೇಕಿದೆ. ಈ ಸಂಬಂಧ ಎಲ್ಲ ಕಂದಾಯ ಅಧಿಕಾರಿಗಳು ನಿಗದಿತ ಗುರಿಯನ್ನು ತಲುಪುವ ಸಲುವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಡಾ. ಆರ್.ಎಲ್.ದೀಪಕ್, ವಲಯ ಆಯುಕ್ತ ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ರೆಡ್ಡಿ‌ ಶಂಕರ ಬಾಬು, ಪಿ.ಎನ್.ರವೀಂದ್ರ, ಎಲ್ಲ ವಲಯ ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬಿಬಿಎಂಪಿ ಗೈಡ್‌ಲೈನ್ಸ್‌: ಈ ನಿಯಮಗಳು ನಿಮಗೆ ಗೊತ್ತಿರಲಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.