ETV Bharat / state

ಬಿಬಿಎಂಪಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ - ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಅಡಿ ವಿವಿಧ ಹುದ್ದೆ

ಪ್ಯಾರಾ ಮೆಡಿಕಲ್​ ಸೇರಿದಂತೆ ವಿವಿಧ ಪದವೀಧರ ಹುದ್ದೆಗಳ ಭರ್ತಿಗೆ ಬಿಬಿಎಂಪಿ ಮುಂದಾಗಿದೆ. ಈ ಹುದ್ದೆ ಕುರಿತಾದ ಮಾಹಿತಿ ಇಲ್ಲಿದೆ.

bbmp-recruitment-for-para-medical-and-other-job

author img

By

Published : Feb 24, 2023, 12:48 PM IST

ಬೆಂಗಳೂರು: ಬೃಹತ್​ ಬೆಂಗಳೂರು ನಗರ ಪಾಲಿಕೆಯಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಅಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ಯಾರಾ ಮೆಡಿಕಲ್​, ವರ್ಕರ್​ ಮತ್ತು ಸೈಕಿಯಾಟ್ರಿಕ್​ ನಸರ್ಸ್​ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಸಲಾಗುತ್ತಿದ್ದು, ಸೂಕ್ತ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸದೇ ವಾಕ್​ ಇನ್​ ಇಂಟರ್​ವ್ಯೂ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 46 ಹುದ್ದೆಗಳು ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ

ಯಾರು ಅರ್ಜಿ ಸಲ್ಲಿಸಬಹುದು: ನರ್ಸ್​ ಹೊರತಾಗಿ ಆಶಾ ಕಾರ್ಯಕರ್ತರು, ಅಕೌಂಟ್​ ಮ್ಯಾನೇಜರ್, ಜಿಲ್ಲಾ ಸಮಾಲೋಚಕರು, ಜೋನಲ್​ ಅಕೌಂಟ್​ ಮ್ಯಾನೇಜರ್​, ಡೆಂಟಿಸ್ಟ್​​​ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್ಸಿ, ಪದವಿ, ಎಂಎಸ್​ಡಬ್ಯೂ, ಎಂಬಿಬಿಎಸ್​, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಆಯಾ ಹುದ್ದೆಗಳಿಗೆ ತಕ್ಕಂತೆ ನಿರ್ದಿಷ್ಟ ವೇತನವನ್ನು ನಿಗದಿ ಮಾಡಲಾಗಿದ್ದು, ಕನಿಷ್ಟ 14 ಸಾವಿರದಿಂದ ಗರಿಷ್ಟ 50 ಸಾವಿರದವರೆಗೆ ವೇತನ ನಿಗದಿ ಮಾಡಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಪ್ರಕಟಣೆಯಲ್ಲಿ ಕಾಣಬಹುದಾಗಿದೆ.

ಬಿಬಿಎಂಪಿ ಅಧಿಸೂಚನೆ
ಬಿಬಿಎಂಪಿ ಅಧಿಸೂಚನೆ

ಅರ್ಜಿ ಸಲ್ಲಿಕೆ ಹೇಗೆ: ಈ ಹುದ್ದೆಗಳಿಗೆ ವಾಕ್​ ಇನ್​ ಇಂಟರ್​ವ್ಯೂ ನಡೆಯುತ್ತಿದ್ದು, ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು, ಅನುಭವ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಗಳೊಂದಿಗೆ ಈ ವಿಳಾಸಕ್ಕೆ ಹಾಜರಾಗಿ ಸಂದರ್ಶನ ಎದುರಿಸಬಹುದಾಗಿದೆ. ಈ ಹುದ್ದೆಗಳನ್ನು ಮೆರಿಟ್​ ಕಂ ರೋಸ್ಟರ್​ ಆಧಾರದ ಮೇಲೆ ನೇಮಕ ನಡೆಯಲಿದೆ.

ವಾಕ್​ ಇನ್​ ಇಂಟರ್​ ವ್ಯೂ ನಡೆಯುವ ವಿಳಾಸ: ಡಾ. ರಾಜ್​ ಕುಮಾರ್​ ಗಾಜಿನ ಮನೆ, ಬಿಬಿಎಂಬಿ ಮುಖ್ಯ ಕಚೇರಿ, ಎನ್​ಆರ್​ ಸ್ಟೇರ್​, ಬೆಂಗಳೂರು 560002. ಈ ಹುದ್ದೆಗೆ ಮಾರ್ಚ್​ 1ರಿಂದ ಮಾರ್ಚ್​ 30ರವರೆಗೆ ಬೆಳಗ್ಗೆ 10.30ರಿಂದ ಸಂಜೆ 4.30ರವರೆಗೆ ನೇರ ಸಂದರ್ಶನ ನಡೆಸಲಾಗುವುದು. ಈ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗುವವರು ಬಿಬಿಎಂಪಿ ವೆಬ್​ಸೈಟ್​​ನಲ್ಲಿ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲೆಗಳನ್ನು ಹಾಜರು ಪಡಿಸಬೇಕಿದೆ.

ಈ ಸಂಬಂಧ ಬಿಬಿಎಂಪಿ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರವನ್ನು ಪರಿಶೀಲಿಸಲು ಅಭ್ಯರ್ಥಿಗಳು bbmp.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಇಂದು ಕೇಂದ್ರ ಅಬಕಾರಿ ದಿನ; ಏನಿದರ ವಿಶೇಷತೆ, ಇತಿಹಾಸ, ಮಹತ್ವ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.