ETV Bharat / state

ಈದ್ಗಾ ಮೈದಾನದಲ್ಲಿ ಯೋಗ ದಿನಾಚರಣೆಗೆ ಅನುಮತಿ ನಿರಾಕರಿಸಿದ ಬಿಬಿಎಂಪಿ

ಈದ್ಗಾ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅನುಮತಿ ನೀಡುವಂತೆ ಹಲವಾರು ಹಿಂದೂ ಸಂಘಟನೆಗಳು ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಿದ್ದವು.

author img

By

Published : Jun 20, 2022, 10:05 PM IST

ಈದ್ಗಾ ಮೈದಾನ
ಈದ್ಗಾ ಮೈದಾನ

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಈ ಬಾರಿ ಯೋಗ ದಿನಾಚರಿಸಲು ಅನುಮತಿ ನಿರಾಕರಿಸಲಾಗಿದೆ. ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅನುಮತಿ ನೀಡುವಂತೆ ಹಲವಾರು ಹಿಂದೂ ಸಂಘಟನೆಗಳು ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಿದ್ದವು. ಆದರೆ ಪರಿಶೀಲನೆ ನಡೆಸುತ್ತಿರುವುದಾಗಿ ಹೇಳುತ್ತಾ ಕಾಲಹರಣ ಮಾಡಿದ ಬಿಬಿಎಂಪಿ ಅಧಿಕಾರಿಗಳು, ಈ ಕ್ಷಣದವರೆಗೂ ಹಿಂದೂ ಸಂಘಟನೆಗಳಿಗೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ.

ಕೆಲವು ದಿನಗಳ ಹಿಂದೆ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿ ಎಂದು ಅಧಿಕಾರಿಗಳು ಘೋಷಿಸಿದ್ದರೂ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಕ್ಫ್ ಬೋರ್ಡ್ ಸದಸ್ಯರು ಮೈದಾನ ನಮಗೆ ಸೇರಿದ್ದು ಎಂದು ವಾದಿಸಿದ್ದರು. ಹೀಗಾಗಿ ಆಸ್ತಿ ನಿಮಗೆ ಸೇರಿದ್ದು ಎನ್ನುವುದಕ್ಕೆ ಸಮರ್ಪಕ ದಾಖಲೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳು ವಕ್ಫ್ ಬೋರ್ಡ್‍ಗೆ ಸೂಚನೆ ನೀಡಿದ್ದರು. ವಕ್ಫ್ ಬೋರ್ಡ್‍ನವರು ಈದ್ಗಾ ಮೈದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದರು. ಈ ರೀತಿ ಸಲ್ಲಿಕೆಯಾದ ದಾಖಲೆಗಳನ್ನು ಸದ್ಯ ಬಿಬಿಎಂಪಿ ಅಧಿಕಾರಿಗಳು ಕಾನೂನು ಕೋಶಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಕ್ಕೆ ಸಿಬ್ಬಂದಿಯಿಂದಲೇ ಸಾಥ್‌: ಸರ್ಕಾರಕ್ಕೆ ವರದಿ

ಈದ್ಗಾ ಮೈದಾನ ವಕ್ಫ್ ಬೋರ್ಡ್‍ಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎನ್ನುವುದು ಇನ್ನೂ ಖಚಿತಗೊಂಡಿಲ್ಲ. ಹೀಗಾಗಿ ಯೋಗ ದಿನಾಚರಣೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.