ETV Bharat / state

ಗಣೇಶ ಉತ್ಸವ ಸಮಿತಿ ಪ್ರತಿಭಟನೆಗೆ ಮಣಿದ ಬಿಬಿಎಂಪಿ: ನಿಯಮಗಳಲ್ಲಿ ಸಡಿಲಿಕೆ

ಗಣೇಶ ಉತ್ಸವ ಸಮಿತಿ ಪ್ರತಿಭಟನೆಗೆ ಹಿನ್ನೆಲೆ ಬಿಬಿಎಂಪಿ ತನ್ನ ನಿರ್ಧಾರದಲ್ಲಿ ಕೆಲ ಬದಲಾವಣೆ ಮಾಡಿದ್ದು, ವಾರ್ಡ್​​ಗೆ ಒಂದೇ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಇದ್ದ ನಿಯಮವನ್ನು ಸಡಿಲಿಕೆ ಮಾಡಿದೆ.

bbmp relaxation in covid rules during ganesha festival celebration
ನಿಯಮಗಳಲ್ಲಿ ಸಡಿಲಿಕೆ
author img

By

Published : Sep 9, 2021, 4:42 PM IST

Updated : Sep 9, 2021, 4:49 PM IST

ಬೆಂಗಳೂರು: ಬೆಳಗ್ಗೆಯಿಂದ ಪಟ್ಟು ಬಿಡದೆ, ಬಿಬಿಎಂಪಿ ಆವರಣದಲ್ಲಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಡೆಸಿದ ಪ್ರತಿಭಟನೆಗೆ ಬಿಬಿಎಂಪಿ ಮಣಿದಿದೆ. ಹಲವು ನಿಯಮಗಳನ್ನು ಸಡಿಲಿಕೆ ಮಾಡಿ, ಮೌಖಿಕ ಭರವಸೆ ನೀಡಿದೆ.

ವಾರ್ಡ್​​ಗೆ ಒಂದೇ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಇದ್ದ ನಿಯಮ ಸಡಿಲಿಕೆ ಮಾಡಿದೆ. ಅಲ್ಲದೆ ಮಂಡಳಿಗಳು ಬೇಡಿಕೆ ಇಡುವ ಕಲ್ಯಾಣಿಗಳಲ್ಲಿ ನಿಮಜ್ಜನಕ್ಕೆ ವ್ಯವಸ್ಥೆ ಮಾಡಲು ಪಾಲಿಕೆ ಒಪ್ಪಿದೆ.

ಬಿಬಿಎಂಪಿ ನಿಯಮಗಳಲ್ಲಿ ಸಡಿಲಿಕೆ

ಸಮಿತಿ ಜೊತೆಗೆ ಹಲವು ಸುತ್ತಿನ ಸಭೆ ನಡೆಸಿದ ಬಳಿಕ ಬಿಬಿಎಂಪಿ ವಿಶೇಷ ಆಯುಕ್ತರು ತಮ್ಮ ನಿರ್ಧಾರ ತಿಳಿಸಿದರು. ಈ ಬಗ್ಗೆ ಮಾತನಾಡಿದ ವಿಶೇಷ ಆಯುಕ್ತರಾದ ರಂದೀಪ್, ವಾರ್ಡ್​ಗೆ ಒಂದೇ ಮೂರ್ತಿ, ನಾಲ್ಕಡಿ ಎತ್ತರ‌ದವರೆಗೆ ಮಾತ್ರ‌ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಇದ್ದ ನಿಯಮ ಪಾಲಿಸಲು ಕಷ್ಟ ಎಂದು ಹಲವು ಸಮಿತಿಗಳು ಮನವಿ ಮಾಡಿಕೊಂಡಿವೆ. ಈ ಹಿನ್ನೆಲೆ ಎಲ್ಲಾ ವಲಯ ಜಂಟಿ ಆಯುಕ್ತರು, ಪೊಲೀಸ್ ವರಿಷ್ಠರ ಜೊತೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಚರ್ಚೆ ಮಾಡಲಾಗಿದೆ.

ಈಗಾಗಲೇ 140 ವಾರ್ಡ್​​ಗಳಲ್ಲಿ ಒಂದು ಮೂರ್ತಿ ಪ್ರತಿಷ್ಠಾಪನೆ ಅನುಮತಿ ನೀಡಲಾಗಿದೆ. ಉಳಿದಂತೆ 20-30 ವಾರ್ಡ್​​ಗಳಲ್ಲಿ ಒಂದಕ್ಕಿಂತ ಹೆಚ್ಚಿನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ. ಒಂದಕ್ಕಿಂದ ಹೆಚ್ಚಿನ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ‌ ಮೌಖಿಕ ಅಸ್ತು ನೀಡಿದೆ. ಈ ಬೇಡಿಕೆಯನ್ನು ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡಿದ್ದೇವೆ. ಸಾರ್ವಜನಿಕರಿಗೆ ಯಾವುದೇ ಧಕ್ಕೆ ಆಗದೆ ರೀತಿಯಲ್ಲಿ ಸುವ್ಯವಸ್ಥಿತ ಆಚರಣೆಗೆ ಪಾಲಿಕೆ ಸಮಿತಿ ಜೊತೆ ಕೈ ಜೋಡಿಸಲಿದೆ.

ಸ್ಥಳಕ್ಕೆ ಮಾರ್ಷಲ್ಸ್ , ಪೊಲೀಸರನ್ನು ಕಳುಹಿಸಿ ಆಯೋಜಕರಿಗೆ ತೊಂದರೆ ಕೊಡುವುದಿಲ್ಲ. ಕೋವಿಡ್ ನಿಯಮ ಪಾಲಿಸಿ‌ ಆಚರಿಸುವುದು ಕಡ್ಡಾಯ ಎಂದರು. ಹೆಚ್ಚುವರಿ ಕಲ್ಯಾಣಿ, ಅಥವಾ ಪಾರಂಪರಿಕ ಸ್ಥಳಗಳಲ್ಲಿ ನಿಮಜ್ಜನೆಗೆ ಅವಕಾಶದ ಬೇಡಿಕೆ ಇಟ್ಟರೆ ಪಾಲಿಕೆ ಕ್ರಮಕೈಗೊಳ್ಳಲಿದೆ. ಇದಕ್ಕೆ ಸ್ಥಳೀಯವಾಗಿ ಮಂಡಳಿಗಳ ಮೂಲಕ ಮನವಿ ಕೊಡಬಹುದು ಎಂದರು.

ಸಮಿತಿಯ ಪ್ರಧಾ‌ನ ಕಾರ್ಯದರ್ಶಿ ಪ್ರಕಾಶ್ ರಾಜು ಪ್ರತಿಕ್ರಿಯೆ ನೀಡಿ, ನಾಳೆಯಿಂದ ಯಾವೆಲ್ಲ ಸಾರ್ವಜನಿಕ ಸಮಿತಿಗಳು ಎಷ್ಟು ದಿನ ಗಣೇಶೋತ್ಸವ ಆಚರಿಸುತ್ತಾರೋ ಅವರಿಗೆ ಯಾವುದೇ ಅಡ್ಡಿ ಮಾಡಬಾರದು. ಎಲ್ಲಾ ಕಲ್ಯಾಣಿಗಳಲ್ಲಿ ಮೂರ್ತಿ ನಿಮಜ್ಜನಕ್ಕೆ ಅವಕಾಶ ಕೊಟ್ಟಿರುವುದನ್ನು ಸ್ವಾಗತಿಸುತ್ತೇವೆ.

ಯಾವುದೇ ಸಮಿತಿ ಐದು ದಿನ ಆಚರಿಸಬಹುದೆಂದು ಸರ್ಕಾರ ಅನುಮತಿಸಿದೆ. ಆದರೆ ಯಾವ ಐದು ದಿನ ಎಂದು ತಿಳಿಸಿಲ್ಲ. ಹೀಗಾಗಿ ಚೌತಿಯಿಂದ ಚತುರ್ಥಿಯವರೆಗೆ ಆಯಾ ಸಮಿತಿಗಳು ಅತ್ಯಂತ ಸಂಭ್ರಮದಿಂದ, ಕೋವಿಡ್ ನಿಯಮದೊಂದಿಗೆ ಆಚರಣೆ ಮಾಡ್ತೇವೆ. ಒಂದೇ ಒಂದು ಹುಡುಗನನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಿದರೆ ಸಮಿತಿ ಉಗ್ರ ಹೋರಾಟ ಮಾಡಲಿದೆ ಎಂದರು.

ಈ ವರ್ಷ ನಿಮ್ಮ ಇಚ್ಛೆಯಂತೆ ಸಾರ್ವಜನಿಕ ಗಣೇಶೋತ್ಸವ ಆಚರಿಸಬಹುದು ಎಂದು ಕರೆ ನೀಡಿದರು. ಸರ್ಕಾರದ ಜೊತೆ ಇಂದು ರಾತ್ರಿಯೊಳಗೆ ಚರ್ಚೆ ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಬೀಳಲಿದೆ ಎಂದು ತಿಳಿಸಿದರು.

Last Updated : Sep 9, 2021, 4:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.