ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳಿಗೆ ತಲಾ 25 ಲಕ್ಷ ಗಳನ್ನು ಬಿಡುಗಡೆಗೊಳಿಸಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆಯಂತೆ ಆದೇಶ ಹೊರಡಿಸಲಾಗಿದೆ.
ಕೋವಿಡ್ ಔಷಧಗಳು ಮತ್ತು ಪರಿಕರಗಳನ್ನು ತುರ್ತಾಗಿ ಖರೀದಿಸಲು ಅನುವಾಗುವಂತೆ ಮುಖ್ಯ ಆಯುಕ್ತರ ಸೂಚನೆಯಂತೆ ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ಹೆಚ್ಚಳದಿಂದಾಗಿ ಔಷಧ ಮತ್ತು ಪರಿಕರಗಳ ಬೇಡಿಕೆಯಿದ್ದು, ಅವುಗಳ ಖರೀದಿಗಾಗಿ ತುರ್ತು ನಿಧಿಯಿಂದ ಹಣ ಬಿಡುಗಡೆಗೊಳಿಸಿ ಬಿಬಿಎಂಪಿ ಆದೇಶಿಸಿದೆ.