ETV Bharat / state

'ಆಸ್ತಿ ತೆರಿಗೆ ವಸೂಲಿ ಪ್ರಕ್ರಿಯೆ ಚುರುಕುಗೊಳಿಸಲು ಡ್ರೋನ್ ಸರ್ವೆ'

author img

By

Published : Jun 17, 2022, 4:11 PM IST

ಆಸ್ತಿ ತಂತ್ರಾಂಶ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಬೆಂಗಳೂರು ಒನ್ ಸೆಂಟರ್​ಗಳ ಮೂಲಕ ತಂತ್ರಾಂಶ ಬಳಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿಯೊಂದು ಆಸ್ತಿಯ ಮಾಹಿತಿ ಇಲ್ಲಿ ಸಿಗಲಿದೆ ಎಂದು ಪಾಲಿಕೆ ವಿಶೇಷ ಆಯುಕ್ತರು ತಿಳಿಸಿದ್ದಾರೆ.

ಬಿಬಿಎಂಪಿ ಆಯುಕ್ತ ದೀಪಕ್
ಬಿಬಿಎಂಪಿ ಆಯುಕ್ತ ದೀಪಕ್

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿಗಳ ತೆರಿಗೆ ವಸೂಲಿ ಪ್ರಕ್ರಿಯೆ ಮತ್ತಷ್ಟು ಚುರುಕುಗೊಳಿಸುವ ಸಲುವಾಗಿ ಹಾಗೂ ತೆರಿಗೆ ವಂಚಕರ ಪತ್ತೆಗಾಗಿ ಡ್ರೋನ್ ಸರ್ವೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪಾಲಿಕೆ ವಿಶೇಷ ಆಯುಕ್ತ ದೀಪಕ್‌ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ₹2,093 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷ ₹1,170 ಕೋಟಿ ಸಂಗ್ರಹವಾಗಿದ್ದು, ಶೇಕಡಾ 30ರಷ್ಟು ವ್ಯತ್ಯಾಸ ಕಂಡು ಬಂದಿದೆ ಎಂದರು.

ತೆರಿಗೆ ಸಂಗ್ರಹಕ್ಕೆ ಡ್ರೋನ್ ಸರ್ವೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಂದಾಯ ಅಧಿಕಾರಿಗಳಿಗೆ ಗುರಿ ನೀಡಿ ತೆರಿಗೆ ವಸೂಲಿ ಮಾಡಲಾಗುವುದು. ಸ್ವಯಂಘೋಷಿತ ಆಸ್ತಿ ತೆರಿಗೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಡ್ರೋನ್​ ಸಮೀಕ್ಷೆಯಲ್ಲಿ ಗೊತ್ತಾಗಲಿದೆ ಎಂದು ಅವರು ಹೇಳಿದರು.

ಆಸ್ತಿ ತಂತ್ರಾಂಶ ಜಾರಿಗೆ ಪಾಲಿಕೆಯಿಂದ ಚಿಂತನೆ: ಆಸ್ತಿ ತಂತ್ರಾಂಶ ಜಾರಿಗೆ ಬಿಬಿಎಂಪಿ ಚಿಂತಿಸಿದೆ. ಬೆಂಗಳೂರು ಒನ್ ಸೆಂಟರ್​ಗಳ ಮೂಲಕ ತಂತ್ರಾಂಶ ಬಳಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿಯೊಂದು ಆಸ್ತಿಯ ಮಾಹಿತಿ ಇಲ್ಲಿ ಸಿಗಲಿದೆ. ಮುಂದಿನ‌ ದಿನಗಳಲ್ಲಿ ಖಾತಾ ನೇರವಾಗಿ ಡಿಜಿಲಾಕರ್ ವ್ಯವಸ್ಥೆ ಜಾರಿಗೆ ಬರಲಿದ್ದು, ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಮೊದಲು ಪ್ರಯೋಗ ಆರಂಭಿಸಲಾಗುತ್ತಿದೆ.

ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗೆ ದಂಡ: ನಿಷೇಧ ಇದ್ದರೂ ಅನಧಿಕೃತವಾಗಿ ಫ್ಲೆಕ್ಸ್ ಹಾಕುವ ಕೆಲಸ ಬೆಳಕಿಗೆ ಬರುತ್ತಿದೆ. ಬ್ಯಾನರ್​ನಲ್ಲಿ ಇನ್ನು ಮುಂದೆ ಯಾರು ಶುಭ ಕೋರುತ್ತಾರೋ ಅವರಿಗೇ ದಂಡ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರಧಾನಿ ಕಾರ್ಯಕ್ರಮಕ್ಕೆ ಕೆಲವು ಕಡೆ ಅನುಮತಿ: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ‌ದ ಹಿನ್ನೆಲೆಯಲ್ಲಿ ಬ್ಯಾನರ್ ಹಾಕುವ ವಿಚಾರವಾಗಿ ಕೆಲ ಕಡೆಗಳಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕಲು ಮುಖ್ಯ ಆಯುಕ್ತರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು.

ಮರುವಿಂಗಡಣೆ ವಿವರ ವೆಬ್​ಸೈಟ್​ನಲ್ಲಿ: ಬಿಬಿಎಂಪಿ ವಾರ್ಡ್ ಮರುವಿಂಗಡನೆ ಮಾಡಿ ನಗರಾಭಿವೃದ್ಧಿ ಇಲಾಖೆಗೆ ನೀಡಲಾಗಿದೆ. ನಗರಾಭಿವೃದ್ಧಿ ಇಲಾಖೆ ಸರ್ಕಾರಕ್ಕೆ ಕಳುಹಿಸಿದ ಬಳಿಕ ಅನುಮೋದನೆ ಸಿಗಲಿದೆ. ಸರ್ಕಾರ ಅನುಮೋದನೆಯ ನಂತರ ಬಿಬಿಎಂಪಿ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ವಿವಾದ ಇತ್ಯರ್ಥಪಡಿಸಿ: ಕೇಂದ್ರಕ್ಕೆ ಸಿಎಂ ಒತ್ತಾಯ..!

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.