ಬೆಂಗಳೂರು: ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಲ್ಲಿ, ಎರಡು ಸ್ಥಾಯಿ ಸಮಿತಿಗಳಿಗೆ ಇಂದು ಚುನಾವಣೆ ನಡೆಯಲಿದೆ.
ಪ್ರಾದೇಶಿಕ ಚುನಾವಣಾ ಆಯುಕ್ತ ವಿ.ಪಿ. ಹಿಕ್ಕೇರಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು, ಲೆಕ್ಕಪತ್ರ ಸ್ಥಾಯಿ ಸಮಿತಿ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯಾಗಿದ್ದು, ಲೆಕ್ಕಪತ್ರ ಸ್ಥಾಯಿ ಸಮಿತಿ ಬಿಜೆಪಿಯ ಜೆಪಿ ಪಾರ್ಕ್ ವಾರ್ಡ್ನ ಮಮತಾ ವಾಸುದೇವ್ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿಗೆ ಕಾಂಗ್ರೆಸ್ನ ರಾಜಾಜಿನಗರ ವಾರ್ಡ್ನ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ.
ಎರಡೂ ಸ್ಥಾಯಿ ಸಮಿತಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಇಂದು ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.