ETV Bharat / state

ಕೆರೆ ಮಧ್ಯೆ ರಸ್ತೆ ನಿರ್ಮಾಣ ಪ್ರಕರಣ: ಡಿಸಿಎಂ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಇಂಜಿನಿಯರ್ಸ್​ ಅಮಾನತು

author img

By

Published : Jun 6, 2023, 11:49 AM IST

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಎಂಜಿನಿಯರ್​​ಗಳನ್ನು ಸೋಮವಾರ ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು.

BBMP
ಬಿಬಿಎಂಪಿ

ಬೆಂಗಳೂರು: ಹೊಸಕೆರೆಹಳ್ಳಿ ಕೆರೆಯ ಮಧ್ಯಭಾಗದಲ್ಲಿ ರಸ್ತೆ ನಿರ್ಮಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಇಬ್ಬರು ಅಭಿಯಂತರರನ್ನು ಅಮಾನತು ಮಾಡಲಾಗಿದೆ. ಘನ ತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹೆಚ್.ಎಸ್ ಮೇಘಾ ಹಾಗೂ ಸಹಾಯಕ ಎಂಜಿನಿಯರ್ ಶಿಲ್ಪಾ ಅವರನ್ನು ಅಮಾನತುಗೊಳಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

ಅಧಿಕಾರಿಗಳ ಅಮಾನತಿಗೆ ಡಿಸಿಎಂ ಸೂಚನೆ: ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ಹೊಸಕೆರೆಹಳ್ಳಿ ಕೆರೆಯಲ್ಲಿ ರಸ್ತೆ ನಿರ್ಮಾಣಕ್ಕೆ ಕಾರಣರಾದವರ ಕುರಿತು ಮಾಹಿತಿ ಕೇಳಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದ್ದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.

ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್​ಗಳನ್ನು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿಕೆಶಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ತಾಕೀತು ಮಾಡಿದ್ದರು. ಡಿಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದ್ದರು.

ಈಜಿಪುರ ಮೇಲ್ಸೇತುವೆ ಶೀಘ್ರ ಪೂರ್ಣಗೊಳಿಸಿ: ಇದೇ ವೇಳೆ ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಡಿ. ಕೆ. ಶಿವಕುಮಾರ್ ಅವರು ತುಷಾರ್ ಗಿರಿನಾಥ್ ಅವರಿಗೆ ತಿಳಿಸಿದ್ದರು.

ಅಲ್ಲದೇ ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಜತೆಗೆ ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆಗಳನ್ನು ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಅಳವಡಿಸಲಾಗಿದೆ. ಇದಕ್ಕೆ ಅನುಮತಿ ಕೊಟ್ಟವರು ಯಾರು?, ಒಂದೊಂದು ಪ್ರದೇಶಕ್ಕೆ ಒಂದೊಂದು ನಿಯಮಗಳ ಅನ್ವಯ ಹೇಗೆ?, ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಅವರು ಮಾರ್ಗದರ್ಶನ ನೀಡಿದ್ದರು.

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮನವಿ ಮಾಡಿದ್ದರು. ವಿಧಾನಸೌಧದಲ್ಲಿ ನಡೆದ ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ನೀವು ಯಾವುದೇ ರಾಜಕೀಯ ಪಕ್ಷದವರು ಆಗಿರಬಹುದು. ಬೆಂಗಳೂರಿನ ಅಭಿವೃದ್ಧಿಗೆ ಒಟ್ಟಿಗೆ ಕೆಲಸ ಮಾಡೋಣ. ರಾಜಕೀಯ ಬಿಟ್ಟು ಅಭಿವೃದ್ಧಿ ಮಾಡೋಣ ಎಂದು ಕರೆ ನೀಡಿದ್ದರು.

ಇದನ್ನೂ ಓದಿ: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಬಿಬಿಎಂಪಿ ಅಧಿಕಾರಿಗಳ ಅಮಾನತಿಗೆ ಡಿಕೆಶಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.