ETV Bharat / state

ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾದ ಬಿಬಿಎಂಪಿ: ವೈದ್ಯಕೀಯ ಉಪಕರಣಗಳ ಹಸ್ತಾಂತರ - BBMP News

ಕೋವಿಡ್ ಸಮಯದಲ್ಲಿ ಡಾ.ಜಗಜೀವನ್ ರಾಮ್ ಆಸ್ಪತ್ರೆಯಲ್ಲಿ ಫೀವರ್ ಕ್ಲಿನಿಕ್, ಟ್ರಯಾಜ್ ಸೆಂಟರ್ ಪ್ರಾರಂಭಿಸಲಾಗಿದೆ. ಅಲ್ಲದೆ ಇದೀಗ 30 ಹಾಸಿಗೆ ಸಾಮರ್ಥ್ಯದ ಮಕ್ಕಳ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ.

BBMP
ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾದ ಬಿಬಿಎಂಪಿ
author img

By

Published : Aug 17, 2021, 2:17 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಮಕ್ಕಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿಲ್ಲ. ಬಹುತೇಕ ಮಕ್ಕಳಲ್ಲಿ ಸೌಮ್ಯ ಮತ್ತು ಮಧ್ಯಮ ಲಕ್ಷಣಗಳು ಮಾತ್ರ ಕಂಡುಬರುತ್ತಿದ್ದು, ಮನೆಯಲ್ಲೇ ಗುಣಮುಖರಾಗುತ್ತಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದವರ ಸಂಖ್ಯೆ ತೀರಾ ಕಡಿಮೆಯಿದೆ. ಈ ಸಂಬಂಧ ಈಗಾಗಲೇ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮಕ್ಕಳ ಮೇಲೆ ನಿಗಾವಹಿಸಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಹೇಳಿದರು.

ನಗರದಲ್ಲಿಂದು ಡಾ.ಬಾಬು ಜಗಜೀವನ್ ರಾಮ್ ಸಾರ್ವಜನಿಕ ಆಸ್ಪತ್ರೆಗೆ ವೈದ್ಯಕೀಯ ಉಪಕರಣ(ಮಕ್ಕಳ ಸೌಲಭ್ಯಗಳ ಉಪಯೋಗಕ್ಕಾಗಿ)ಗಳನ್ನು ಶಿಲ್ಪಾ ಸಿಂಗ್ ಮತ್ತು ಪಾರ್ಸಿಯಾ ಸಿಂಗ್ ರಂದೀಪ್ ಅವರಿಗೆ ಹಸ್ತಾಂತರಿಸಿದರು.

BBMP
ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾದ ಬಿಬಿಎಂಪಿ

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಂದೀಪ್, ಕೋವಿಡ್ ಸಮಯದಲ್ಲಿ ಡಾ.ಜಗಜೀವನ್ ರಾಮ್ ಆಸ್ಪತ್ರೆಯಲ್ಲಿ ಫೀವರ್ ಕ್ಲಿನಿಕ್, ಟ್ರಯಾಜ್ ಸೆಂಟರ್ ಪ್ರಾರಂಭಿಸಲಾಗಿದೆ. ಅಲ್ಲದೆ ಇದೀಗ 30 ಹಾಸಿಗೆ ಸಾಮರ್ಥ್ಯದ ಮಕ್ಕಳ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅದರಲ್ಲಿ 2 ಐಸಿಯು ಹಾಸಿಗೆ, 8 ಹೆಚ್​ಡಿಯು ಹಾಸಿಗೆ, 20 ಆಮ್ಲಜನಕಯುಕ್ತ ಹಾಸಿಗೆಗಳ ವ್ಯವಸ್ಥೆಯಿದ್ದು, ಸೌಮ್ಯ ಮತ್ತು ಮಧ್ಯಮ ಕೋವಿಡ್ ಸೋಂಕು ಲಕ್ಷಣಗಳಿರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುವುದು ಎಂದರು.

ಇಂದಿರಾ ಗಾಂಧಿ ಆಸ್ಪತ್ರೆಯ ತಜ್ಞರಿಂದ ಪಾಲಿಕೆಯ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಜಗಜೀವನ್ ರಾಮ್ ಆಸ್ಪತ್ರೆಯಲ್ಲಿ ಆದ್ಯತೆ ಮೇರೆಗೆ ಮಕ್ಕಳಿಗೆ ಚಿಕಿತ್ಸೆ ನೀಡಲಾಗುವುದು. ಗಂಭೀರ ಪರಿಣಾಮ ಬೀರಿದರೂ ಚಿಕಿತ್ಸೆ ನೀಡುವ ವ್ಯವಸ್ಥೆಯಿದ್ದು, ತುಂಬಾ ಗಂಭೀರವಾದಲ್ಲಿ ಉತ್ತಮ ಚಿಕಿತ್ಸೆ ವ್ಯವಸ್ಥೆಯಿರುವ ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಹೇಳಿದರು.

ಡಾ. ಜಗಜೀವನ್ ರಾಮ್​ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರರೋಗಿ ಮತ್ತು ಒಳರೋಗಿ ಸೌಲಭ್ಯಗಳಿದ್ದು, ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಇ.ಎನ್.ಟಿ, ನೇತ್ರ ಚಿಕಿತ್ಸೆ, ಮೂಳೆಚಿಕಿತ್ಸೆ, ದಂತ ಆರೈಕೆ, ಮಕ್ಕಳ ಮತ್ತು ಗರ್ಭಕಂಠದ ಕ್ಯಾನ್ಸರ್‌ಗಾಗಿ ಸ್ಕ್ರೀನಿಂಗ್ ಸೌಲಭ್ಯವಿದೆ. ಎಕ್ಸ್-ರೇ ಘಟಕ ಮತ್ತು ರಕ್ತ ಶೇಖರಣಾ ಘಟಕವನ್ನೊಳಗೊಂಡ ಹೈಟೆಕ್ ಲ್ಯಾಬ್ ಸೌಲಭ್ಯವಿದೆ ಎಂದು ಮಾಹಿತಿ ನೀಡಿದರು.

ವೈದ್ಯಕೀಯ ಉಪಕರಣಗಳ ಹಸ್ತಾಂತರದ ವಿವರ:

  • ಬೈಪಾಸ್ ಯಂತ್ರ - 03
  • ವಿಡಿಯೋ ಲಾರಿಂಗೋಸ್ಕೋಪ್(ಗಂಟಲಿನ ಗೂಡಿನಲ್ಲಿರುವ ದನಿಪೆಟ್ಟಿಗೆಯ ಒಳಭಾಗವನ್ನು ಪರೀಕ್ಷಿಸಲು ಉಪಯೋಗಿಸುವ ಕನ್ನಡಿಯನ್ನೊಳಗೊಂಡಿರುವ ಉಪಕರಣ) 1
  • ಪಿಪಿಇ ಕಿಟ್‌ಗಳು - 300
  • ಸ್ಯಾನಿಟೈಸರ್ - 50 ಲೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.