ETV Bharat / state

ಬಿಬಿಎಂಪಿ ಮೀಸಲಾತಿ ವಿವಾದ: ಸರ್ಕಾರ ಅಭಿಪ್ರಾಯ ನೀಡುವವರೆಗೂ ವೇಳಾಪಟ್ಟಿ ಪ್ರಕಟಿಸದಂತೆ ಹೈಕೋರ್ಟ್​ ಸೂಚನೆ

author img

By

Published : Sep 28, 2022, 10:04 PM IST

Updated : Sep 28, 2022, 10:15 PM IST

ಬಿಬಿಎಂಪಿ ವಾರ್ಡ್​ವಾರು ಮೀಸಲಾತಿ ಮರು ಪರಿಶೀಲಿಸಲು ಸಾಧ್ಯವೇ ಎಂಬುದರ ಕುರಿತು ಬಗ್ಗೆ ಸರ್ಕಾರ ತನ್ನ ಅಭಿಪ್ರಾಯ ನೀಡಿಬೇಕು. ಸರ್ಕಾರದ ಅಭಿಪ್ರಾಯ ನೀಡುವವರೆಗೂ ಚುನಾವಣಾ ವೇಳಾಪಟ್ಟಿ ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

bbmp-ward-wise-reservation-can-be-re-examined-high-court-asked-government
ಬಿಬಿಎಂಪಿ ಮೀಸಲಾತಿ ವಿವಾದ: ಸರ್ಕಾರ ಅಭಿಪ್ರಾಯ ನೀಡುವವರೆಗೂ ವೇಳಾಪಟ್ಟಿ ಪ್ರಕಟಿಸದಂತೆ ಹೈಕೋರ್ಟ್​ ಸೂಚನೆ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಪ್ರಸ್ತುತ ನಿಗದಿ ಪಡಿಸಿರುವ ವಾರ್ಡ್​ವಾರು ಮೀಸಲಾತಿಯನ್ನು ಮರು ಪರಿಶೀಲಿಸಲು ಸಾಧ್ಯವೇ ಎಂಬುದರ ಕುರಿತು ಬಗ್ಗೆ ತನ್ನ ಅಭಿಪ್ರಾಯವನ್ನು ತಿಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ, ಸರ್ಕಾರದ ಅಭಿಪ್ರಾಯ ನೀಡುವವರೆಗೂ ಚುನಾವಣಾ ವೇಳಾಪಟ್ಟಿ ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಉಚ್ಛ ನ್ಯಾಯಾಲಯ ಸೂಚನೆ ನೀಡಿದೆ.

ಈಜಿಪುರದ ಕೆ.ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿ ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಶುಕ್ರವಾರಕ್ಕೆ(ಸೆ.30) ಮುಂದೂಡಿತು. ಚುನಾವಣೆ ವಿಳಂಬವಾಗಬಾರದು ಮತ್ತು ಸುಪ್ರೀಂಕೋರ್ಟ್‌ನ ಆದೇಶದಂತೆ ನಡೆಯಬೇಕು. ಆದಷ್ಟೂ ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆಯಲೇಬೇಕೆಂದು ತಿಳಿಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಇತರ ಹಿಂದುಳಿದ ವರ್ಗ (ಒಬಿಸಿ)ಕ್ಕೆ ಸೂಕ್ತವಾದ ಮೀಸಲು ಕಲ್ಪಿಸಲು ಸರ್ಕಾರ ಸಿದ್ಧವಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ 2 ತಿಂಗಳಲ್ಲಿ ಟ್ರಿಪಲ್ ಟೆಸ್ಟ್ ಪ್ರಕಾರವೇ ಒಬಿಸಿಗೆ ವಾರ್ಡ್‌ವಾರು ಮೀಸಲು ಒದಗಿಸುತ್ತೇವೆ ಎಂದು ವಾದ ಮಂಡಿಸಿದರು.

ಇದಕ್ಕೆ ಆಕ್ಷೇಪಿಸಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲರು, ಬಿಬಿಎಂಪಿ ಅಧಿಕಾರಾವಧಿ ಮುಗಿದು ಎರಡು ವರ್ಷಗಳಾಗಿವೆ. ಸದ್ಯ ಬಿಬಿಎಂಪಿಯನ್ನು ಆಡಳಿತಾಧಿಕಾರಿ ನಡೆಸುತ್ತಿದ್ದಾರೆ. ಅದಕ್ಕೆ ಸಂವಿಧಾನದ ಆಶಯದಂತೆ ಚುನಾವಣೆ ನಡೆಯಬೇಕು. ಒಬಿಸಿ ಮೀಸಲಾತಿ ಕಾರಣಕ್ಕೆ ಚುನಾವಣೆ ನಡೆಸುವುದರಿಂದ ವಿಳಂಬ ಮಾಡುವಂತಿಲ್ಲ. ಸುಪ್ರೀಂಕೋರ್ಟ್ ಕೂಡಲೇ ಚುನಾವಣೆ ನಡೆಸಲು ಸೂಚನೆ ನೀಡಿದೆ. ಹಾಗಾಗಿ ಹಾಲಿ ನಿಗದಿ ಮಾಡಿರುವ ಮೀಸಲು ಪ್ರಕಾರವೇ ಚುನಾವಣೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಅರ್ಜಿದಾರರ ಪರ ವಕೀಲರು ವಾದಿಸಿ, ಒಬಿಸಿ ಮೀಸಲು ನಿಗದಿಗೆ ಸಮೀಕ್ಷೆ ನಡೆಸಿಲ್ಲ. ಆಯೋಗ ಸರ್ವೆ ನಡೆಸದೇ ಮೀಸಲು ನೀಡಿದೆ. ರಾಜಕೀಯ ಹಿಂದುಳಿದಿರುವಿಕೆ ಬಗ್ಗೆಯೂ ಯಾವುದೇ ಸಮೀಕ್ಷೆ ನಡೆಸಿಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಚುನಾವಣಾ ಆಯೋಗ ಟ್ರಿಪಲ್ ಟೆಸ್ಟ್ ಮಾನದಂಡ ಅನುಸರಿಸಿಲ್ಲ. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ವಾರ್ಡ್‌ಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗಿದೆ. ಹಾಗಾಗಿ, ಹೊಸದಾಗಿ ಒಬಿಸಿ ಸರ್ವೆ ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿದರು.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್​ವಾರು ಮೀಸಲು ನಿಗದಿ ಅರ್ಜಿ ವಿಚಾರಣೆ ಮುಂದೂಡಿಕೆ​...

Last Updated : Sep 28, 2022, 10:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.