ETV Bharat / state

'ಬಿಬಿಎಂಪಿ ಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ, ಬಿಜೆಪಿಯ ಮತ್ತೊಂದು ಹೆಸರೇ ಮೋಸ' - Legal Fight Over BBMP Reservations

ಬಿಬಿಎಂಪಿ ಚುನಾವಣೆಗೆ ನಾವು ಸಿದ್ದವಾಗಿದ್ದೇವೆ. ಆದರೆ, ವಾರ್ಡ್​​ಗಳ ಮೀಸಲಾತಿಯಲ್ಲಿ ನಮ್ಮ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸುವ ಹುನ್ನಾರ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.

injustice-in-bbmp-wards-reservation-says-kpcc-president-dk-shivakumar
ಬಿಬಿಎಂಪಿ ಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ, ಬಿಜೆಪಿಗೆ ಮತ್ತೊಂದು ಹೆಸರೇ ಮೋಸ: ಡಿಕೆಶಿ
author img

By

Published : Aug 5, 2022, 4:55 PM IST

ಬೆಂಗಳೂರು: ಬಿಬಿಎಂಪಿ ವಾರ್ಡ್​​ಗಳ ಮೀಸಲಾತಿಯನ್ನು ಬಿಜೆಪಿ ಹಾಗೂ ಅವರ ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಪ್ರಕಟಿಸಲಾಗಿದೆ. ಬಿಜೆಪಿನೇ ಮೋಸ, ಬಿಜೆಪಿಗೆ ಮತ್ತೊಂದು ಹೆಸರೇ ಮೋಸ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬಿಬಿಎಂಪಿ ಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ, ಬಿಜೆಪಿಗೆ ಮತ್ತೊಂದು ಹೆಸರೇ ಮೋಸ: ಡಿಕೆಶಿ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಗೆ ನಾವು ಸಿದ್ದವಾಗಿದ್ದೇವೆ. ಆದರೆ, ಬಿಬಿಎಂಪಿ ಮೀಸಲಾತಿ ಪ್ರಕಟಣೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಅನ್ಯಾಯ ಮಾಡಿದ್ದಾರೆ. ಅಲ್ಲದೇ, ಮಹಿಳೆಯರಿಗೂ ಅನ್ಯಾಯ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸುವ ಹುನ್ನಾರವಿದು ಎಂದು ಕಿಡಿಕಾರಿದರು.

ಈ ಮೀಸಲಾತಿ ವಿಷಯವಾಗಿ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಹೋರಾಟ ಮುಂದುವರಿಸುತ್ತೇವೆ. ಕಾನೂನಾತ್ಮಕ ಹೋರಾಟ ಕೂಡ ಮಾಡುತ್ತೇವೆ. ಬಿಜೆಪಿ ಸರ್ಕಾರ ಮಾಡುವ ಆದೇಶಗಳ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮೀಸಲಾತಿಗೆ ಕಾಂಗ್ರೆಸ್​ ವಿರೋಧ, ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.